“ಕುಷ್ಟಗಿ | ಹಳ್ಳಿಗಳಿಗೆ ಸಮರ್ಪಕವಾಗಿ ಬಸ್ ಸೌಲಭ್ಯ ಓಡಿಸಲು ಆಗ್ರಹ : ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ”
• ಸೆಕ್ಯುಲರ್ ವಾಯ್ಸ್ ನ್ಯೂಸ್ ಕುಷ್ಟಗಿ:
ತಾಲ್ಲೂಕಿನ ವಿವಿಧ ಹಳ್ಳಿಗಳಿಗೆ ಶಾಲಾ ಮತ್ತು ಕಾಲೇಜು ಸಮಯಕ್ಕೆ ತಕ್ಕಂತೆ ಬಸ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಭಾರತ ಫೆಡೆರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರು ಬುಧುವಾರ ಪಟ್ಟಣದ ಬಸ್ ಡಿಪೋ ಎದುರುಗಡೆ ಪ್ರತಿಭಟನೆ ನಡೆಸಿದರು. ಬಳಿಕ ಘಟಕ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಶಿವಕುಮಾರ್ ಈಚನಾಳ್ ಅವರು, “ತಾಲ್ಲೂಕಿನ ಗ್ರಾಮೀಣ ಭಾಗದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಪ್ರತಿದಿನ ಕುಷ್ಟಗಿ ನಗರಕ್ಕೆ ಬರುತ್ತಿದ್ದಾರೆ. ಆದರೆ ಬಸ್‌ಗಳು ಸಮಯಕ್ಕೆ ಬಾರದ ಕಾರಣ ಅನೇಕ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ,” ಎಂದು ಹೇಳಿದರು.
ಬಳಿಕ ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ ಅವರು ಮಾತನಾಡಿ , “ತಾಲ್ಲೂಕಿನ ಶಾಸಕರು ಹಾಗೂ ಪಂಚಾಯತ್ ಸದಸ್ಯರು ವಿದ್ಯಾರ್ಥಿಗಳ ಸಮಸ್ಯೆ ಕಡೆಗಣಿಸಿದ್ದಾರೆ. ತಕ್ಷಣ ಕ್ರಮ ಕೈಗೊಳ್ಳದಿದ್ದರೆ ವಿದ್ಯಾರ್ಥಿಗಳು ರಸ್ತೆ ತಡೆದು ಉಗ್ರ ಹೋರಾಟ ನಡೆಸಬೇಕಾದ ಪರಿಸ್ಥಿತಿ ಉಂಟಾಗಲಿದೆ,” ಎಂದು ಎಚ್ಚರಿಸಿದರು.
ಈ ವೇಳೆ ಪ್ರತಿಭಟನೆ ಉದ್ದೇಶಿಸಿ ಕೆ.ಪಿ.ಆರ್.ಎಸ್ ಮುಖಂಡರಾದ ಸಂಗಮ್ಮ ಮತ್ತು ಅಕ್ಕಮ್ಮ ಹೋರಾಟವನ್ನು ಬೆಂಬಲಿಸಿ ಮಾತನಾಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ರಮೇಶ್ ಅಗಸಿಮುಂದಿನ, ದೊಡ್ಡ ಬಸವ ನೀರಲೂಟಿ, ಹನುಮೇಶ್ ಚಳ್ಳಾರಿ ಹಾಗೂ ವಿದ್ಯಾರ್ಥಿಗಳಾದ, ಹುಲಿಗೆಮ್ಮ, ಅನಿತ, ಅಶ್ವಿನಿ, ಅಮೃತ, ಅನು,ರಾಮು ಪಟೇಲ್ ನವೀನ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Contents
“ಕುಷ್ಟಗಿ | ಹಳ್ಳಿಗಳಿಗೆ ಸಮರ್ಪಕವಾಗಿ ಬಸ್ ಸೌಲಭ್ಯ ಓಡಿಸಲು ಆಗ್ರಹ : ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ”• ಸೆಕ್ಯುಲರ್ ವಾಯ್ಸ್ ನ್ಯೂಸ್ ಕುಷ್ಟಗಿ:ತಾಲ್ಲೂಕಿನ ವಿವಿಧ ಹಳ್ಳಿಗಳಿಗೆ ಶಾಲಾ ಮತ್ತು ಕಾಲೇಜು ಸಮಯಕ್ಕೆ ತಕ್ಕಂತೆ ಬಸ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಭಾರತ ಫೆಡೆರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರು ಬುಧುವಾರ ಪಟ್ಟಣದ ಬಸ್ ಡಿಪೋ ಎದುರುಗಡೆ ಪ್ರತಿಭಟನೆ ನಡೆಸಿದರು. ಬಳಿಕ ಘಟಕ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಶಿವಕುಮಾರ್ ಈಚನಾಳ್ ಅವರು, “ತಾಲ್ಲೂಕಿನ ಗ್ರಾಮೀಣ ಭಾಗದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಪ್ರತಿದಿನ ಕುಷ್ಟಗಿ ನಗರಕ್ಕೆ ಬರುತ್ತಿದ್ದಾರೆ. ಆದರೆ ಬಸ್‌ಗಳು ಸಮಯಕ್ಕೆ ಬಾರದ ಕಾರಣ ಅನೇಕ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ,” ಎಂದು ಹೇಳಿದರು. ಬಳಿಕ ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ ಅವರು ಮಾತನಾಡಿ , “ತಾಲ್ಲೂಕಿನ ಶಾಸಕರು ಹಾಗೂ ಪಂಚಾಯತ್ ಸದಸ್ಯರು ವಿದ್ಯಾರ್ಥಿಗಳ ಸಮಸ್ಯೆ ಕಡೆಗಣಿಸಿದ್ದಾರೆ. ತಕ್ಷಣ ಕ್ರಮ ಕೈಗೊಳ್ಳದಿದ್ದರೆ ವಿದ್ಯಾರ್ಥಿಗಳು ರಸ್ತೆ ತಡೆದು ಉಗ್ರ ಹೋರಾಟ ನಡೆಸಬೇಕಾದ ಪರಿಸ್ಥಿತಿ ಉಂಟಾಗಲಿದೆ,” ಎಂದು ಎಚ್ಚರಿಸಿದರು. ಈ ವೇಳೆ ಪ್ರತಿಭಟನೆ ಉದ್ದೇಶಿಸಿ ಕೆ.ಪಿ.ಆರ್.ಎಸ್ ಮುಖಂಡರಾದ ಸಂಗಮ್ಮ ಮತ್ತು ಅಕ್ಕಮ್ಮ ಹೋರಾಟವನ್ನು ಬೆಂಬಲಿಸಿ ಮಾತನಾಡಿದರು.ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ರಮೇಶ್ ಅಗಸಿಮುಂದಿನ, ದೊಡ್ಡ ಬಸವ ನೀರಲೂಟಿ, ಹನುಮೇಶ್ ಚಳ್ಳಾರಿ ಹಾಗೂ ವಿದ್ಯಾರ್ಥಿಗಳಾದ, ಹುಲಿಗೆಮ್ಮ, ಅನಿತ, ಅಶ್ವಿನಿ, ಅಮೃತ, ಅನು,ರಾಮು ಪಟೇಲ್ ನವೀನ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

