“ಕೊಪ್ಪಳ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಹೆಚ್ಚು ಮತದಾನ ಮಾಡಿದಾಗ ಭಾರತ ಸಂವಿಧಾನಕ್ಕೆ ಗೌರವ ಕೊಟ್ಟಂತಾಗುತ್ತದೆ- ಸಚಿವ ಶಿವರಾಜ ಎಸ್. ತಂಗಡಗಿ ಅಭಿಮತ”
Contents
“ಕೊಪ್ಪಳ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಹೆಚ್ಚು ಮತದಾನ ಮಾಡಿದಾಗ ಭಾರತ ಸಂವಿಧಾನಕ್ಕೆ ಗೌರವ ಕೊಟ್ಟಂತಾಗುತ್ತದೆ- ಸಚಿವ ಶಿವರಾಜ ಎಸ್. ತಂಗಡಗಿ ಅಭಿಮತ”• ಸೆಕ್ಯೂಲರ್ ವಾಯ್ಸ್ ಡೆಸ್ಕ್ ನ್ಯೂಸ್ : ಕೊಪ್ಪಳ : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಅತ್ಯಂತ ಮಹತ್ವವಿದ್ದು, ಪ್ರತಿಯೊಬ್ಬರು ಶೇ.100 ರಷ್ಟು ಮತದಾನ ಮಾಡಿದಾಗ ನಾವು ಭಾರತ ಸಂವಿಧಾನಕ್ಕೆ ಗೌರವ ಕೊಟ್ಟಂತಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಹೇಳಿದರು.ಅವರು ಸೋಮವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಪ್ರತಿ ವರ್ಷ ಒಂದೊಂದು ಶೀರ್ಷಿಕೆಯಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದೆ. “ನನ್ನ ಮತ ನನ್ನ ಹಕ್ಕು” ಎಂಬ ಘೋಷವಾಕ್ಯದೊಂದಿಗೆ ಈ ವರ್ಷ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ದಿನವು ಬಹಳ ವಿಶೇಷವಾದ ದಿನವಾಗಿದೆ ಎಂದರು.ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯು ಸುಂದರ ಮತ್ತು ಅದ್ಬುತವಾಗಿದೆ. ಪ್ರಜಾಪ್ರಭುತ್ವದಲ್ಲಿ ಟೀಕೆ ಟಿಪ್ಪಣೆಗಳಿಗೆ ಅವಕಾಶವಿದೆ. ಆದರೆ, ಇಂದು ವೈಯಕ್ತಿಕವಾಗಿ ಟೀಕೆ ಟಿಪ್ಪಣೆಗಳಾಗುತ್ತಿವೆ. ದೇಶದಲ್ಲಿ ಜಾತಿ, ಧರ್ಮಗಳ ಬಗ್ಗೆ ಚರ್ಚೆಯಾಗದೇ ಅಭಿವೃದ್ಧಿಗಳ ಬಗ್ಗೆ ಚರ್ಚೆಗಳಾಗಬೇಕು. ಮತದಾನದ ಹಕ್ಕು ಎಲ್ಲರ ಜವಾಬ್ದಾರಿಯಾಗಿದ್ದು, 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ತಮ್ಮ ಮತ ಚಲಾಯಿಸಬೇಕು. ಸಂವಿಧಾನ, ಪ್ರಜಾಪ್ರಭುತ್ವದ ಅರಿವು ಎಲ್ಲರಿಗೂ ಅತ್ಯವಶ್ಯಕವಾಗಿದೆ ಎಂದು ಹೇಳಿದರು.ರಾ.ಬ.ಕೊ.ವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಮಾತನಾಡಿ, ಡಾ.ಬಿ.ಆರ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನ ಈ ದೇಶಕ್ಕೆ ಕೊಟ್ಟಿರುವ ಒಂದು ಮಹತ್ವದ ಕೊಡುಗೆಯಾಗಿದೆ. ದೇಶದಲ್ಲಿ ಸಾವಿರಾರು ಜಾತಿ-ಜನಾಂಗಗಳು ಇದ್ದರೂ ಪ್ರತಿಯೊಬ್ಬರು ಸಹೋದರ ಭ್ರಾತೃತ್ವದಿಂದ ಬಾಳುತ್ತಿದ್ದಾರೆ ಎಂದು ಹೇಳಿದರು.ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಮಾತನಾಡಿ, ಭಾರತವು ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಜನರಿಂದ ಜನರಿಗಾಗಿ ಜನರೆ ನಡೆಸುವ ಸರ್ಕಾರವಾಗಿದೆ. ಈ ಸಂದರ್ಭದಲ್ಲಿ ನಮ್ಮ ಸ್ವಾತಂತ್ರ‍್ಯ ಹೋರಾಟಗಾರರನ್ನು ನಾವು ಸ್ಮರಿಸಬೇಕಿದೆ. ಅಂಬೇಡ್ಕರ್ ಸಂವಿಧಾನದ ಆಶಯವನ್ನು ನಾವೆಲ್ಲರೂ ಪಾಲನೆ ಮಾಡಬೇಕಿದೆ ಎಂದರು.ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಮಾತನಾಡಿದರು. ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು
ಕೊಪ್ಪಳ ಗವಿಸಿದ್ದೇಶ್ವರ ಕಾಲೇಜಿನ ಉಪನ್ಯಾಸಕರಾದ ಬಸವರಾಜ ಹಿರೇಮಠ ಅವರು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ವಿಶೇಷ ಉಪನ್ಯಾಸ ನೀಡಿದರು.ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕರಾದ ಅಜ್ಜಪ್ಪ ಸೊಗಲದ ಅವರು ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ವಿವಿಧ ಶಾಲಾ-ಕಾಲೇಜುಗಳ ಮಕ್ಕಳಿಗೆ ಹಮ್ಮಿಕೊಂಡ ಚಿತ್ರಕಲಾ ಸ್ಪರ್ಧೆ, ಪೋಟೋಗ್ರಫಿ ಹಾಗೂ ಭಾಷಣ ಸ್ಪರ್ಧೆಗಳ ಕರಪತ್ರಗಳನ್ನು ಇದೇ ಸಂದರ್ಭದಲ್ಲಿ ಗಣ್ಯರಿಂದ ಬಿಡುಗಡೆಗೊಳಿಸಲಾಯಿತು.ಈ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕರಾದ ಅಜ್ಜಪ್ಪ ಸೊಗಲದ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಜಾಗೃತಿ ಜಾಥಾ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಅಂದು ಬೆಳಿಗ್ಗೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಿಂದ ಜಿಲ್ಲಾಡಳಿತ ಭವನದವರೆಗೆ ಸೈಕಲ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

• ಸೆಕ್ಯೂಲರ್ ವಾಯ್ಸ್ ಡೆಸ್ಕ್ ನ್ಯೂಸ್ :
ಕೊಪ್ಪಳ : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಅತ್ಯಂತ ಮಹತ್ವವಿದ್ದು, ಪ್ರತಿಯೊಬ್ಬರು ಶೇ.100 ರಷ್ಟು ಮತದಾನ ಮಾಡಿದಾಗ ನಾವು ಭಾರತ ಸಂವಿಧಾನಕ್ಕೆ ಗೌರವ ಕೊಟ್ಟಂತಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಹೇಳಿದರು.
ಅವರು ಸೋಮವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಪ್ರತಿ ವರ್ಷ ಒಂದೊಂದು ಶೀರ್ಷಿಕೆಯಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದೆ. “ನನ್ನ ಮತ ನನ್ನ ಹಕ್ಕು” ಎಂಬ ಘೋಷವಾಕ್ಯದೊಂದಿಗೆ ಈ ವರ್ಷ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ದಿನವು ಬಹಳ ವಿಶೇಷವಾದ ದಿನವಾಗಿದೆ ಎಂದರು.
ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯು ಸುಂದರ ಮತ್ತು ಅದ್ಬುತವಾಗಿದೆ. ಪ್ರಜಾಪ್ರಭುತ್ವದಲ್ಲಿ ಟೀಕೆ ಟಿಪ್ಪಣೆಗಳಿಗೆ ಅವಕಾಶವಿದೆ. ಆದರೆ, ಇಂದು ವೈಯಕ್ತಿಕವಾಗಿ ಟೀಕೆ ಟಿಪ್ಪಣೆಗಳಾಗುತ್ತಿವೆ. ದೇಶದಲ್ಲಿ ಜಾತಿ, ಧರ್ಮಗಳ ಬಗ್ಗೆ ಚರ್ಚೆಯಾಗದೇ ಅಭಿವೃದ್ಧಿಗಳ ಬಗ್ಗೆ ಚರ್ಚೆಗಳಾಗಬೇಕು. ಮತದಾನದ ಹಕ್ಕು ಎಲ್ಲರ ಜವಾಬ್ದಾರಿಯಾಗಿದ್ದು, 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ತಮ್ಮ ಮತ ಚಲಾಯಿಸಬೇಕು. ಸಂವಿಧಾನ, ಪ್ರಜಾಪ್ರಭುತ್ವದ ಅರಿವು ಎಲ್ಲರಿಗೂ ಅತ್ಯವಶ್ಯಕವಾಗಿದೆ ಎಂದು ಹೇಳಿದರು.
ರಾ.ಬ.ಕೊ.ವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಮಾತನಾಡಿ, ಡಾ.ಬಿ.ಆರ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನ ಈ ದೇಶಕ್ಕೆ ಕೊಟ್ಟಿರುವ ಒಂದು ಮಹತ್ವದ ಕೊಡುಗೆಯಾಗಿದೆ. ದೇಶದಲ್ಲಿ ಸಾವಿರಾರು ಜಾತಿ-ಜನಾಂಗಗಳು ಇದ್ದರೂ ಪ್ರತಿಯೊಬ್ಬರು ಸಹೋದರ ಭ್ರಾತೃತ್ವದಿಂದ ಬಾಳುತ್ತಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಮಾತನಾಡಿ, ಭಾರತವು ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಜನರಿಂದ ಜನರಿಗಾಗಿ ಜನರೆ ನಡೆಸುವ ಸರ್ಕಾರವಾಗಿದೆ. ಈ ಸಂದರ್ಭದಲ್ಲಿ ನಮ್ಮ ಸ್ವಾತಂತ್ರ‍್ಯ ಹೋರಾಟಗಾರರನ್ನು ನಾವು ಸ್ಮರಿಸಬೇಕಿದೆ. ಅಂಬೇಡ್ಕರ್ ಸಂವಿಧಾನದ ಆಶಯವನ್ನು ನಾವೆಲ್ಲರೂ ಪಾಲನೆ ಮಾಡಬೇಕಿದೆ ಎಂದರು.
ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಮಾತನಾಡಿದರು. ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು
ಕೊಪ್ಪಳ ಗವಿಸಿದ್ದೇಶ್ವರ ಕಾಲೇಜಿನ ಉಪನ್ಯಾಸಕರಾದ ಬಸವರಾಜ ಹಿರೇಮಠ ಅವರು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕೊಪ್ಪಳ ಗವಿಸಿದ್ದೇಶ್ವರ ಕಾಲೇಜಿನ ಉಪನ್ಯಾಸಕರಾದ ಬಸವರಾಜ ಹಿರೇಮಠ ಅವರು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕರಾದ ಅಜ್ಜಪ್ಪ ಸೊಗಲದ ಅವರು ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ವಿವಿಧ ಶಾಲಾ-ಕಾಲೇಜುಗಳ ಮಕ್ಕಳಿಗೆ ಹಮ್ಮಿಕೊಂಡ ಚಿತ್ರಕಲಾ ಸ್ಪರ್ಧೆ, ಪೋಟೋಗ್ರಫಿ ಹಾಗೂ ಭಾಷಣ ಸ್ಪರ್ಧೆಗಳ ಕರಪತ್ರಗಳನ್ನು ಇದೇ ಸಂದರ್ಭದಲ್ಲಿ ಗಣ್ಯರಿಂದ ಬಿಡುಗಡೆಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕರಾದ ಅಜ್ಜಪ್ಪ ಸೊಗಲದ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

