“ಕಾಳಗಿ |ಕುರುಬಗೊಂಡ ಸಮಾಜ : ಸಿ.ಎಂ ಸಿದ್ದರಾಮಯ್ಯಗೆ ಅಭಿನಂದನಾ ಸಮಾರಂಭ 17ರಂದು”

• ಸೆಕ್ಯೂಲರ್ ವಾಯ್ಸ್ ಡೆಸ್ಕ್ ನ್ಯೂಸ್ :
ಕಾಳಗಿ : ಕಲಬುರಗಿಯ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಸೆ.17ರಂದು ಮಧ್ಯಾಹ್ನ 12:30ಕ್ಕೆ ಬೃಹತ್ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುರುಬಗೊಂಡ ಸಮಾಜದಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕುರುಬ ಸಮಾಜದ ತಾಲ್ಲೂಕು ಅಧ್ಯಕ್ಷ ರೇವಣಸಿದ್ದಪ್ಪ ಅರಣಕಲ ಅವರು ತಿಳಿಸಿದ್ದಾರೆ.
ಬುಧುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಸಿರುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಪ್ರದೇಶ ಕುರುಬಗೊಂಡ ಸಂಘ ಜಿಲ್ಲಾ ಶಾಖೆ ಕಲಬುರಗಿ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘದ ಸಂಯುಕ್ತಶ್ರಯದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣ ಮತ್ತು ನಗರದ ಸಿಟಿ ಬಸ್ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಾಮಕರಣ ಸಮಾರಂಭದ ಪ್ರಯುಕ್ತ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೃಹತ್ ಅಭಿನಂದನಾ ಸಮಾರಂಭವು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಕಾಳಗಿ ತಾಲೂಕಿನಿಂದ ಎರಡು ಸಾವಿರ ಜನ ಸೇರಲಿದ್ದು ಜಿಲ್ಲೆಯಲ್ಲಿ ನಡೆಯುವ ಸಮಾರಂಭದಲ್ಲಿ ಇಪ್ಪತ್ತು ಸಾವಿರಕ್ಕೂ ಹೆಚ್ಚು ಜನ ಸೇರಲಿದ್ದಾರೆ ಎಂದರು. ಈ ಐತಿಹಾಸಿಕ ಸಮಾರಂಭಕ್ಕೆ ಸಮಾಜದ ಪ್ರತಿಯೊಬ್ಬರು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದರು.
ಸುದ್ದಿಗೊಷ್ಟಿಯಲ್ಲಿ ಮುಖಂಡರಾದ ಗುರುನಾಥ ಪೂಜಾರಿ, ಭಗವಂತ ಗೌಡ ಪಾಟೀಲ, ಹನುಮಂತ ಚಂದನಕೇರಿ,ಸಿದ್ದಣ್ಣ ಕೆಳಗಿನಮನಿ, ಅರ್ಜುನ ಪೂಜಾರಿ, ಯಲ್ಲಾಲಿಂಗ ಬೆಂಕಿ, ವಿಠಲ ಪೂಜಾರಿ,ರೇವಣ್ಣ ರವಿಗೊಂಡ, ನಾಗಪ್ಪ ಹಲಚೇರಿ,ಕಿರಣ ಪೂಜಾರಿ, ಅರ್ಜುನ ಪೂಜಾರಿ,ಹಣಮಂತ ಕಂದಗೋಳ, ಮಾಳಪ್ಪ ಪೂಜಾರಿ, ಸಿದ್ದಪ್ಪ ಪೂಜಾರಿ, ಶರಣಬಸಪ್ಪ ಪಾಟೀಲ ಉಪಸ್ಥಿತರಿದ್ದರು.
|
|
