
ಕಾಂಗ್ರೆಸ್ ಸುಡುವ ಮನೆ ಎಂದಿದ್ದು ಅಂಬೇಡ್ಕರ್ ವಿಚಾರ ಸಂಕಿರಣ : ಮಹೇಂದ್ರ ಕೌತಾಳ
ಯಾದಗಿರಿ : ಕಾಂಗ್ರೆಸ್ ಒಂದು ಸುಡುವ ಮನೆ ಎಚ್ಚರ ಎಂದು ಬಿಜೆಪಿ ಹೇಳಿಲ್ಲ, ಹೇಳಿದ್ದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸ್ವತಃ ಹೇಳಿದ್ದರು ಎಂದು ರಾಜ್ಯ ಅಂಬೇಡ್ಕರ್ ವಿಚಾರ ಯಾತ್ರೆ ಉಸ್ತುವಾರಿ ಹಾಗೂ ಬಿಜೆಪಿ ರಾಜ್ಯ ಎಸ್.ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಯಾತ್ರಾ ಕಾರ್ಯಕ್ರಮದಲ್ಲಿ, ಮಾತನಾಡಿದ ಅವರು ಕಾಂಗ್ರೆಸ್ ಒಂದು ಸುಡುವ ಮನೆ ಎಚ್ಚರವೆಂದು ಬಾಬಾ ಸಾಹೇಬರು ಹೇಳಿದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಗುಡುಗಿದರು.೧೯೪೮ ಏ.೨೫ ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ರಾಷ್ಟ್ರೀಯ ಸಮ್ಮೇಳನದಲ್ಲಿ ಹೇಳಿದ್ದರು ಆದರೆ ಕಾಂಗ್ರೆಸ್ ನಾಯಕರು ಅಂಬೇಡ್ಕರ್ ಬದುಕಿದ್ದಾಗ ಕಡೆಗಣಿಸಿದರು, ಅವಮಾನಿಸಿದರು, ನಿರ್ಲಕ್ಷಿಸಿದರ, ರಾಜಕೀಯವಾಗಿ ಮುಗಿಸಲು ಹೊರಟಿದ್ದರು. ಅಂಬೇಡ್ಕರ್ ಕಾಲವಾದ ನಂತರ ಲಜ್ಜೆಗೇಡಿ ಕಾಂಗ್ರೆಸ್ ನಾಯಕರು ಯಾವುದೇ ಸಂಕೋಚ, ಮಾನವಿಲ್ಲದೆ ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಮತ್ತು ಕಲಬುರ್ಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಮಾತನಾಡಿದ ಅವರು ಅಂಬೇಡ್ಕರ್‌ರನ್ನು ಸಂವಿಧಾನ ರಚನಾ ಸಮಿತಿ ಚುನಾವಣೆಯಲ್ಲಿ ನೆಹರು ಸೋಲಿಸಿದರು. ಅಂಬೇಡ್ಕರ್ ಬದುಕಿದ್ದಾಗ ಹೆಜ್ಜೆ ಹೆಜ್ಜೆಗೆ ನೋವು ಕೊಟ್ಟರು, ಇದೀಗ ಅಂಬೇಡ್ಕರ್ ಹಾಗೂ ಸಂವಿಧಾನ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಬಿಜೆಪಿ ಎಂದೂ ಅಂಬೇಡ್ಕರ್ ಹಾಗೂ ಸಂವಿಧಾನಕ್ಕೆ ಅಗೌರವ ತೋರಿಲ್ಲ ಎಂದು ಹೇಳಿದರು…
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಮಾತನಾಡದ ಅವರು ಅಂಬೇಡ್ಕರ್‌ರನ್ನು ಸಂವಿಧಾನ ರಚನಾ ಸಮಿತಿ ಚುನಾವಣೆಯಲ್ಲಿ ನೆಹರು ಸೋಲಿಸಿದರು. ಅಂಬೇಡ್ಕರ್ ಬದುಕಿದ್ದಾಗ ಹೆಜ್ಜೆ ಹೆಜ್ಜೆಗೆ ನೋವು ಕೊಟ್ಟರು, ಇದೀಗ ಅಂಬೇಡ್ಕರ್ ಹಾಗೂ ಸಂವಿಧಾನ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಎಂದೂ ಅಂಬೇಡ್ಕರ್ ಹಾಗೂ ಸಂವಿಧಾನಕ್ಕೆ ಅಗೌರವ ತೋರಿಲ್ಲ ಎಂದು ಪ್ರತಿಪಾದಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಮತ್ತು ನಗರಸಭೆ ಅಧ್ಯಕ್ಷೆ ಕು.ಲಲಿತಾ ಅನಪುರ, ಹಿರಿಯ ಮುಖಂಡೆ ನಾಗರತ್ನ ಕುಪ್ಪಿ, ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ಖಂಡಪ್ಪ ದಾಸನ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ಮತ್ತು ಪರುಶುರಾಮ ಕುರಕುಂದಿ ಹಾಗೂ ಮೇಲಪ್ಪ ಗುಳಗಿ, ಜಿಲ್ಲಾ ವಕ್ತಾರ ಹಣಮಂತ ಇಟಗಿ,ಜಿಲ್ಲಾ ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ಭೀಮಾಶಂಕರ ಬಿಲ್ಲವ, ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಆರ್ ಸಾಹುಕಾರ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚೌವ್ಹಾಣ್,ಎಸ್.ಟಿ ಮೋರ್ಚಾ ಜಿಲ್ಲಾಧ್ಯಕ್ಷ ಚಂದಪ್ಪ ರಾಮಸಮುದ್ರ, ಒಬಿಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕಂದುಕುರ,ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ,ರವಿ ಮುದ್ನಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು….
