LOCAL NEWS : “ಕೊಪ್ಪಳ| ಕರಾಟೆ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ವರ್ಷಾ ಪ್ಯಾಟಿ ಪ್ರಥಮ ಸ್ಥಾನ”

By admin

“ಕೊಪ್ಪಳ| ಕರಾಟೆ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ವರ್ಷಾ ಪ್ಯಾಟಿ ಪ್ರಥಮ ಸ್ಥಾನ”

• ಸೆಕ್ಯುಲರ್ ವಾಯ್ಸ್ ಡೆಸ್ಕ್ ನ್ಯೂಸ್ :

ಕೊಪ್ಪಳ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮುದ್ದಾಬಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ವರ್ಷಾ ಪ್ಯಾಟಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಜಿಲ್ಲಾ ಪಂಚಾಯತ್ ಕೊಪ್ಪಳ, ಶಾಲಾ ಶಿಕ್ಷಣ ಇಲಾಖೆ ಹಾಗೂ ನ್ಯಾಷನಲ್ ಸ್ಪಿರಿಟ್ ಅಕಾಡೆಮಿ ಇವರ ಸಹಯೋಗದಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ. ಬಸವರಾಜ, ಕರಾಟೆ ತರಬೇತಿದಾರ ಮಹಾಂತೇಶ ಮಂಗಳೂರು, ಕರಾಟೆ ಪಟುವಿನ ಪಾಲಕ ಶಿವಾನಂದ ಪ್ಯಾಟಿ ಸೇರಿದಂತೆ ಇತರರು ಪ್ರಶಸ್ತಿ ನೀಡಿ ಅಭಿನಂದಿಸಿದರು.