“ಕೊಪ್ಪಳ |ರಾಜ್ಯಮಟ್ಟದ ಮಕ್ಕಳ ಸಂಸತ್ತಿಗೆ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳ ಆಯ್ಕೆ”
• ಸೆಕ್ಯುಲರ್ ವಾಯ್ಸ್ ನ್ಯೂಸ್ ಕೊಪ್ಪಳ:
ರಾಜ್ಯ ಮಕ್ಕಳ ನಿಗಾ ಘಟಕ, ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ಹಾಗೂ ಯುನಿಸೆಫ್ ಅವರ ಸಂಯುಕ್ತ ಆಶ್ರಯದಲ್ಲಿ ನ.19ಮತ್ತು 20 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಮಕ್ಕಳ ಸಂಸತ್ತಿಗೆ ಕೊಪ್ಪಳ ಜಿಲ್ಲೆಯಿಂದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ರಾಜ್ಯದ ಪ್ರತಿಯೊಂದು ಜಿಲ್ಲೆಯಿಂದ ತಲಾ ಇಬ್ಬರು ವಿದ್ಯಾರ್ಥಿಗಳು ಮಕ್ಕಳ ಸಂಸತ್ತಿನಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದ್ದು, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವರು, ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಮಕ್ಕಳ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಆಲಿಸುವ ನಿರೀಕ್ಷೆಯಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಚೈಲ್ಡ್ ರೈಟ್ಸ್ ಟ್ರಸ್ಟ್ ವತಿಯಿಂದ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ.
ಜಿಲ್ಲೆಯಿಂದ ಕೆಎಚ್ಟಿ ಪಿ ಸಂಸ್ಥೆಯಿಂದ ಲಕ್ಷ್ಮಿ ಹಲಗೇರಿ, ಹಾಗೂ ವಿಸ್ತಾರ ಸಂಸ್ಥೆಯಿಂದ ರಮೀಜಾ ಮಂಗಳೂರು ಮಕ್ಕಳ ಸಂಸತ್ತಿನಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.