LOCAL EXPRESS :”ಕೊಪ್ಪಳ|ಹಾಸ್ಟೆಲ್ ನಲ್ಲಿ ಬಾಲಕಿ ಹೆರಿಗೆ ಪ್ರಕರಣ: ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮಕ್ಕೆ AIMSS, AIDSO ಸಂಘಟನೆಗಳ ಒತ್ತಾಯ”

By admin

♦️LOCAL EXPRESS :”ಕೊಪ್ಪಳ|ಹಾಸ್ಟೆಲ್ ನಲ್ಲಿ ಬಾಲಕಿ ಹೆರಿಗೆ ಪ್ರಕರಣ: ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮಕ್ಕೆ AIMSS, AIDSO ಸಂಘಟನೆಗಳ ಒತ್ತಾಯ”

• ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌ ಕೊಪ್ಪಳ :

ಕುಕನೂರು ತಾಲ್ಲೂಕಿನ ಗ್ರಾಮವೊಂದರ ದೇವರಾಜ್ ಅರಸ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿ ಶೌಚಾಲಯದಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ಪತ್ರಿಕೆ ವರದಿಗಳಿಂದ ಇತ್ತೀಚಿಗೆ ಬೆಳಕಿಗೆ ಬಂದಿದೆ.

ಮದುವೆಯ ಭರವಸೆ ನೀಡಿ ಪ್ರೀತಿಯ ನೆಪದಲ್ಲಿ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತ ಬಾಲಕಿ ತನ್ನ ದೂರಿನಲ್ಲಿ ಹೇಳಿಕೊಂಡಿದ್ದು, ಆರೋಪಿ ಬಂಧನಕ್ಕೊಳಗಾಗಿದ್ದಾನೆ.

ಈ ಘಟನೆ ಖಂಡಿಸಿ ಪ್ರತಿಕ್ರಿಯಿಸಿದ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (AIMSS) ಯ ಜಿಲ್ಲಾ ಘಟಕ, ಜಿಲ್ಲಾಡಳಿತವು ತಕ್ಷಣ ಸಮಗ್ರ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ಖಾತ್ರಿಪಡಿಸಬೇಕು ಎಂದು ಆಗ್ರಹಿಸಿದೆ.

ಜಿಲ್ಲೆಯಲ್ಲಿ  ಇಂತಹ ಘಟನೆಗಳು ಮರುಕಳಿಸದಂತೆ ಆಡಳಿತವು ತಕ್ಷಣ ಎಚ್ಚರಿಕೆಯೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ, ಬಾಲಕಿಯರ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು AIMSS ಅಭಿಪ್ರಾಯ ಪಟ್ಟಿದೆ.

ಗುರುವಾರ ಪತ್ರಿಕಾ ಹೇಳಿಕೆ ನೀಡಿದ AIMSS ಜಿಲ್ಲಾ ಕಾರ್ಯದರ್ಶಿ ಶಾರದಾ ಗಡ್ಡಿ ಅವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 👉———————–ಇದನ್ನು ಓದಿ..👇

• “ವಸತಿ ನಿಲಯಗಳಲ್ಲಿ ಸುರಕ್ಷತಾ ಕೊರತೆ: ಮೌಲ್ಯ ಶಿಕ್ಷಣಕ್ಕೆ ಆದ್ಯತೆ ನೀಡಬೇಕು — AIDSO ಆಗ್ರಹ”

ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ವಸತಿ ನಿಲಯದಲ್ಲಿ ವಿದ್ಯಾಭ್ಯಾಸಕ್ಕಾಗಿ ವಸತಿಯಾಗಿರುವ ವಿದ್ಯಾರ್ಥಿನಿಯೊಬ್ಬಳು ಅಪ್ರಾಪ್ತ ವಯಸ್ಸಿನಲ್ಲಿ ಹೆರಿಗೆ ನೀಡಿದ ಘಟನೆ ಹಿನ್ನೆಲೆಯಲ್ಲಿ, ವಿದ್ಯಾರ್ಥಿನೀಯರ ಸುರಕ್ಷತೆ ಹಾಗೂ ಮೌಲ್ಯಾಧಾರಿತ ಶಿಕ್ಷಣ ಒದಗಿಸುವಂತೆ ಎ.ಐ.ಡಿ.ಎಸ್.ಓ (AIDSO) ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇ಼ಷನ್‌ (ಎ.ಐ.ಡಿ.ಎಸ್.ಓ) ಜಿಲ್ಲಾ ಸಮಿತಿಯ ಸಂಚಾಲಕ  ಗಂಗರಾಜ ಅಳ್ಳೋಳ್ಳಿ ಅವರು , ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ವಿವಿಧ ವಸತಿ ನಿಲಯಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳ ಅಧೋಗತಿ, ಬಾಲ್ಯದಲ್ಲೇ ಗರ್ಭಧಾರಣೆ, ಅತ್ಯಾಚಾರದ ಪ್ರಕರಣಗಳು ಗಂಭೀರವಾಗಿ ಹೆಚ್ಚುತ್ತಿರುವುದನ್ನು ಸಂಘಟನೆ ಖಂಡಿಸಿದೆ. ಬುಧವಾರ ಇಟಗಿ ಗ್ರಾಮದ ವಸತಿ ನಿಲಯದಲ್ಲಿ ಸಂಭವಿಸಿದ ಘಟನೆ, ವಿದ್ಯಾರ್ಥಿನಿಯರ ಭದ್ರತೆ ಮತ್ತು ಸರ್ಕಾರದ ನಿರ್ಲಕ್ಷ್ಯವನ್ನು ಸ್ಪಷ್ಟಪಡಿಸುತ್ತಿದೆ ಎಂದರು.

