“ಯಾದಗಿರಿ| ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಪ್ರಯುಕ್ತ : ಬಿಜೆಪಿ ಯಿಂದ ಕಾರ್ಯಾಗಾರ ಮತ್ತು ಸೇವಾ ಪಾಕ್ಷಿಕ ಅಭಿಯಾನಕ್ಕೆ ಚಾಲನೆ”
• ಸೆಕ್ಯೂಲರ್ ವಾಯ್ಸ್ ಡೆಸ್ಕ್ ನ್ಯೂಸ್ :
ಯಾದಗಿರಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆಯ ಪ್ರಯುಕ್ತ ಬಿಜೆಪಿಯಿಂದ ದೇಶಾದಾದ್ಯಂತ ‘ಸೇವಾ ಪಾಕ್ಷಿಕ’ ಸಾಮಾಜಿಕ ಸೇವಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಅವರು ತಿಳಿಸಿದರು.
ಶನಿವಾರ ಬಿಜೆಪಿ ಕಚೇರಿಯಲ್ಲಿ ನಡೆದ ನಗರ ಮತ್ತು ಗ್ರಾಮೀಣ ಮಂಡಲ ಬಿಜೆಪಿ ವತಿಯಿಂದ ಕಾರ್ಯಾಗಾರ ಮತ್ತು ಸೇವಾ ಪಾಕ್ಷಿಕ’ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು , ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆ. 17 ರಿಂದ ಮಹಾತ್ಮಗಾಂಧಿ ರವರ ಜನ್ಮದಿನವಾದ ಅ.2 ರವರೆಗೆ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿದೆ ಎಂದರು.
ಸೇವಾ ಪಕ್ಷಿಕಾ ಅಭಿಯಾನವು ಸೆ. 17 ರಿಂದ ಅ.2 ರವರೆಗೆ ದೇಶವ್ಯಾಪಿಯಾಗಿ ನಡೆಯಲಿರುವ ಸೇವಾ ಕಾರ್ಯಕ್ರಮಗಳ ಸರಣಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಜೊತೆಗೆ ಮಹಾತ್ಮಗಾಂಧಿಯವರ ಜನ್ಮದಿನವನ್ನು ಸ್ಮರಿಸುವ ಉದ್ದೇಶ ಹೊಂದಿದೆ. ‘ಸೇವೆ, ಸುಶಾಸನ ಮತ್ತು ಗರೀಬ್ ಕಲ್ಯಾಣ’ ಎಂಬ ಪಕ್ಷದ ಪ್ರಮುಖ ತತ್ವದ ಆಧಾರದ ಮೇಲೆ ‘ಸೇವೆ ಪರಮ ಧರ್ಮ’ ಎಂಬ ಮನೋಭಾವದಿಂದ ಅಭಿಯಾನದಡಿಯಲ್ಲಿ ರಕ್ತದಾನ ಶಿಬಿರಗಳು, ಸ್ವಚ್ಛತಾ ಅಭಿಯಾನಗಳು, ಆರೋಗ್ಯ ತಪಾಸಣೆ ಶಿಬಿರಗಳು, ವೃಕ್ಷಾರೋಪಣಾ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಜನಸೇವಾ ಕಾರ್ಯಗಳನ್ನು ನಡೆಸಲಾಗುತ್ತದೆ. ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ, ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರುಶುರಾಮ ಕುರಕುಂದಿ, ಜಿಲ್ಲಾ ಕಾರ್ಯದರ್ಶಿ ಪರ್ವತರಡ್ಡಿ ಬೆಂಡಗೊಂಬಳ್ಳಿ,ಸೇವಾ ಪಾಕ್ಷಿಕ ಜಿಲ್ಲಾ ಸಂಚಾಲಕ ಸುರೇಶ್ ಅಂಬಿಗೇರ,ಸಹ ಸಂಚಾಲಕ ಗೋವಿಂದಪ್ಪ ಖಾನಾಪುರ,ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ್ ಕಾಡಂನೊರ,ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ,ನಗರ ಮಂಡಲ ಸಂಚಾಲಕ ಅಜೇಯ್ ಮಡ್ಡಿ, ಸಹ ಸಂಚಾಲಕ ಶ್ರೀಕಾಂತ್ ಸುಂಗಲ್ಕರ್, ಮಲ್ಲಿಕಾರ್ಜುನ ಕಟ್ಟಿಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು, ಗ್ರಾಮೀಣ ಮಂಡಲ ಪ್ರಧಾನ ಕಾರ್ಯದರ್ಶಿ ಶಿವು ಕೊಂಕಲ್ ಸ್ವಾಗತಿಸಿದರು,ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ವಂದಿಸಿದರು.