🛑 FLASH NEWS: “ಯಾದಗಿರಿ|ಹಾಸ್ಟೆಲ್ ಊಟದಿಂದ 33ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ.! ಫುಡ್ ಪಾಯಿಸನ್ ಶಂಕೆ, ಡಿ.ಸಿ.-ಎಸ್‌ಪಿ ಸ್ಥಳಕ್ಕೆ ಭೇಟಿ.! ಪೋಷಕರ ಆಕ್ರೋಶ..!

By admin

🛑 FLASH NEWS: “ಯಾದಗಿರಿ|ಹಾಸ್ಟೆಲ್ ಊಟದಿಂದ 33ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ.! ಫುಡ್ ಪಾಯಿಸನ್ ಶಂಕೆ, ಡಿ.ಸಿ.-ಎಸ್‌ಪಿ ಸ್ಥಳಕ್ಕೆ ಭೇಟಿ.! ಪೋಷಕರ ಆಕ್ರೋಶ..!

• ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌ ಯಾದಗಿರಿ:

ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಹಿಳಾ ವಸತಿ ನಿಲಯದಲ್ಲಿ ಬುಧವಾರ ರಾತ್ರಿ ಊಟ ಸೇವಿಸಿದ ನಂತರ 33ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥತೆರಾಗಿದ್ದಾರೆ ತಿಳಿದು ಬಂದಿದೆ.

ರಾತ್ರಿ 7.30ರ ಸುಮಾರಿಗೆ ಚಿಕನ್, ಚಪಾತಿ, ಅನ್ನ ಸೇವಿಸಿದ ಕೆಲವೇ ಗಂಟೆಗಳಲ್ಲಿ ವಿದ್ಯಾರ್ಥಿನಿಯರು ವಾಂತಿ, ಹೊಟ್ಟೆನೋವು ಮತ್ತು ಭೇದಿ ಸಂಕೇತಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.  ಮೂವರು ವಿದ್ಯಾರ್ಥಿನಿಯರನ್ನು ಹೆಚ್ಚಿನ ಚಿಕಿತ್ಸೆಗೆ ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.

ಒಟ್ಟು 150 ವಿದ್ಯಾರ್ಥಿಗಳಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದು, ಚಿಕಿತ್ಸಕ ವೈದ್ಯರು ಫುಡ್ ಪಾಯಿಸನ್ ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ತುರ್ತು ಸಹಾಯಕ್ಕೆ ಸೇರ್ಪಡೆಗೊಂಡು ಚಿಕಿತ್ಸೆ ನೀಡಿದ್ದು, ಎಲ್ಲ ವಿದ್ಯಾರ್ಥಿನಿಯರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ.

ಜಿಲ್ಲಾ ಆಡಳಿತದ ತಂಡ — ಜಿಲ್ಲಾಧಿಕಾರಿ ಹರ್ಷಲ್ ಬೋಯರ್, ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಾಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ತಹಸೀಲ್ದಾರ್ ಹಾಗೂ ಸಂಬಂಧಿತ ಇಲಾಖೆ ಅಧಿಕಾರಿಗಳು ಮಧ್ಯರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ, ಹಾಗೂ ಹಾಸ್ಟೆಲ್ ಅಡಿಗೆ, ಸಂಗ್ರಹಣೆ ಮತ್ತು ಸ್ವಚ್ಛತೆ ಕುರಿತು ಆಹಾರ ಸುರಕ್ಷತಾ ಇಲಾಖೆಯು ತಪಾಸಣೆ ಪ್ರಾರಂಭಿಸಿದೆ. ಪೋಷಕರು ಆತಂಕಗೊ೦ಡಿ ಮಕ್ಕಳ ಆರೋಗ್ಯ ವಿಚಾರಕ್ಕೆ ಆಸ್ಪತ್ರೆಗೆ ಧಾವಿಸಿದ್ದಾರೆ.