16 ವರ್ಷದ, ಹತ್ತನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ವಸತಿ ನಿಲಯದಲ್ಲಿಯೇ ಹೆರಿಗೆ ಸಂಭವಿಸಿರುವುದು, ಜಿಲ್ಲಾ ಶಿಕ್ಷಣ ವ್ಯವಸ್ಥೆ ಹಾಗೂ ವಸತಿ ನಿಲಯಗಳ ಸುರಕ್ಷತೆಯ ಸ್ಥಿತಿ ಕುರಿತು ಗಂಭೀರ ಪ್ರಶ್ನೆಗಳನ್ನೆತ್ತಿದೆ. ಆಡಳಿತದ ವೈಫಲ್ಯದಿಂದಲೂ, ಮತ್ತು ಮೌಲ್ಯಾಧಾರಿತ ಶಿಕ್ಷಣದ ಕೊರತೆಯಿಂದಲೂ ಇಂತಹ ಘಟನೆಗಳು ಮರುಕಳಿಸುತ್ತಿರುವುದಾಗಿ  ಆರೋಪಿಸಿದೆ.

ವಸತಿ ನಿಲಯಗಳಲ್ಲಿನ ಅಪ್ರಾಪ್ತ ಹೆಣ್ಣುಮಕ್ಕಳಿಗೆ ಸಂಭವಿಸುತ್ತಿರುವ ಈ ರೀತಿಯ ಘಟನೆಗಳು, ವಸತಿ ನಿಲಯಗಳ ಮೇಲ್ವಿಚಾರಣೆ, ವಾರ್ಡನ್‌ಗಳ ಕರ್ತವ್ಯ ಪಾಲನೆ ಮತ್ತು ಮೇಲ್ದರ್ಜೆಯ ಇಲಾಖೆಯ ನಿಗಾ ಬಗ್ಗೆ ದೊಡ್ಡ ಅನುಮಾನಗಳನ್ನು ಹುಟ್ಟಿಸಿದೆ. ತಕ್ಷಣ ಕ್ರಮ ಕೈಗೊಳ್ಳುವ ಬದಲು ಘಟನೆಗಳ ನಂತರ ಕ್ರಮಕ್ಕೆ ಮುಂದಾಗುತ್ತಿರುವ ಸರ್ಕಾರ ಮತ್ತು ಜಿಲ್ಲಾಡಳಿತದ ಧೋರಣೆಯನ್ನೂ ಎ.ಐ.ಡಿ.ಎಸ್.ಓ ಸಂಘಟನೆ ಪ್ರಶ್ನಿಸಿದೆ.

ಇದೇ ಸಂದರ್ಭದಲ್ಲಿ, ಇಂತಹ ಅಪರಾಧಗಳು ಮರುಕಳಿಸದಂತೆ ಕಠಿಣ ಕಾನೂನು ಜಾರಿ, ನಿಗಾ ವ್ಯವಸ್ಥೆ ಬಲಪಡಿಸುವುದು ಹಾಗೂ ಮೌಲ್ಯ ಶಿಕ್ಷಣಕ್ಕೆ ಆದ್ಯತೆ ನೀಡುವುದು ಅತ್ಯಾವಶ್ಯಕ ಎಂದು ಸಂಘಟನೆಯು  ಒತ್ತಾಯಿಸಿದೆ. ಪ್ರಸ್ತುತ ಪ್ರಕರಣದಲ್ಲಿ ಕಾರಣರಾದವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ತ್ವರಿತ ಮತ್ತು ಪರಿಣಾಮಕಾರಿ ಕ್ರಮಕ್ಕೆ ಆಗ್ರಹಿಸಿದ್ದಾರೆ.

