“ವಿಜಯನಗರ|ಅ.23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ : ಸರಳವಾಗಿ ಆಚರಿಸಲು ಎಡಿಸಿ ಇ.ಬಾಲಕೃಷ್ಣ ಸೂಚನೆ”
• ಸೆಕ್ಯುಲರ್ ವಾಯ್ಸ್ ನ್ಯೂಸ್ ವಿಜಯನಗರ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಅ. 23 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳ ಆಚರಣೆಗೆ ಸಿದ್ಧತೆ ವಹಿಸಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಸೋಮವಾರ ಅವರು ಮಾತನಾಡಿದರು.
ಕಿತ್ತೂರು ರಾಣಿ ಚೆನ್ನಮ್ಮನವರು ಅಪ್ರತಿಮ ದೇಶಭಕ್ತೆ ಇವರ ಜಯಂತಿಯನ್ನು ಅ.23 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತದಿಂದ ಸರಳವಾಗಿ ಆಚರಿಸಲಾಗುವುದು.
ನಗರದ ಪುತ್ಥಳಿಗೆ ಮಾಲಾರ್ಪಣೆ ವೇಳೆ ಸಮುದಾಯದ ಎಲ್ಲಾ ಮುಖಂಡರು ಭಾಗವಹಿಸಲು ಕ್ರಮ ವಹಿಸಲಾಗುವುದು. ಎಲ್ಲಾರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ. ಕೊಟ್ಟೂರು ಮಠದಲ್ಲಿ ನಡೆಯುವ ಕಾರ್ಯಕ್ರವನ್ನು ದಿನಾಂಕ ನಿಗಧಿಪಡಿಸಿ ಸಮುದಾಯದ ಸಹಭಾಗಿತ್ವದಲ್ಲಿ ಜಿಲ್ಲಾಡಳಿತ ಸಹಕಾರದೊಂದಿಗೆ ಅದ್ದೂರಿ ಆಚರಣೆಗೆ ಸಿದ್ಧತೆ ನಡೆಸಲಾಗುವುದು ಎಂದರು.
ಪ್ರಮುಖರಾದ ಮಧುರ ಚನ್ನಶಾಸ್ತಿç ಅವರು ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮಾಜಿ ಕುರಿತು ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಪ್ರಬಂಧ, ವಿಶೇಷ ಉಪನ್ಯಾಸಗಳನ್ನು ಆಯೋಜಿಸುವ ಮೂಲಕ ಅವರನ್ನು ಸ್ಮರಿಸುವ ಕಾರ್ಯಕ್ಕೆ ಜಿಲ್ಲಾಡಳಿತದಿಂದ ಎಲ್ಲಾ ಶಾಲೆಗಳಿಗೆ ಆದೇಶಿಸಬೇಕು. ಆಯಾ ಶಾಲೆಗಳಲ್ಲಿ ವಿಜೇತರಾದ ಮಕ್ಕಳಿಗೆ ಸಮುದಾಯದಿಂದಲೇ ಬಹುಮಾನಗಳನ್ನು ವಿತರಿಸಲಾಗುತ್ತದೆ ಎಂದರು.
ಈ ವೇಳೆ ಸಭೆಯಲ್ಲಿ ಪ್ರಮುಖರಾದ ಅಶ್ವಿನ್ ಕೊತಂಬರಿ, ಶಿವಪುತ್ರಪ್ಪ, ಒಪ್ಪತೆಪ್ಪ, ಅಂಬರೀಷ್ ಅಂಗಡಿ, ಲೋಕೆಶ್ ಔರಧಿ, ನೀಲಕಂಠ ಗೌಡ್ರು, ಕೆ.ಕೊಟ್ರೇಶಪ್ಪ, ಎಲ್.ಬಸವರಾಜ, ಸೋಮಶೇಖರ್ ಹಾಜರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ್, ಶರಣಪ್ಪ ಹಳ್ಳಿಕೇರಿ ನಿರ್ವಹಿಸಿದರು.