“ಯಾದಗಿರಿ | ಕ್ರಿಕೆಟ್ ನಲ್ಲಿ ವಿಶ್ವ ಕಪ್ ಗೆದ್ದ ಮಹಿಳಾ ತಂಡಕ್ಕೆ: ಶ್ರೀದೇವಿ ಕಟ್ಟಿಮನಿ ಅಭಿನಂದನೆ”
• ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ :
ಮಹಿಳಾ ವಿಭಾಗದ ಕ್ರಿಕೆಟ್ ನಲ್ಲಿ ವಿಶ್ವ ಕಪ್ ಗೆದ್ದು ಇತಿಹಾಸ ನಿರ್ಮಿಸಿದ ಮಹಿಳಾ ಕ್ರಿಕೆಟ್ ತಂಡಕ್ಕೆ ನಮ್ಮ ಕರ್ನಾಟಕ ಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶ್ರೀದೇವಿ ಕಟ್ಟಿಮನಿ ಅವರು ಯಾದಗಿರಿ ಹರ್ಷ ವ್ಯಕ್ತಪಡಿಸಿ ಅವರನ್ನು ಅಭಿನಂದಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಮಹಿಳೆಯರು ಕೂಡಾ ಎಲ್ಲಾ ಕ್ಷೇತ್ರದಲ್ಲಿ ಸಾಧಿಸಬಲ್ಲರು ಎಂಬುದಕ್ಕೆ ಇದೇ ತಾಜಾ ಉದಾಹರಣೆ ಮೊಟ್ಟಮೊದಲ ಬಾರಿಗೆ ಮಹಿಳಾ ಕ್ರಿಕೆಟ್ ನಲ್ಲಿ ವಿಶ್ವ ಕಪ್ ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾರೆ.
ಭಾನುವಾರದಂದು ಭಾರತದ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಎಲ್ಲಾ ಮಹಿಳಾ ಕ್ರೀಡಾಪಟುಗಳು ಅತ್ಯುತ್ತಮವಾಗಿ ಆಟವಾಡಿ ವಿಶ್ವ ಕಪ್ ಗೆದ್ದಿರುವುದು ದೇಶಾದ್ಯಂತ ಸಂತಸ ಮನೆ ಮಾಡಿದೆ ಎಂದರು.
ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಹಿಳೆಯರ ಸಾಧನೆಯೂ ಕೂಡಾ ಹೆಚ್ಚಿದೆ ಆದರೆ ಪುರುಷರ ವಿಭಾಗದಲ್ಲಿ ಗೆದ್ದಾಗ ಇರುವ ಸಂಭ್ರಮ ಮಹಿಳೆಯರು ಗೆದ್ದಾಗ ಇರದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಅಸಮಾಧಾನ ವ್ಯಕ್ತಪಡಿಸಿದರು.
ಮಹಿಳೆಯರು ದೇಶದ ಪರವಾಗಿ ಕ್ರೀಡೆಯಲ್ಲಿ ಭಾಗವಹಿಸಿ ನಮ್ಮ ದೇಶಕ್ಕೆ ಮತ್ತಷ್ಟು ಹೆಸರು ತಂದಿದ್ದಾರೆ ವಿಶ್ವಕಪ್ ನಲ್ಲಿ ಭಾಗವಹಿಸಿದ ಎಲ್ಲ ಕ್ರೀಡಾಪಟುಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅವರಿಗೆ ಉನ್ನತ ಹುದ್ದೆ ಹಾಗೂ ಇನ್ನಿತರ ಸೌಲಭ್ಯಗಳನ್ನು ಒದಗಿಸಿ ಪ್ರೋತ್ಸಾಹಿಸಬೇಕು ಎಂದಿದ್ದಾರೆ .
ಇವರ ಸಾಧನೆ ಮಹಿಳಾ ಯುವ ಪೀಳಿಗೆಗೆ ಸ್ಪೂರ್ತಿಯಾಗಿದೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಸಾಧನೆ ಮಾಡಲಿ ಎಂದು ನಮ್ಮ ಕರ್ನಾಟಕ ಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶ್ರೀದೇವಿ ಕಟ್ಟಿಮನಿ ಯಾದಗಿರಿ ಶುಭಕೋರಿ ಹಾರೈಸಿದ್ದಾರೆ.