 

Contents
♦️LOCAL EXPRESS :”ಕೊಪ್ಪಳ|ಹಾಸ್ಟೆಲ್ ನಲ್ಲಿ ಬಾಲಕಿ ಹೆರಿಗೆ ಪ್ರಕರಣ: ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮಕ್ಕೆ AIMSS, AIDSO ಸಂಘಟನೆಗಳ ಒತ್ತಾಯ”• ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌ ಕೊಪ್ಪಳ :ಕುಕನೂರು ತಾಲ್ಲೂಕಿನ ಗ್ರಾಮವೊಂದರ ದೇವರಾಜ್ ಅರಸ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿ ಶೌಚಾಲಯದಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ಪತ್ರಿಕೆ ವರದಿಗಳಿಂದ ಇತ್ತೀಚಿಗೆ ಬೆಳಕಿಗೆ ಬಂದಿದೆ.ಮದುವೆಯ ಭರವಸೆ ನೀಡಿ ಪ್ರೀತಿಯ ನೆಪದಲ್ಲಿ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತ ಬಾಲಕಿ ತನ್ನ ದೂರಿನಲ್ಲಿ ಹೇಳಿಕೊಂಡಿದ್ದು, ಆರೋಪಿ ಬಂಧನಕ್ಕೊಳಗಾಗಿದ್ದಾನೆ.ಈ ಘಟನೆ ಖಂಡಿಸಿ ಪ್ರತಿಕ್ರಿಯಿಸಿದ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (AIMSS) ಯ ಜಿಲ್ಲಾ ಘಟಕ, ಜಿಲ್ಲಾಡಳಿತವು ತಕ್ಷಣ ಸಮಗ್ರ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ಖಾತ್ರಿಪಡಿಸಬೇಕು ಎಂದು ಆಗ್ರಹಿಸಿದೆ.ಜಿಲ್ಲೆಯಲ್ಲಿ  ಇಂತಹ ಘಟನೆಗಳು ಮರುಕಳಿಸದಂತೆ ಆಡಳಿತವು ತಕ್ಷಣ ಎಚ್ಚರಿಕೆಯೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ, ಬಾಲಕಿಯರ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು AIMSS ಅಭಿಪ್ರಾಯ ಪಟ್ಟಿದೆ.ಗುರುವಾರ ಪತ್ರಿಕಾ ಹೇಳಿಕೆ ನೀಡಿದ AIMSS ಜಿಲ್ಲಾ ಕಾರ್ಯದರ್ಶಿ ಶಾರದಾ ಗಡ್ಡಿ ಅವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 👉———————–ಇದನ್ನು ಓದಿ..👇• “ವಸತಿ ನಿಲಯಗಳಲ್ಲಿ ಸುರಕ್ಷತಾ ಕೊರತೆ: ಮೌಲ್ಯ ಶಿಕ್ಷಣಕ್ಕೆ ಆದ್ಯತೆ ನೀಡಬೇಕು — AIDSO ಆಗ್ರಹ”ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ವಸತಿ ನಿಲಯದಲ್ಲಿ ವಿದ್ಯಾಭ್ಯಾಸಕ್ಕಾಗಿ ವಸತಿಯಾಗಿರುವ ವಿದ್ಯಾರ್ಥಿನಿಯೊಬ್ಬಳು ಅಪ್ರಾಪ್ತ ವಯಸ್ಸಿನಲ್ಲಿ ಹೆರಿಗೆ ನೀಡಿದ ಘಟನೆ ಹಿನ್ನೆಲೆಯಲ್ಲಿ, ವಿದ್ಯಾರ್ಥಿನೀಯರ ಸುರಕ್ಷತೆ ಹಾಗೂ ಮೌಲ್ಯಾಧಾರಿತ ಶಿಕ್ಷಣ ಒದಗಿಸುವಂತೆ ಎ.ಐ.ಡಿ.ಎಸ್.