BREAKING UPDETS NEWS :”ಕೊಪ್ಪಳ|ಹಾಸ್ಟೇಲ್ ವಿದ್ಯಾರ್ಥಿನಿ ಹೆರಿಗೆ: ಯುವಕ ಬಂಧನ, ಸಿಬ್ಬಂದಿ ಅಮಾನತು.!ಏಳು ಜನರ ವಿರುದ್ದ ಎಫ್‌ಐಆರ್ ದಾಖಲು”
(ಕೊಪ್ಪಳ ಜಿಲ್ಲಾಸ್ಪತ್ರೆಗೆ ಡಿ.ಸಿ. ಸುರೇಶ್ ಇಟ್ನಾಳ್, ಜಿಪಂ ಸಿಇಒ ವರ್ಣೀತ್ ನೇಗಿ ಮತ್ತು ಎಸ್ಪಿ ರಾಮ್ ಅರಸಿದ್ಧಿ ಭೇಟಿ ನೀಡಿ ತಾಯಿ-ಮಗುವಿನ ಆರೋಗ್ಯ ವಿಚಾರಿಸಿದ್ದಾರೆ.)
Contents
BREAKING UPDETS NEWS :”ಕೊಪ್ಪಳ|ಹಾಸ್ಟೇಲ್ ವಿದ್ಯಾರ್ಥಿನಿ ಹೆರಿಗೆ: ಯುವಕ ಬಂಧನ, ಸಿಬ್ಬಂದಿ ಅಮಾನತು.!ಏಳು ಜನರ ವಿರುದ್ದ ಎಫ್‌ಐಆರ್ ದಾಖಲು”• ಸೆಕ್ಯುಲರ್ ವಾಯ್ಸ್ ನ್ಯೂಸ್ ಕೊಪ್ಪಳ:ಕುಕನೂರು ತಾಲ್ಲೂಕಿನ ಗ್ರಾಮವೊಂದರ ವಸತಿ ನಿಲಯದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿ ಶೌಚಾಲಯದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಬಾಲಕಿ ಗರ್ಭಿಣಿಯಾಗಲು ಕಾರಣವಾದ ಆರೋಪದ ಮೇಲೆ ಯಲಬುರ್ಗಾ ತಾಲ್ಲೂಕಿನ ತಲ್ಲೂರು ಗ್ರಾಮದ ಯುವಕ ಹನುಮನಗೌಡ ಬತ್ತಿ(21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯ ಭರವಸೆ ನೀಡಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಮಾಡಿದ್ದೇನೆಂದು ಬಾಲಕಿ ನೀಡಿದ ಹೇಳಿಕೆಯ ಆಧಾರದ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.ಘಟನೆಯಲ್ಲಿ ವಸತಿ ನಿಲಯದ ಮೇಲ್ವಿಚಾರಕಿ ಶಶಿಕಲಾ ಹಿರೇಮಠ, ಅಡುಗೆ ಕೆಲಸಗಾರ್ತಿಯರಾದ ಪಾರ್ವತಿ ಕುದಿರಿಮೋತಿ ಮತ್ತು ಪ್ರಿಯಾಂಕಾ ಸಿಂಧೋಗಿ ಅವರನ್ನು ಕರ್ತವ್ಯ ಲೋಪಕ್ಕೆ ಅಮಾನತು ಮಾಡಲಾಗಿದೆ. ಜೊತೆಗೆ ಶಿಕ್ಷಕ ಪ್ರಭಾಕರ ಭಜಂತ್ರಿ, ಯಂಕಪ್ಪ ಪೂಜಾರ, ಆರ್‌ಬಿಎಸ್‌ಕೆ ವೈದ್ಯಾಧಿಕಾರಿಗಳಾದ ಭರತೇಶ ಹಿರೇಮಠ ಹಾಗೂ ಸಬೀಯಾ ಸೇರಿದಂತೆ ಒಟ್ಟು ಏಳು ಮಂದಿಯ ವಿರುದ್ಧ ಕುಕನೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಬುಧವಾರ ಬೆಳಿಗ್ಗೆ 5.30ರ ವೇಳೆಗೆ ಹೊಟ್ಟೆನೋವು ಕಾಣಿಸಿಕೊಂಡ ಬಾಲಕಿ ಶೌಚಾಲಯಕ್ಕೆ ತೆರಳಿದ್ದು, ಅಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಪ್ರಕರಣದ ಕುರಿತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ದೂರು ನೀಡಿದ್ದು, ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮುಂದಿನ ತನಿಖೆ ಕುಕನೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.• ಘಟನೆ ಕುರಿತು ಶಾಸಕ ಬಸವರಾಜ ರಾಯರೆಡ್ಡಿ ಪ್ರತಿಕ್ರೀಯೆ: “ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಮತ್ತು ಶಾಸಕ ಬಸವರಾಜ ರಾಯರಡ್ಡಿ, ಇದೊಂದು ಪೊಕ್ಕೋ ಪ್ರಕರಣವಾಗಿದ್ದು, ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ. ಆರೋಪಿ ಯುವಕನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ ಹಾಗೂ ವಸತಿ ನಿಲಯದ ವಾರ್ಡನ್ ನನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.”

