SHAKING NEWS : “ವಿಜಯನಗರ| ಗ್ಯಾಸ್ ಸಿಲಿಂಡರ್ ಸ್ಫೋಟ : ಒಂದೇ ಕುಟುಂಬದ 8 ಮಂದಿಗೆ ಗಂಭೀರ ಗಾಯ”

By admin

” ವಿಜಯನಗರ| ಗ್ಯಾಸ್ ಸಿಲಿಂಡರ್ ಸ್ಫೋಟ : ಒಂದೇ ಕುಟುಂಬದ 8 ಮಂದಿಗೆ ಗಂಭೀರ ಗಾಯ”

 

Contents
” ವಿಜಯನಗರ| ಗ್ಯಾಸ್ ಸಿಲಿಂಡರ್ ಸ್ಫೋಟ : ಒಂದೇ ಕುಟುಂಬದ 8 ಮಂದಿಗೆ ಗಂಭೀರ ಗಾಯ”• ಸೆಕ್ಯೂಲರ್‌ ವಾಯ್ಸ್‌ ನ್ಯೂಸ್‌ : ವಿಜಯನಗರ : ಗ್ಯಾಸ್‌  ಸಿಲಿಂಡರ್  ಭೀಕರವಾಗಿ ಸ್ಫೋಟಗೊಂಡ  ಘಟನೆ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಶನಿವಾರ ಬೆಳ್ಳಿಗ್ಗೆ ನಡೆದಿದೆ.ಹೊಸಪೇಟೆ–ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ವಕೀಲ ಹಾಲಪ್ಪ ಅವರಿಗೆ ಸೇರಿದ ಮನೆಯಲ್ಲಿ 10ಜನ ಮಲಗಿರುವಾಗ ಬೆಳಗ್ಗಿನ ಜಾವ ಘಟನೆ ಸಂಭವಿಸಿದೆ ಎನ್ನಲಾಗಿದೆ.ಮನೆಯ ಸದಸ್ಯೆ ಕವಿತಾ ನವರಾತ್ರಿ ಪೂಜೆಗೆ ಹೋಗುವ ಅವಸರದಲ್ಲಿ ಸಿಲಿಂಡರ್ ಆನ್ ಮಾಡಿ ಹೋಗಿದ್ದರು.ಬೆಳಿಗ್ಗೆ ಅಡುಗೆ ಅನಿಲ ಸೋರಿಕೆಯ ವಾಸನೆ ಬರುತ್ತಿತ್ತು ಎಂದು ಹೇಳಲಾಗುತ್ತಿದೆ. ನಂತರ ಗ್ಯಾಸ್ ಆನ್ ಮಾಡಿದಾಗ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸಿಲಿಂಡರ್ ಸ್ಫೋಟದಲ್ಲಿ ಹಾಲಪ್ಪ (42), ಕವಿತಾ (32), ಗಂಗಮ್ಮ (63), ಮೈಲಾರಪ್ಪ (48), ಹಾಗೂ ಮಲ್ಲಮ್ಮ ಸೇರಿ 8 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರ ತಿಳಿಸಿದರು.ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಸಂಡೂರು ತಾಲೂಕಿನ ತೋರಣಗಲ್ಲು ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬೆಳಿಗ್ಗೆ ಸ್ಟವ್‌ ಹಚ್ಚಲು ಕವಿತಾ ಯತ್ನಿಸಿದಾಗ ಏಕಾ ಏಕಿ ಬೆಂಕಿ ಹತ್ತಿಕೊಂಡಿತು. ಭೀಕರ ಸ್ಫೋಟದ ತೀವ್ರತೆಗೆ ಮನೆಯ ಗೋಡೆಯೇ ಕುಸಿದಿದೆ. ಸ್ಫೋಟದಿಂದ ಮನೆ ಶೇ 50ರಷ್ಟು ಧ್ವಂಸವಾಗಿದೆ. ಮನೆಯಲ್ಲಿದ್ದ ಎಂಟು ಮಂದಿ ಗಾಯಗೊಂಡಿದ್ದಾರೆ.ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಗಾಯಾಳುಗಳನ್ನು ಜಿಂದಾಲ್ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ ಎನ್ನಲಾಗಿದೆ.

• ಸೆಕ್ಯೂಲರ್‌ ವಾಯ್ಸ್‌ ನ್ಯೂಸ್‌ : 

ವಿಜಯನಗರ : ಗ್ಯಾಸ್‌  ಸಿಲಿಂಡರ್  ಭೀಕರವಾಗಿ ಸ್ಫೋಟಗೊಂಡ  ಘಟನೆ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಶನಿವಾರ ಬೆಳ್ಳಿಗ್ಗೆ ನಡೆದಿದೆ.

ಹೊಸಪೇಟೆ–ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ವಕೀಲ ಹಾಲಪ್ಪ ಅವರಿಗೆ ಸೇರಿದ ಮನೆಯಲ್ಲಿ 10ಜನ ಮಲಗಿರುವಾಗ ಬೆಳಗ್ಗಿನ ಜಾವ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಮನೆಯ ಸದಸ್ಯೆ ಕವಿತಾ ನವರಾತ್ರಿ ಪೂಜೆಗೆ ಹೋಗುವ ಅವಸರದಲ್ಲಿ ಸಿಲಿಂಡರ್ ಆನ್ ಮಾಡಿ ಹೋಗಿದ್ದರು.ಬೆಳಿಗ್ಗೆ ಅಡುಗೆ ಅನಿಲ ಸೋರಿಕೆಯ ವಾಸನೆ ಬರುತ್ತಿತ್ತು ಎಂದು ಹೇಳಲಾಗುತ್ತಿದೆ. ನಂತರ ಗ್ಯಾಸ್ ಆನ್ ಮಾಡಿದಾಗ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

 ಸಿಲಿಂಡರ್ ಸ್ಫೋಟದಲ್ಲಿ ಹಾಲಪ್ಪ (42), ಕವಿತಾ (32), ಗಂಗಮ್ಮ (63), ಮೈಲಾರಪ್ಪ (48), ಹಾಗೂ ಮಲ್ಲಮ್ಮ ಸೇರಿ 8 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರ ತಿಳಿಸಿದರು.

ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಸಂಡೂರು ತಾಲೂಕಿನ ತೋರಣಗಲ್ಲು ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಿಗ್ಗೆ ಸ್ಟವ್‌ ಹಚ್ಚಲು ಕವಿತಾ ಯತ್ನಿಸಿದಾಗ ಏಕಾ ಏಕಿ ಬೆಂಕಿ ಹತ್ತಿಕೊಂಡಿತು. ಭೀಕರ ಸ್ಫೋಟದ ತೀವ್ರತೆಗೆ ಮನೆಯ ಗೋಡೆಯೇ ಕುಸಿದಿದೆ. ಸ್ಫೋಟದಿಂದ ಮನೆ ಶೇ 50ರಷ್ಟು ಧ್ವಂಸವಾಗಿದೆ. ಮನೆಯಲ್ಲಿದ್ದ ಎಂಟು ಮಂದಿ ಗಾಯಗೊಂಡಿದ್ದಾರೆ.

ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಗಾಯಾಳುಗಳನ್ನು ಜಿಂದಾಲ್ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ ಎನ್ನಲಾಗಿದೆ.