
ಯಾದಗಿರಿ : ರಾಜ್ಯದಲ್ಲಿರುವ ಪಾಕಿಸ್ತಾನ ಪ್ರಜೆಗಳನ್ನು ಗುರುತಿಸಿ ಗಡಿಪಾರು ಮಾಡದೇ ಇರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ. ಸರ್ಕಾರದ ಈ ಧ್ವಂದ ನೀತಿ ಖಂಡಿಸಿ ಇಂದು ಮೇ 6 ರಂದು ಬಿಜೆಪಿಯಿಂದ ಪ್ರತಿಭಟನೆ
ನಡೆಸಲಾಗುವುದುಷಎಂದು – ಪಕ್ಷದ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಹೇಳಿದ್ದಾರೆ.
ಪಹಲ್ಲಾಮ್ ಘಟನೆಯ ನಂತರ ಪಾಕಿಸ್ತಾನದೊಂದಿಗಿನ ಎಲ್ಲಾ ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸಿ ಹಾಗೂ ಪಾಕಿಸ್ತಾನಿ ಪ್ರಜೆಗಳಿಗೆ ಭಾರತಕ್ಕೆ ಬರುವ ವೀಸಾ ನಿಲ್ಲಿಸಿದೆ ಹಾಗೂ ನಿಯಮಿತ ಸಮಯದಲ್ಲಿ ಭಾರತದಲ್ಲಿರುವಎಲ್ಲಾ ಪಾಕಿಸ್ತಾನಿ ಪ್ರಜೆಗಳು ದೀರ್ಫಾವದಿ ಹಾಗೂ ರಾಜತಾಂತ್ರಿಕ ಮತ್ತು ಅದಿಕೃತ ವೀಸಾಗಳನ್ನು ಹೊರತುಪಡಿಸಿ ಪಾಕಿಸ್ತಾನಿ ಪ್ರಜೆಗಳಿಗೆ ಭಾರತದ ವೀಸಾ ವಿತರಣೆಯನ್ನು ಅಮಾನತ್ತಿನಲ್ಲಿಡಲಾಗಿದೆ.
ಆದರೆ ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ದೂರಿದ್ದಾರೆ. ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಗಡಿಪಾರು ಮಾಡಲು ರಾಷ್ಟೀಯ ನಿರ್ದೇಶನವಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಇನ್ನೂ ಸೂಕ್ತ ಕ್ರಮ ಕೈಗೊಳ್ಳದಿರುವುದು ಖಂಡನೀಯ, ಈ ಹಿನ್ನಲೆಯಲ್ಲಿ ಮೇ 6 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಮುಂದುಗಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಪ್ರಕಟಣೆಯ ಮೂಕ ತಿಳಿಸಿದ್ದಾರೆ.
