“ಯಾದಗಿರಿ | ಕಬ್ಬು ಬೆಳೆಗಾರರ ರೈತರ ಹೋರಾಟಕ್ಕೆ ಕಲ್ಯಾಣ ಕರ್ನಾಟಕ ಯುವ ಸೇನೆ ಬೆಂಬಲ : ಪ್ರತಿ ಟನ್ ಕಬ್ಬಿಗೆ ₹3,500 ದರ ನಿಗದಿಪಡಿಸಲು ಒತ್ತಾಯ”
• ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ:
ರಾಜ್ಯದ ಬೆಳಗಾವಿ ಭಾಗದಲ್ಲಿ ಪ್ರತಿ ಟನ್ ಕಬ್ಬಿಗೆ ₹3,500 ದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ಯುವ ಸೇನೆ ಜಿಲ್ಲಾ ಸಮಿತಿಯು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದೆ.
ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಸೇನೆಯ ಜಿಲ್ಲಾಧ್ಯಕ್ಷ ಭೀಮಾಶಂಕರ ಕಟ್ಟಿಮನಿ ಅವರು, ರಾಜ್ಯದಲ್ಲಿ ಈಗಾಗಲೇ ಅತಿವೃಷ್ಟಿ-ಅನಾವೃಷ್ಟಿಯಿಂದ ಸಾಕಷ್ಟು ರೈತರು ಸಂಕಷ್ಟದಲ್ಲಿ ಸಿಲುಕಿರುತ್ತಾರೆ. ರೈತರಿಗೆ ಸರ್ಕಾರ ಯಾವುದೇ ರೀತಿಯಿಂದ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು .ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ 9ನೇ ದಿನಕ್ಕೆ ಕಾಲಿಟ್ಟಿದ್ದು, ಇದರ ಕಿಚ್ಚು ರಾಜ್ಯದ್ಯಂತ ಹಬ್ಬಿದೆ. ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರೂ ಜಿಲ್ಲೆಯ ಸಚಿವರು ರೈತರ ಸಮಸ್ಯೆಗಳ ಬಗ್ಗೆ ಸೊಲ್ಲೆತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಕ್ಕರೆ ಸಚಿವರು ಭರವಸೆಗಳನ್ನು ನೀಡಿದ್ದರೂ, ಇಂದು ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡುವ ನಿರೀಕ್ಷೆಯಲ್ಲಿ ರೈತರು ಕಾಯುತ್ತಿದ್ದಾರೆ. ವಾರ್ಷಿಕ ಬೆಳೆಯಾಗಿರುವ ಕಬ್ಬು ಬೆಳೆಯುವ ಖರ್ಚು, ವೆಚ್ಚ ಆಧರಿಸಿ ಎಮ್ ಆರ್‌ಪಿ ನಿಗದಿಪಡಿಸಲು ರಾಜ್ಯ ಸರಕಾರ ಮುತುವರ್ಜಿ ವಹಿಸಬೇಕಿತ್ತು. ಆದರೆ, ರೈತರು ಹೋರಾಟಕ್ಕಿಳಿದರೂ ಕಿವಿಗೊಡದ ಕಾಂಗ್ರೆಸ್ ಸರಕಾರ ಅಧಿಕಾರದ ಮದದಲ್ಲಿದೆ. ಸಚಿವರು ರೈತರ ಹಿತಾಸಕ್ತಿ ನಿರ್ಲಕ್ಷಿಸುತ್ತಿದ್ದಾರೆ,” ಎಂದು ಆರೋಪಿಸಿದರು.
ಒಂದು ವೇಳೆ ಇಂದು 3500 ರೂ. ದರ ಘೋಷಣೆಯಾಗದಿದ್ದರೆ ಮುಂದಿನ ದಿನಗಳಲ್ಲಿ ರೈತರ ಜೊತೆಗೂಡಿ ನಮ್ಮ ಸಂಘಟನೆಗಳು ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದರು.
