ವಾಲ್ಮೀಕಿ ಸಮಾಜದ ಬೃಹತ್ ಪ್ರತಿಭಟನೆ ಇಂದು

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ವಾಲ್ಮೀಕಿ ಸಮಾಜದ ಪ್ರಮುಖ ಬೇಡಿಕೆಗಳು ಹಾಗೂ ನಕಲಿ ಜಾತಿ ಪ್ರಮಾಣ ಪತ್ರಗಳು ತಡೆಯಲು ನಗರದ ತಹಶಿಲ್ದಾರರ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಇಂದು ಬೃಹತ್ ಪ್ರಮಾಣ ರ್ಯಾಲಿ ಮುಖಾಂತರ ಹೋರಾಟ ಮಾಡಲಾಗುತ್ತದೆ ಎಂದು ಉತ್ತರ ಕರ್ನಾಟಕ ವಾಲ್ಮೀಕಿ ಸಮಾಜದ ಅಧ್ಯಕ್ಷ ಮಾರೆಪ್ಪ ನಾಯಕ ಮಗ್ದಂಪುರ ತಿಳಿಸಿದ್ದಾರೆ.

 

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಈ ಬೃಹತ್ ಪ್ರಮಾಣದ ಹೋರಾಟದಲ್ಲಿ ದಾವಣಗೇರ ವಾಲ್ಮೀಕಿ ಗುರು ಪೀಠದ ಜಗದ್ಗುರು ಪ್ರಸನ್ನನಂದ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಈ ಹೋರಾಟದಲ್ಲಿ ಉತ್ತರ ಕರ್ನಾಟಕ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಹಾಗೂ ಯಾದಗಿರಿ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳ ವಾಲ್ಮೀಕಿ ಸಮಾಜದ ಭಾಂದವರು ಸುಮಾರು ಐದು ಸಾವಿರ ಜನರು ಈ ಹೋರಾಟದಲ್ಲಿ ಭಾಗವಸಲಿದ್ದಾರೆ ಎಂದು ತಿಳಿಸಿದ್ದಾರೆ.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಸಚಿವರನ್ನು ನೇಮಿಸದೆ ನಮ್ಮ ಸಮಾಜಕ್ಕೆ ಬರುವ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಆಕಿ ತುಳಿತಕ್ಕೆ ಓಳಗಾದ ಸಮಾಜವನ್ನು ಮೂಲೆ ಗುಂಪು ಮಾಡುತ್ತಿರು ಸರ್ಕಾರದ ವಿರುದ್ಧ ಬೃಹತ್ ಹೋರಾಟವನ್ನು ಆಯೋಜಿಸಿದ್ದೇವೆ. ಪರಿಶಿಷ್ಟ ಪಂಗಡದ ಸಮಾಜದ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಮುಖಾಂತರ ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.