ಅರಸು ಜನ್ಮದಿನಾಚರಣೆ: ಪೂರ್ವಸಿದ್ಧತಾ ಸೂಚನೆ

ಯಾದಗಿರಿ:2025ರ ಆಗಸ್ಟ್ 20 ರಂದು ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ ಆಚರಣೆಯ ಹಿನ್ನೆಲೆ ಪೂರ್ವಸಿದ್ಧತಾ ಸಭೆಯು ಯಾದಗಿರಿ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರ ಅಧ್ಯಕ್ಷತೆಯಲ್ಲಿ 2025ರ ಆಗಸ್ಟ್ 8 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಅವರು ತಿಳಿಸಿದ್ದಾರೆ.ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಪೂರ್ವಸಿದ್ಧತಾ ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