Contents
“ಯಾದಗಿರಿ | ಕಬ್ಬು ಬೆಳೆಗಾರರ ರೈತರ ಹೋರಾಟಕ್ಕೆ ಕಲ್ಯಾಣ ಕರ್ನಾಟಕ ಯುವ ಸೇನೆ ಬೆಂಬಲ : ಪ್ರತಿ ಟನ್ ಕಬ್ಬಿಗೆ ₹3,500 ದರ ನಿಗದಿಪಡಿಸಲು ಒತ್ತಾಯ”• ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ: ರಾಜ್ಯದ ಬೆಳಗಾವಿ ಭಾಗದಲ್ಲಿ ಪ್ರತಿ ಟನ್ ಕಬ್ಬಿಗೆ ₹3,500 ದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ಯುವ ಸೇನೆ ಜಿಲ್ಲಾ ಸಮಿತಿಯು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಸೇನೆಯ ಜಿಲ್ಲಾಧ್ಯಕ್ಷ ಭೀಮಾಶಂಕರ ಕಟ್ಟಿಮನಿ ಅವರು, ರಾಜ್ಯದಲ್ಲಿ ಈಗಾಗಲೇ ಅತಿವೃಷ್ಟಿ-ಅನಾವೃಷ್ಟಿಯಿಂದ ಸಾಕಷ್ಟು ರೈತರು ಸಂಕಷ್ಟದಲ್ಲಿ ಸಿಲುಕಿರುತ್ತಾರೆ. ರೈತರಿಗೆ ಸರ್ಕಾರ ಯಾವುದೇ ರೀತಿಯಿಂದ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು .ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ 9ನೇ ದಿನಕ್ಕೆ ಕಾಲಿಟ್ಟಿದ್ದು, ಇದರ ಕಿಚ್ಚು ರಾಜ್ಯದ್ಯಂತ ಹಬ್ಬಿದೆ. ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರೂ ಜಿಲ್ಲೆಯ ಸಚಿವರು ರೈತರ ಸಮಸ್ಯೆಗಳ ಬಗ್ಗೆ ಸೊಲ್ಲೆತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸಕ್ಕರೆ ಸಚಿವರು ಭರವಸೆಗಳನ್ನು ನೀಡಿದ್ದರೂ, ಇಂದು ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡುವ ನಿರೀಕ್ಷೆಯಲ್ಲಿ ರೈತರು ಕಾಯುತ್ತಿದ್ದಾರೆ. ವಾರ್ಷಿಕ ಬೆಳೆಯಾಗಿರುವ ಕಬ್ಬು ಬೆಳೆಯುವ ಖರ್ಚು, ವೆಚ್ಚ ಆಧರಿಸಿ ಎಮ್ ಆರ್‌ಪಿ ನಿಗದಿಪಡಿಸಲು ರಾಜ್ಯ ಸರಕಾರ ಮುತುವರ್ಜಿ ವಹಿಸಬೇಕಿತ್ತು. ಆದರೆ, ರೈತರು ಹೋರಾಟಕ್ಕಿಳಿದರೂ ಕಿವಿಗೊಡದ ಕಾಂಗ್ರೆಸ್ ಸರಕಾರ ಅಧಿಕಾರದ ಮದದಲ್ಲಿದೆ. ಸಚಿವರು ರೈತರ ಹಿತಾಸಕ್ತಿ ನಿರ್ಲಕ್ಷಿಸುತ್ತಿದ್ದಾರೆ,” ಎಂದು ಆರೋಪಿಸಿದರು.ಒಂದು ವೇಳೆ ಇಂದು 3500 ರೂ. ದರ ಘೋಷಣೆಯಾಗದಿದ್ದರೆ ಮುಂದಿನ ದಿನಗಳಲ್ಲಿ ರೈತರ ಜೊತೆಗೂಡಿ ನಮ್ಮ ಸಂಘಟನೆಗಳು ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದರು.

