“ಕನಕಗಿರಿ| ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ: ಮಹಿಳೆ ಸಾವು”
• ಸೆಕ್ಯುಲರ್ ವಾಯ್ಸ್ ನ್ಯೂಸ್,ಕನಕಗಿರಿ:
ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬುಧವಾರ ತಾಲ್ಲೂಕಿನ ಸೂಳೇಕಲ್–ಅರಳಹಳ್ಳಿ ರಸ್ತೆಯ ಮಧ್ಯೆ ನಡೆದಿದೆ.
ಮೃತರನ್ನು ವತ್ಸಲಾ (39) ಎಂದು ಗುರುತಿಸಲಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗಾದಿಂದ ಲಿಂಗಸೂರು–ಗಂಗಾವತಿ ಮಾರ್ಗದ ಮೂಲಕ ಗಂಗಾವತಿಗೆ ತೆರಳುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ವತ್ಸಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ಮಾಹಿತಿ ಲಭಿಸಿದೆ.
ಕಾರು ಚಾಲಕ ತಿರುಮಲೇಶ ಹಾಗೂ ಮೃತಳ ಪುತ್ರಿ ಅನುಜ್ಞಾ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದಿಂದ ಅವರನ್ನು ತಕ್ಷಣವೇ ಗಂಗಾವತಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಕುರಿತು ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.