“ಹುಮನಾಬಾದ್| ಶಿಕ್ಷಕರ ದಿನಾಚರಣೆ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ.!
“ದೇಶದ ಅಭಿವೃದ್ದಿ ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಶಿಕ್ಷಕರಿಂದ ಮಾತ್ರ ಸಾಧ್ಯ- ಪ್ರಾಂಶುಪಾಲ ಶಿವರಾಜ ಕಲ್ಲಗೊಂಡ ಅಭಿಮತ”
Contents
“ಹುಮನಾಬಾದ್| ಶಿಕ್ಷಕರ ದಿನಾಚರಣೆ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ.!“ದೇಶದ ಅಭಿವೃದ್ದಿ ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಶಿಕ್ಷಕರಿಂದ ಮಾತ್ರ ಸಾಧ್ಯ- ಪ್ರಾಂಶುಪಾಲ ಶಿವರಾಜ ಕಲ್ಲಗೊಂಡ ಅಭಿಮತ”• ಸೆಕ್ಯೂಲರ್ ವಾಯ್ಸ್ ಡೆಸ್ಕ್ ನ್ಯೂಸ್ : ಹುಮನಾಬಾದ್ : ದೇಶದ ಸಮಗ್ರ ಅಭಿವೃದ್ಧಿಗೆ ಹಾಗೂ ಉತ್ತಮ ಸಮಾಜದ ನಿರ್ಮಾಣ ಮಾಡುವುದಕ್ಕೆ ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಶಿಕ್ಷಕನಿಂದ ಮಾತ್ರ ಸಾಧ್ಯ ಎಂದು ಬಸವ ತೀರ್ಥ ವಿದ್ಯಾಪೀಠ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶಿವರಾಜ ಕಲ್ಲಗೊಂಡ ಅವರು ಹೇಳಿದರು.ಪಟ್ಟಣದ ಬಸವ ತೀರ್ಥ ವಿದ್ಯಾಪೀಠ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ ಶಿಕ್ಷಕರ ದಿನಾಚರಣೆ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡುವ ಉದ್ದೇಶದಿಂದ ಶಿಕ್ಷಕರು ಉತ್ತಮ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಬೆಳೆಸುತ್ತಾರೆ. ಪ್ರಾಥಮಿಕ ಹಂತದಲ್ಲಿ ಪಡೆದ ಎಲ್ಲಾ ರೀತಿಯ ಶಿಕ್ಷಣ ಮಕ್ಕಳಿಗೆ ಭವಿಷ್ಯದಲ್ಲಿ ಸಹಕಾರಿಯಾಗುತ್ತದೆ. ಸಮಾಜದಲ್ಲಿ ಗುರುವಿನ ಸ್ಥಾನಮಾನಕ್ಕೆ ಹೆಚ್ಚಿನ ಗೌರವ ದೊರೆಯುತ್ತದೆ ಎಂದು ತಿಳಿಸಿದರು.ಬಿಟಿವಿಪಿ ಕಾಲೇಜಿನ ಉಪನ್ಯಾಸಕ ಹಣಮಂತ ಮಡಿವಾಳ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ, ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ದೇಶದ ಅಭಿವೃದ್ಧಿಗೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಶಿಕ್ಷಕರೇ ಸಮಾಜದ ನಿಜವಾದ ರಕ್ಷಕರು ಎಂದು ಕೊಂಡಾಡಿದರು.ಬಿಟಿವಿಪಿ ಕಾಲೇಜಿನ ಉಪನ್ಯಾಸಕ ಅಲಿಯಾರ ಖಾನ್ ಮಾತನಾಡಿ, ಕಾಲೇಜಿನಲ್ಲಿ ತರಗತಿ ಕೋಣೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಬೇರುಮಟ್ಟದ ಶಿಕ್ಷಣ ನೀಡಿದರೆ ವಿದ್ಯಾರ್ಥಿಗಳ ಬದುಕಿಗೆ ಸ್ಫೂರ್ತಿ ಸಿಗುತ್ತದೆ. ವಿದ್ಯಾರ್ಥಿಗಳು ಕೂಡಾ ನಿರಂತರವಾಗಿ ಅಧ್ಯಯನ ಮಾಡುವ ಮೂಲಕ ಉತ್ತಮ ಸಾಧನೆ ಮಾಡಬೇಕು ಎಂದರು.ವಿದ್ಯಾರ್ಥಿಗಳಿಂದ ಉಪನ್ಯಾಸಕರಿಗಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ಉಪನ್ಯಾಸಕರಿಗೆ ಬಹುಮಾನ ವಿತರಿಸಿದ ಬಳಿಕ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಹೂಗುಚ್ಛ ನೀಡಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಮಹಾನಂದ ಹತ್ತಿ, ವಿಶ್ವನಾಥ, ಹರೀಶ ಡಾಂಗೆ, ಅಭಿಷೇಕ, ರೇಖಾ, ನಂದಿನಿ, ರೇಖಾ, ಕಾಂಚನಾ, ನಿಖಿತಾ, ವೈಷ್ಣವಿ, ಅಭಿ ಬೋರಂಪಳ್ಳಿ, ಸುಷ್ಮಿತಾ, ಸ್ನೇಹಾ, ರೇಖಾ ಇದ್ದರು. ದೇವಿದಾಸ ಸ್ವಾಗತಿಸಿದರು. ಅಂಕಿತಾ ಚಂದನಹಳ್ಳಿ ನಿರೂಪಿಸಿ ವಂದಿಸಿದರು.