ಓ (AIDSO) ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ.ಈ ಕುರಿತು ಪ್ರತಿಕ್ರಿಯಿಸಿದ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇ಼ಷನ್‌ (ಎ.ಐ.ಡಿ.ಎಸ್.ಓ) ಜಿಲ್ಲಾ ಸಮಿತಿಯ ಸಂಚಾಲಕ  ಗಂಗರಾಜ ಅಳ್ಳೋಳ್ಳಿ ಅವರು , ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ವಿವಿಧ ವಸತಿ ನಿಲಯಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳ ಅಧೋಗತಿ, ಬಾಲ್ಯದಲ್ಲೇ ಗರ್ಭಧಾರಣೆ, ಅತ್ಯಾಚಾರದ ಪ್ರಕರಣಗಳು ಗಂಭೀರವಾಗಿ ಹೆಚ್ಚುತ್ತಿರುವುದನ್ನು ಸಂಘಟನೆ ಖಂಡಿಸಿದೆ. ಬುಧವಾರ ಇಟಗಿ ಗ್ರಾಮದ ವಸತಿ ನಿಲಯದಲ್ಲಿ ಸಂಭವಿಸಿದ ಘಟನೆ, ವಿದ್ಯಾರ್ಥಿನಿಯರ ಭದ್ರತೆ ಮತ್ತು ಸರ್ಕಾರದ ನಿರ್ಲಕ್ಷ್ಯವನ್ನು ಸ್ಪಷ್ಟಪಡಿಸುತ್ತಿದೆ ಎಂದರು.16 ವರ್ಷದ, ಹತ್ತನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ವಸತಿ ನಿಲಯದಲ್ಲಿಯೇ ಹೆರಿಗೆ ಸಂಭವಿಸಿರುವುದು, ಜಿಲ್ಲಾ ಶಿಕ್ಷಣ ವ್ಯವಸ್ಥೆ ಹಾಗೂ ವಸತಿ ನಿಲಯಗಳ ಸುರಕ್ಷತೆಯ ಸ್ಥಿತಿ ಕುರಿತು ಗಂಭೀರ ಪ್ರಶ್ನೆಗಳನ್ನೆತ್ತಿದೆ. ಆಡಳಿತದ ವೈಫಲ್ಯದಿಂದಲೂ, ಮತ್ತು ಮೌಲ್ಯಾಧಾರಿತ ಶಿಕ್ಷಣದ ಕೊರತೆಯಿಂದಲೂ ಇಂತಹ ಘಟನೆಗಳು ಮರುಕಳಿಸುತ್ತಿರುವುದಾಗಿ  ಆರೋಪಿಸಿದೆ.ವಸತಿ ನಿಲಯಗಳಲ್ಲಿನ ಅಪ್ರಾಪ್ತ ಹೆಣ್ಣುಮಕ್ಕಳಿಗೆ ಸಂಭವಿಸುತ್ತಿರುವ ಈ ರೀತಿಯ ಘಟನೆಗಳು, ವಸತಿ ನಿಲಯಗಳ ಮೇಲ್ವಿಚಾರಣೆ, ವಾರ್ಡನ್‌ಗಳ ಕರ್ತವ್ಯ ಪಾಲನೆ ಮತ್ತು ಮೇಲ್ದರ್ಜೆಯ ಇಲಾಖೆಯ ನಿಗಾ ಬಗ್ಗೆ ದೊಡ್ಡ ಅನುಮಾನಗಳನ್ನು ಹುಟ್ಟಿಸಿದೆ. ತಕ್ಷಣ ಕ್ರಮ ಕೈಗೊಳ್ಳುವ ಬದಲು ಘಟನೆಗಳ ನಂತರ ಕ್ರಮಕ್ಕೆ ಮುಂದಾಗುತ್ತಿರುವ ಸರ್ಕಾರ ಮತ್ತು ಜಿಲ್ಲಾಡಳಿತದ ಧೋರಣೆಯನ್ನೂ ಎ.ಐ.ಡಿ.ಎಸ್.ಓ ಸಂಘಟನೆ ಪ್ರಶ್ನಿಸಿದೆ.ಇದೇ ಸಂದರ್ಭದಲ್ಲಿ, ಇಂತಹ ಅಪರಾಧಗಳು ಮರುಕಳಿಸದಂತೆ ಕಠಿಣ ಕಾನೂನು ಜಾರಿ, ನಿಗಾ ವ್ಯವಸ್ಥೆ ಬಲಪಡಿಸುವುದು ಹಾಗೂ ಮೌಲ್ಯ ಶಿಕ್ಷಣಕ್ಕೆ ಆದ್ಯತೆ ನೀಡುವುದು ಅತ್ಯಾವಶ್ಯಕ ಎಂದು ಸಂಘಟನೆಯು  ಒತ್ತಾಯಿಸಿದೆ. ಪ್ರಸ್ತುತ ಪ್ರಕರಣದಲ್ಲಿ ಕಾರಣರಾದವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ತ್ವರಿತ ಮತ್ತು ಪರಿಣಾಮಕಾರಿ ಕ್ರಮಕ್ಕೆ ಆಗ್ರಹಿಸಿದ್ದಾರೆ.