ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಹೊಸ ಉಪ ನಿರ್ದೇಶಕರು

By admin
ಯಾದಗಿರಿ : ಯಾದಗಿರಿ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ರುದ್ರಗೌಡ ಮಾಲಿ ಪಾಟೀಲ ಅವರು ಹೊಸ ಉಪ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅವರು 29-04-2025 ರಂದು ಯಾದಗಿರಿ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಉಪ ನಿರ್ದೇಶಕರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ದೀರ್ಘಕಾಲದ ಅನುಭವ ಹೊಂದಿರುವ ರುದ್ರಗೌಡ ಮಾಲಿ ಪಾಟೀಲ ಅವರು ಮುಲತ ಶಹಾಪುರ ತಾಲೂಕಿನ ಶಿಂಗನಹಳ್ಳಿ ಗ್ರಾಮದವರಾದ ಇವರು ಯಾದಗಿರಿ ಜಿಲ್ಲೆಯ ವಿವಿಧ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸತತ 29ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಅವರು, ಜಿಲ್ಲೆಯಲ್ಲಿ ಪದವಿ ಪೂರ್ವ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಬದ್ಧರಾಗಿದ್ದಾರೆ.

ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣಾಧಿಕಾರಿ, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ರುದ್ರಗೌಡ ಮಾಲಿ ಪಾಟೀಲ ಅವರು ಮಾತನಾಡುತ್ತಾ, “ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ತಕ್ಷಣ ಪ್ರಯತ್ನ ಕೈಗೊಳ್ಳಲಾಗುತ್ತದೆ. ಗುಣಮಟ್ಟದ ಶಿಕ್ಷಣ ಮತ್ತು ಶಿಸ್ತಿನ ಆಡಳಿತ ನಮ್ಮ ಗುರಿಯಾಗಿರುತ್ತದೆ” ಎಂದು ತಿಳಿಸಿದರು.