
ಯಾದಗಿರಿ : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಜಿ ಹಾಗೂ ಜನಪ್ರಿಯ ಸಚಿವರಾದ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೀಡುತ್ತಿರುವ ಹೇಳಿಕೆಯನ್ನು ಕಾಂಗ್ರೆಸ್ ಯುವ ಮುಖಂಡ ಅನಿಲ್ ಕುಮಾರ್. ಟಿ. ಹೇಡಗಿಮದ್ರಿ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ನಂತರ ಬರಿ ಮಲ್ಲಿಕಾರ್ಜುನ್ ಖರ್ಗೆ ಮತ್ತು ಅವರ ಕುಟುಂಬದ ವಿರುದ್ಧ ಮಾತನಾಡುವುದನ್ನು ಬಿಟ್ಟು ಬೇರೆ ಯಾವ ವಿಷಯವನ್ನು ಕೂಡಾ ಮಾತನಾಡುತ್ತಿಲ್ಲ ಇದು ಉದ್ದೇಶಪೂರ್ವಕವಾಗಿ ಛಲವಾದಿ ನಾರಾಯಣ ಸ್ವಾಮಿಯವರನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಿ ಖರ್ಗೆ ಜೀ ಕುಟುಂಬದ ವಿರುದ್ಧ ಮಾತನಾಡುವುದಕ್ಕೆ ಅವರನ್ನು ನೇಮಕ ಮಾಡಿದಂತೆ ಕಾಣುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಜನಪ್ರಿಯ ಸಚಿವ ಪ್ರಿಯಾಂಕ ಖರ್ಗೆ ಅವರು ಯಾವುದೇ ನಾಯಕರ ಬಗ್ಗೆ ಕೀಳಾಗಿ ಎಂದು ಮಾತನಾಡಿಲ್ಲ ರಾಜ್ಯದ ಜನರ ಅಭಿವೃದ್ಧಿಯ ಹಿತದೃಷ್ಟಿಯಿಂದ ಹಲವು ಪ್ರಶ್ನೆಗಳನ್ನು ಕೇಳಿ ಹೊರಾಟ ಮಾಡಿದ್ದಾರೆ ಆ ಕಾರಣಕ್ಕಾಗಿಯೇ ಅವರನ್ನು ನಾಯಿಗೆ ಹೋಲಿಕೆ ಮಾಡೋದು ಎಷ್ಟರಮಟ್ಟಿಗೆ ಸರಿ ಮತ್ತು ಅವಾಚ್ಛ ಶಬ್ದಗಳನ್ನು ಬಳಸುವುದು ಸರಿಯಲ್ಲ ಸಚಿವ ಪ್ರಿಯಾಂಕ್ ಖರ್ಗೆ ಅವರು ಭ್ರಷ್ಟಾಚಾರ ರಹಿತವಾಗಿ ಮತ್ತು ರಾಜ್ಯದಲ್ಲಿ ಉತ್ತಮವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ.
ಈ ಹಿಂದೆ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಂತ ಸಮಯದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಪಿ ಎಸ್ ಐ ಹಗರಣ ಮತ್ತು ಬಿಟ್ ಕಾಯಿನ್ ಹಗರಣ ಇನ್ನಿತರ ಬಿಜೆಪಿ ಭ್ರಷ್ಟಾಚಾರದ ಕುರಿತು ರಾಜ್ಯದ ಜನತೆಗೆ ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆ ಎಳೆಯುವ ಪ್ರಾಮಾಣಿಕ ಪ್ರಯತ್ನವನ್ನು ಸಚಿವ ಪ್ರಿಯಾಂಕ ಖರ್ಗೆ ರವರು ಮಾಡಿದ್ದಾರೆ
ಆ ದ್ವೇಷವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಬಿಜೆಪಿ ನಾಯಕರು ಛಲವಾದಿ ನಾರಾಯಣಸ್ವಾಮಿಯವರನ್ನು ಚೂ ಬಿಟ್ಟು ಬಿಟ್ಟು ಖರ್ಗೆ ಕುಟುಂಬದ ವಿರುದ್ಧ ಹಗುರವಾಗಿ ಮಾತನಾಡುವುದಕ್ಕೆ ಮುಂದೆ ಬಿಟ್ಟಿದ್ದಾರೆ, ಚಲವಾದಿ ನಾರಾಯಣ ಸ್ವಾಮಿಯವರು ಪದೇ ಪದೇ ಖರ್ಗೆ ಕುಟುಂಬದ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ ಇದನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ ಮುಂದಿನ ದಿನಗಳಲ್ಲಿಯೂ ಕೂಡ ಇದೇ ರೀತಿಯಾದ ಹೇಳಿಕೆಗಳನ್ನು ನೀಡಿದ್ದೆ ಆದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬಿಜೆಪಿ ಪಕ್ಷದ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಕಾಂಗ್ರೆಸ್ ಯುವ ಮುಖಂಡ ಅನಿಲ್ ಕುಮಾರ್. ಟಿ ಹೇಡಗಿಮದ್ರಿ ಎಚ್ಚರಿಸಿದ್ದಾರೆ.
