“ಯಾದಗಿರಿ| ನೂತನ ಉಪರಾಷ್ಟ್ರಪತಿಯಾಗಿ ಸಿ. ಪಿ.ರಾಧಾಕೃಷ್ಣನ್ ಆಯ್ಕೆ: ಮಹೇಶರಡ್ಡಿ ಮುದ್ನಾಳ್ ಸಂತಸ”
• ಸೆಕ್ಯುಲರ್ ವಾಯ್ಸ್ ಡೆಸ್ಕ್ ನ್ಯೂಸ್ :
ಯಾದಗಿರಿ : ದೇಶದ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಕ್ಕೆ ಬಿಜೆಪಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬುಧುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಓರ್ವ ಹಿರಿಯ ಪ್ರತಿಭಾವಂತ ವ್ಯಕ್ತಿಯನ್ನು ಆಯ್ಕೆ ಮಾಡಿದ್ದು ನನಗೆ ವೈಯಕ್ತಿಕ ಸಂತಸ ತಂದಿದೆ ಎಂದರು.
ಜನಸಂಘ, ಆರ್ ಆರ್ ಎಸ್ ಸಂಘಟನೆಯಿಂದ ಜನಸೇವೆ ಮತ್ತು ರಾಜಕೀಯಕ್ಕೆ ಕಾಲಿಟ್ಟ ಅವರು, ಎರಡು ಸಲ ಸಂಸದರಾಗಿ ಮತ್ತು ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದು, ಈಗ ಅವರಿಂದ ದೇಶದ ಅಭಿವೃದ್ಧಿಗೆ ಇನ್ನಷ್ಟು ಸಹಕಾರಿಯಾಗಲಿದೆ ಎಂದರು.