ACCIDENT NEWS : ಕೊಪ್ಪಳ| ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ಹೊರಟ್ಟಿದ್ದ ಭಕ್ತರ ಮೇಲೆ ಹರಿದ ಖಾಸಗಿ ಸ್ಲೀಪರ್ ಬಸ್, ಮೂವರು ಸಾವು!”

By admin

“ಕೊಪ್ಪಳ| ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ಹೊರಟ್ಟಿದ ಭಕ್ತರ ಮೇಲೆ ಹರಿದ ಖಾಸಗಿ ಸ್ಲೀಪರ್ ಬಸ್ : ಮೂವರು ಸಾವು!”

• ಸೆಕ್ಯೂಲರ್‌ ವಾಯ್ಸ್‌ ನ್ಯೂಸ್‌ ಕೊಪ್ಪಳ : 

ಕೊಪ್ಪಳ : ತಾಲೂಕಿನ ಹುಲಿಗಿ ಗ್ರಾಮದ  ಪ್ರಸಿದ್ದ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ಮೃತಪಟ್ಟ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ರಾತ್ರಿ ವೇಳೆ ನಡೆದಿದೆ ಎಂದು ತಿಳಿದು ಬಂದಿದೆ. 

ಅಪಘಾತದಲ್ಲಿ ಶರಣಪ್ಪ (19) ಪ್ರಕಾಶ್ (25) ಅನ್ನಪೂರ್ಣ (40) ಎಂಬ ಮೂವರು ಪಾದಯಾತ್ರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರು ಗದಗ ಜಿಲ್ಲೆಯ ರೋಣ ತಾಲೂಕಿನ ತಳ್ಳಿಹಾಳ ಗ್ರಾಮದವರಾಗಿದ್ದು ಎಂದು ಗುರುತಿಸಲಾಗಿದೆ.

ಹುಲಿಗೆಮ್ಮ ದೇವಾಲಯಕ್ಕೆ ಪಾದಯಾತ್ರೆಗೆ ಮೂಲಕ ತೆರಳುತ್ತಿದ್ದರು. ಈ ಘಟನೆಯಲ್ಲಿ ನಾಲ್ವರು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಂದಗಿ ಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ನಿಯಂತ್ರಣ ತಪ್ಪಿ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತರ ಮೇಲೆ ಹರಿದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ವೇಳೆ ಭಕ್ತರು ದೇವಾಲಯದಿಂದ ಕೇವಲ ಮೂರು ಗಂಟೆಗಳ ನಡಿಗೆಯ ದೂರದಲ್ಲಿದ್ದರು.

• ಬಸ್​ ಚಾಲಕನ ಬಂಧನ :

ಮುನಿರಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಖಾಸಗಿ ಬಸ್ ಚಾಲಕನನ್ನ ಪೊಲೀಸರು ಬಂಧಿಸಿದ್ದಾರೆ.

ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ರಾಮ್ ಅರಸಿದ್ದಿ  ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.