“ಬಿಹಾರ| ಮೊದಲ ಹಂತದ ಚುನಾವಣೆ ಮುಕ್ತಾಯ: ಶೇ.60% ರಷ್ಟು ಮತದಾನ! ಮತ ಚಲಾಯಿಸಿ ಪ್ರಮುಖ ನಾಯಕರು.!
• ಸೆಕ್ಯುಲರ್ ವಾಯ್ಸ್ ಡೆಸ್ಕ್ ನ್ಯೂಸ್ :
ಪಾಟ್ನಾ: ಬಿಹಾರ ವಿಧಾನಸಭೆಗೆ ಇಂದು ನಡೆದ ಮೊದಲ ಹಂತದ ಚುನಾವಣೆ ಬಹುತೇಕ ಶಾಂತಿಯುತವಾಗಿ ಮುಕ್ತಾಯವಾಗಿದ್ದು, 121 ಕ್ಷೇತ್ರಗಳಾದ್ಯಂತ 3.75 ಕೋಟಿ ಮತದಾರರು, 1,314 ಅಭ್ಯರ್ಥಿಗಳ ಭವಿಷ್ಯವನ್ನು ಮತಪೆಟ್ಟಿಗೆಯಲ್ಲಿ ಭದ್ರತೆ ಪಡೆದುಕೊಂಡಿದೆ.
ಗುರುವಾರ ಸಂಜೆ 5 ಗಂಟೆಯ ಹೊತ್ತಿಗೆ ಶೇ. 60.18 ರಷ್ಟು ಜನರು ತಮ್ಮ ಮತ ಚಲಾಯಿಸಿದ್ದಾರೆ.ಬಿಹಾರ ರಾಜ್ಯ ಮಾತ್ರವಲ್ಲ, ರಾಷ್ಟ್ರ ರಾಜಕಾರಣದಲ್ಲೂ ಸಂಚಲನ ಸೃಷ್ಟಿಯಾಗುವ ಸಾಧ್ಯತೆ ಇರುವ ಬಿಹಾರ ರಾಜ್ಯ ವಿಧಾನ ಸಭಾ ಚುನಾವಣೆಗೆ ಇಂದು ಮತದಾನ ನಡೆದಿದೆ.
ಆರ್ ಜೆಡಿಯ ತೇಜಸ್ವಿ ಯಾದವ್, ಬಿಜೆಪಿ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ, ಮಂಗಳ್ ಪಾಂಡೆ, ತೇಜ್ ಪ್ರತಾಪ್ ಯಾದವ್ ಸೇರಿದಂತೆ ಹಲವು ಘಟಾನುಘಟಿ ನಾಯಕರ ಹಣೆಬರಹವನ್ನು ಮತದಾರರು ನಿರ್ಧರಿಸಿದ್ದಾರೆ.
ಇದೇ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿರುವ ಜನಪ್ರಿಯ ಗಾಯಕಿ ಮೈಥಿಲಿ ಠಾಕೂರ್ ಹಾಗೂ ಬೋಜ್ ಪುರಿ ನಟ ಕೇಶರಿ ಲಾಲ್ ಯಾದವ್ ಅವರ ಕ್ಷೇತ್ರಗಳಲ್ಲಿಯೂ ಮತದಾನ ನಡೆದಿದೆ
ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪನಾಯಕ ಸಾಮ್ರಾಟ್ ಚೌಧರಿ, ಆರ್ ಜೆಡಿಯ ಲಾಲು ಯಾದವ್ ಮತ್ತು ತೇಜಸ್ವಿ ಯಾದವ್ ಮತ್ತು ಎಲ್ ಜೆಪಿಯ ಚಿರಾಗ್ ಪಾಸ್ವಾನ್ ಸೇರಿದಂತೆ ಉನ್ನತ ನಾಯಕರು ಈಗಾಗಲೇ ಮತ ಚಲಾಯಿಸಿದ್ದಾರೆ. ಅಲ್ಲದೇ ಇತರರನ್ನು ಮತ ಚಲಾವಣೆ ಮಾಡುವಂತೆ ಪ್ರೇರೇಪಿಸಿ ಎಂದು ಸಂದೇಶ ನೀಡಿದರು.