
ಕಲಬುರಗಿ: ಡಿಸೆಂಬರ್ 02 ರಂದು ಮಾಜಿ ಪ್ರಧಾನಮಂತ್ರಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಹೆಚ್.ಡಿ ದೇವೇಗೌಡ ಅವರು ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಹಾಗೂ ಡಿಸೆಂಬರ್ 08ರಂದು ಮಾಜಿ ಮುಖ್ಯಮಂತ್ರಿಗಳು, ಪಕ್ಷದ ಹಿರಿಯ ನಾಯ ಶ್ರೀ ಹೆಚ್.ಡಿ ಕುಮಾರಸ್ವಾಮಿ ರವರು, ಕಲಬುರಗಿ ಜಿಲ್ಲೆ ಅಫಜಲಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆ ಬಂಡೆಪ್ಪ ಖಾಶೆಂಪುರ್ ಅವರು, ಇಂದು ಕಲಬುರಗಿ ನಗರದ ಜೆಡಿಎಸ್ ಕಚೇರಿಯಲ್ಲಿ ಕಲಬುರಗಿ ವಿಭಾಗ ಮಟ್ಟದ ನಾಯಕರ ಪೂರ್ವಭಾವಿ ಸಭೆ ನಡೆಸಿ, ಕಾರ್ಯಕ್ರಮ ಯಶಸ್ವಿಗೊಳಿಸುವ ಬಗ್ಗೆ ಚರ್ಚಿಸಿದರು.
ಸಭೆಯಲ್ಲಿ ಕಲಬುರಗಿ, ಬೀದರ್, ವಿಜಯಪುರ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳ ಜೆಡಿಎಸ್ ಜಿಲ್ಲಾಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರು, ವಿವಿಧ ವಿಧಾನಸಭಾ ಕ್ಷೇತ್ರಗಳ ಮುಖಂಡರು, ಪ್ರಮುಖರು ಸೇರಿದಂತೆ ಅನೇಕರಿದ್ದರು.
