LOCAL EXPRESS: “ಗದಗ| ದೈಹಿಕ, ಸಂಗೀತ ಮತ್ತು ಚಿತ್ರಕಲಾ ಶಿಕ್ಷಕರನ್ನು ಕೂಡಲೇ  ಭರ್ತಿ ಮಾಡಲು ಸಿ.ಎಂ.ಅವರಿಗೆ  ಮನವಿ”

By admin

“ಗದಗ| ದೈಹಿಕ, ಸಂಗೀತ ಮತ್ತು ಚಿತ್ರಕಲಾ ಶಿಕ್ಷಕರನ್ನು ಕೂಡಲೇ  ಭರ್ತಿ ಮಾಡಲು ಸಿ.ಎಂ.ಅವರಿಗೆ  ಮನವಿ”

• ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌ : 

ಗದಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿಮಾಡಲು ಮತ್ತು ವಿಶೇಷ ಹುದ್ದೆಗಳಾದ ಸಂಗೀತ, ದೈಹಿಕ, ಚಿತ್ರಕಲೆ, ಶಿಕ್ಷಕರನ್ನು ಕೂಡಲೇ ಭರ್ತಿ ಮಾಡಬೇಕೆಂದು  ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಮತ್ತು ಅಖಿಲ ಕರ್ನಾಟಕ ಪಂಡಿತ ಪುಟ್ಟರಾಜ ಗವಾಯಿಗಳ ಸಂಘ ಸದಸ್ಯರು ಜಿಲ್ಲಾಧಿಕಾರಿಗಳ ಮುಖಾಂತರ  ಮುಖ್ಯಮಂತ್ರಿ ಅವರಿಗೆ ಗುರುವಾರ  ಮನವಿ  ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ಸದಸ್ಯ ಶರಣು ಗಡ್ಡಿ ಮಾತನಾಡಿ, 2025-26 ನೇ ಸಾಲಿಗೆ ರಾಜ್ಯದ 43 ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ ಬಿದ್ದಿವೆ. 4-5 ವರ್ಷಗಳಿಂದ ನೇಮಕಾತಿಗಳೇ ನಡೆಯದಿರುವುದರಿಂದ ಅದೆಷ್ಟೋ ಯುವಜನರು ತಮ್ಮ ಅರ್ಹತಾ ವಯಸ್ಸನ್ನು ಮೀರಿದ್ದಾರೆ. ಉದ್ಯೋಗದ ಭರವಸೆಯಿಲ್ಲದೆ ಯುವಜನರು ಆತ್ಮಹತ್ಯೆಯಂತಹ ಕಠಿಣ, ನೋವಿನ ನಿರ್ಧಾರಕ್ಕೆ ಮೊರೆಹೋಗುತ್ತಿದ್ದಾರೆ ಅಸಮಾಧಾನ ವ್ಯಕ್ತಪಡಿಸಿದರು.

ನೇಮಕಾತಿಗಳಲ್ಲಿ ಅಕ್ರಮ ತಡೆಗಟ್ಟಿ, ಪಾರದರ್ಶಕತೆಯನ್ನು ಕಾಪಾಡಲು ಸೂಕ್ತಕ್ರಮ ವಹಿಸಬೇಕು. ರಾಜ್ಯದಲ್ಲಿ ಕಳೆದ ನಾಲೈದು ವರ್ಷಗಳಿಂದ ಸರಿಯಾಗಿ ನೇಮಕಾತಿಗಳು ನಡೆಯದ ಹಿನ್ನೆಲೆಯಲ್ಲಿ ಎಲ್ಲಾ ನೇಮಕಾತಿಗಳಿಗೆ ಅರ್ಹ ವಯೋಮಿತಿಯನ್ನು ಕನಿಷ್ಠ ಐದು ವರ್ಷಗಳ ಸಡಿಲಿಕೆ ವಿಸ್ತರಿಸಬೇಕು. ಪೊಲೀಸ್ ಕಾನ್ಸ್ ಟೆಬಲ್ ವಯೋಮಿತಿಯನ್ನು ಜಿ.ಎಂ, ಒಬಿಸಿ ಗೆ 30. ಎಸ್.ಸಿ, ಎಸ್.ಟಿ, ಕೇಟಗರಿ 1 ಕ್ಕೆ 33 ವರ್ಷಗಳಿಗೆ ಹೆಚ್ಚಿಸಿಬೇಕು ಮತ್ತು  ಸರ್ಕಾರಿ ಇಲಾಖೆಗಳಲ್ಲಿ ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ ಪದ್ಧತಿ ಕೈ ಬಿಟ್ಟು ಎಲ್ಲಾ ಹುದ್ದೆಗಳನ್ನು ಕಾಯಂ ಆಧಾರದಲ್ಲಿ ನೇಮಕಾತಿ ಒತ್ತು ನೀಡಬೇಕು.  ಇತ್ತೀಚೆಗೆ ಕೆ.ಇ.ಎ. ಹೊರಡಿಸಿರುವ ನೋಟಿಫಿಕೇಶನ್‌ನಲ್ಲಿ ನಿಗದಿಪಡಿಸಿರುವ ದುಬಾರಿ ಅರ್ಜಿ ಶುಲ್ಕವನ್ನು ಕೈಬಿಡಬೇಕು ಹಾಗೂ ವಿಶೇಷ ಹುದ್ದೆಗಳಾದ ಸಂಗೀತ, ದೈಹಿಕ, ಚಿತ್ರಕಲೆ, ಶಿಕ್ಷಕರನ್ನು ಕೂಡಲೇ ಭರ್ತಿ ಮಾಡಬೇಕೆಂದು  ಒತ್ತಾಯಿಸಿದರು. 

ನಿಯೋಗದಲ್ಲಿ  ಭರಮಪ್ಪ ಪಲ್ಲೆದ, ಬಸವರಾಜ್ ಗೊರವರ,ರಾಂಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.