ವಾಲ್ಮೀಕಿ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ

By admin

Contents
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿಪರಿಶಿಷ್ಟ ಪಂಗಡ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರವನ್ನು ತೆಗೆದುಕೊಳ್ಳುವವರ ವಿರುದ್ಧ ಮತ್ತು ನೀಡುವ ಅಧಿಕಾರಿಗಳ ವಿರುದ್ಧ ಇಂದು ಬೃಹತ್ ಹೋರಾಟ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದು, ವಾಲ್ಮೀಕಿ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು‌ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಜಿಲ್ಲಾಧ್ಯಕ್ಷ ಗೌಡಪ್ಪಗೌಡ ಆಲ್ದಾಳ ಮನವಿ ಮಾಡಿದ್ದಾರೆ. ಈ ಹೋರಾಟದಲ್ಲಿ ಶ್ರೀ ಶ್ರೀ ಶ್ರೀ ಜಗದ್ಗುರು ಪರಮ ಪೂಜ್ಯ ಪ್ರಸನ್ನಾ ನಂದ ಸ್ವಾಮೀಜಿ ಹಾಗೂ ಗೊಲಪಲ್ಲಿಯ ವಾಲ್ಮೀಕಿ ಮಠದ ಶ್ರೀಗಳಾದ ಶ್ರೀ ಶ್ರೀಶ್ರೀ ವರದಾನದೇಶ್ವರ ಮಹಾ ಸ್ವಾಮಿಗಳು ಮತ್ತು ಉತ್ತರ ಕರ್ನಾಕದ ವಾಲ್ಮೀಕಿ ಸಮಾಜದ ಅಧ್ಯಕ್ಷರು ವಿವಿಧ ಜಿಲ್ಲೆಗಳಿಂದ ವಾಲ್ಮೀಕಿ ಮತ್ತು ಸಮಾಜದ ಜಿಲ್ಲಾ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ಮತ್ತು ಚಳುವಳಿ ರಾಜಣ್ಣ ಸೇರಿದಂತೆ ಅನೇಕ ಪ್ರಗತಿಪರ ಚಿಂತಕರು ಸಾಹಿತಿಗಳು ಮತ್ತು ಸಂಶೋಧಕರು ಹಾಗು ವಿವಿಧ ರಾಜಕೀಯ ಮುಖಂಡರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದ್ದರಿಂದ ಜಿಲ್ಲೆ ಎಲ್ಲ ತಾಲೂಕು, ಗ್ರಾಮೀಣ ಪ್ರದೇಶಗಳ ಸಮಾಜದ ಬಂಧುಗಳು ಪಾಲ್ಗೊಂಡು ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ತಾಲೂಕು ಅಧ್ಯಕ್ಷ ಮರೆಪ್ಪ ಪ್ಯಾಟಿ, ಪ್ರಧಾನ ಕಾರ್ಯದರ್ಶಿ ಹಣಮಂತರಾಯ ದೊರೆ ಟೋಕಪೂರ್‌ ಸಹ ತಿಳಿಸಿದ್ದಾರೆ.

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಪರಿಶಿಷ್ಟ ಪಂಗಡ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ
ಪತ್ರವನ್ನು ತೆಗೆದುಕೊಳ್ಳುವವರ ವಿರುದ್ಧ ಮತ್ತು ನೀಡುವ ಅಧಿಕಾರಿಗಳ ವಿರುದ್ಧ ಇಂದು ಬೃಹತ್ ಹೋರಾಟ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದು, ವಾಲ್ಮೀಕಿ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು‌ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಜಿಲ್ಲಾಧ್ಯಕ್ಷ ಗೌಡಪ್ಪಗೌಡ ಆಲ್ದಾಳ ಮನವಿ ಮಾಡಿದ್ದಾರೆ. ಈ ಹೋರಾಟದಲ್ಲಿ ಶ್ರೀ ಶ್ರೀ ಶ್ರೀ ಜಗದ್ಗುರು ಪರಮ ಪೂಜ್ಯ ಪ್ರಸನ್ನಾ ನಂದ ಸ್ವಾಮೀಜಿ ಹಾಗೂ ಗೊಲಪಲ್ಲಿಯ ವಾಲ್ಮೀಕಿ ಮಠದ ಶ್ರೀಗಳಾದ ಶ್ರೀ ಶ್ರೀಶ್ರೀ ವರದಾನದೇಶ್ವರ ಮಹಾ ಸ್ವಾಮಿಗಳು ಮತ್ತು ಉತ್ತರ ಕರ್ನಾಕದ ವಾಲ್ಮೀಕಿ ಸಮಾಜದ ಅಧ್ಯಕ್ಷರು ವಿವಿಧ ಜಿಲ್ಲೆಗಳಿಂದ ವಾಲ್ಮೀಕಿ ಮತ್ತು ಸಮಾಜದ ಜಿಲ್ಲಾ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ಮತ್ತು ಚಳುವಳಿ ರಾಜಣ್ಣ ಸೇರಿದಂತೆ ಅನೇಕ ಪ್ರಗತಿಪರ ಚಿಂತಕರು ಸಾಹಿತಿಗಳು ಮತ್ತು ಸಂಶೋಧಕರು ಹಾಗು ವಿವಿಧ ರಾಜಕೀಯ ಮುಖಂಡರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದ್ದರಿಂದ ಜಿಲ್ಲೆ ಎಲ್ಲ ತಾಲೂಕು, ಗ್ರಾಮೀಣ ಪ್ರದೇಶಗಳ ಸಮಾಜದ ಬಂಧುಗಳು ಪಾಲ್ಗೊಂಡು ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ತಾಲೂಕು ಅಧ್ಯಕ್ಷ ಮರೆಪ್ಪ ಪ್ಯಾಟಿ, ಪ್ರಧಾನ ಕಾರ್ಯದರ್ಶಿ ಹಣಮಂತರಾಯ ದೊರೆ ಟೋಕಪೂರ್‌ ಸಹ ತಿಳಿಸಿದ್ದಾರೆ.