“ಶಹಾಪೂರ| ರಾಜ್ಯ ಮಟ್ಟದ “ಸಹಕಾರ ರತ್ನ” ಪ್ರಶಸ್ತಿಗೆ ವಿಶ್ವನಾಥರೆಡ್ಡಿ ದರ್ಶನಾಪುರ ಆಯ್ಕೆ : ಸಚಿವ,ಶಾಸಕರಿಂದ ಹರ್ಷ.!
• ಸೆಕ್ಯಲರ್ ವಾಯ್ಸ್ ನ್ಯೂಸ್ ಶಹಾಪೂರ:
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ (ನಿ.) ಬೆಂಗಳೂರು ವತಿಯಿಂದ ನೀಡಲಾಗುವ 2025–26ನೇ ಸಾಲಿನ ಪ್ರತಿಷ್ಠಿತ “ಸಹಕಾರ ರತ್ನ” ಪ್ರಶಸ್ತಿಗೆ ಯಾದಗಿರಿ ಜಿಲ್ಲೆಯ ಸಹಕಾರಿ ಧುರೀಣರಾದ ವಿಶ್ವನಾಥರಡ್ಡಿ ದರ್ಶನಾಪುರ ಅವರು ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಮಹಾಮಂಡಳಿ ಪ್ರಕಟಿಸಿದೆ.
ರಾಜ್ಯದಲ್ಲಿ ಸಹಕಾರ ಚಳವಳಿಯ ಬೆಳವಣಿಗೆಯಲ್ಲಿ ಹಾಗೂ ಸಹಕಾರ ಕ್ಷೇತ್ರದಲ್ಲಿ ವಿಶಿಷ್ಟ ಕೊಡುಗೆ ನೀಡಿದಕ್ಕಾಗಿ ಈ ಗೌರವ ಅವರಿಗೆ ಲಭಿಸಿದೆ. ಪ್ರಸ್ತುತ ಅವರು ಯಾದಗಿರಿ ಜಿಲ್ಲಾ ಸಹಕಾರಿ ಯೂನಿಯನ್ ಒಕ್ಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವಿಶ್ವನಾಥರಡ್ಡಿ ದರ್ಶನಾಪೂರು ಅವರು ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾದ ಹಿನ್ನೆಲೆಯಲ್ಲಿ, ಸಣ್ಣ ಕೈಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರು, ಯಾದಗಿರಿ ಶಾಸಕ ಚನ್ನಾರಡ್ಡಿ ಪಾಟೀಲ್ ತೂನ್ನೂರು, ಡಿಸಿಸಿ ಬ್ಯಾಂಕಿನ ನಿರ್ದೇಶಕ ಗುರುನಾಥರಡ್ಡಿ ಪೋಲಿಸ್ ಪಾಟೀಲ್ (ಹಳಿಸಗರ) ಹಾಗೂ ಜಿಲ್ಲಾ ಸಹಕಾರಿ ಯೂನಿಯನ್ ಒಕ್ಕೂಟದ ಆಡಳಿತ ಮಂಡಳಿಯ ಸದಸ್ಯರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.