“ಗಂಗಾವತಿ |ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಭೀಕರ ಹತ್ಯೆ ಪ್ರಕರಣ : ಕೊಲೆ ಮಾಡಿದ ನಾಲ್ವರು ದುಷ್ಕರ್ಮಿಗಳು ಪೊಲೀಸರಿಗೆ ಶರಣು.!”
Contents
“ಗಂಗಾವತಿ |ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಭೀಕರ ಹತ್ಯೆ ಪ್ರಕರಣ : ಕೊಲೆ ಮಾಡಿದ ನಾಲ್ವರು ದುಷ್ಕರ್ಮಿಗಳು ಪೊಲೀಸರಿಗೆ ಶರಣು.!”• ಸೆಕ್ಯುಲರ್ ವಾಯ್ಸ್ ನ್ಯೂಸ್ ಗಂಗಾವತಿ: ಗಂಗಾವತಿ : ನಗರವು ಬುಧುವಾರದ ಮುಂಜಾನೆಯ ನಿದ್ದೆಯಿಂದ ಏಳುವ ಮೊದಲೇ ಜನ ಶಾಕ್ ಆಗಿ ಬೆಚ್ಚಿ ಬಿದ್ದಿದ್ದಾರೆ. ಮಧ್ಯರಾತ್ರಿ ದುಷ್ಕರ್ಮಿಗಳು ಬೀಸಿದ ಮಚ್ಚಿನೇಟಿಗೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಹತ್ಯೆಯಾಗಿರುವದು ತಿಳಿದು ಬಂದಿದೆ. ಕೊಪ್ಪಳ ಜಿಲ್ಲೆಯಲ್ಲಿ ಮತ್ತೊಮ್ಮೆ ಮಚ್ಚು ಲಾಂಗುಗಳ ಅಬ್ಬರ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.ಇಲ್ಲಿನ ಲೀಲಾವತಿ ಆಸ್ಪತ್ರೆಯ ಬಳಿ ಮಧ್ಯರಾತ್ರಿ ಸ್ಕೂಟಿಯಲ್ಲಿ ಹೊರಟಿದ್ದ ವೆಂಕಟೇಶನನ್ನು ಕಾರಿನಲ್ಲಿ ಹಿಂಬಾಲಿಸಿದ್ದ ದುಷ್ಕರ್ಮಿಗಳ ತಂಡ ಕಾರಿನಿಂದ ಗುದ್ದಿ ವೆಂಕಟೇಶನನ್ನು ನೆಲಕ್ಕೆ ಕೆಡವಿ. ನಂತರ ನಾಲ್ಕು ಜನರ ತಂಡ ಮಚ್ಚು, ಲಾಂಗುಗಳಿಂದ ಆತನ ಮೇಲೆ ಹಲ್ಲೆ ಮಾಡಿ ಕತ್ತರಿಸಿ ಹಾಕಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎನ್ನಲಾಗಿದೆ.ಹತ್ಯೆ ಮಾಡಿದ ದುಷ್ಕರ್ಮಿಗಳು ವಿಜಯ್, ಭೀಮಾ, ಸಲೀಂ , ಮೈಲಾರಿ ಎಂಬ ಯುವಕರು ಕಂಪ್ಲಿ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.ಸದ್ಯಕ್ಕೆ ನಗರದಲ್ಲೇ ಠಿಕಾಣಿ ಹೂಡಿರುವ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ರಾಮ್.ಎಲ್. ಅರಸಿದ್ದಿ ಅವರು ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡ ಪಾಟೀಲ್ ಅವರ ನೇತೃತ್ವದಲ್ಲಿ ತಂಡ ರಚಿಸಿ ಪ್ರಕರಣದ ತನಿಖೆ ನಡೆಸಿದ್ದಾರೆ.ಕೆಲ ತಿಂಗಳ ಹಿಂದೆ ಕೊಪ್ಪಳದ ಗಡಿಯಾರ ಕಂಬ ವೃತ್ತದಲ್ಲಿ ನಡೆದ ಕೊಲೆಯು ರಾಜಕೀಯ ತಿರುವು ಪಡೆದುಕೊಂಡು ರಾಜ್ಯದ ಗಮನ ಸೆಳೆದಿತ್ತು.ಕಳೆದ ಕೆಲ ವರ್ಷಗಳಿಂದ ಇಂತಹ ಪ್ರಕರಣಗಳು ಹೆಚ್ಚಾಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ಹೆಚ್ಚಿಸಿದೆ. ಇನ್ನಾದರೂ ಪೋಲಿಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕಿದೆ ಎಂಬುದು ಪ್ರಜ್ಞಾವಂತರ ಒತ್ತಾಯವಾಗಿದೆ.

