🚨BREAKING NEWS :”ಬಾಗಲಕೋಟೆ| ಡ್ಯಾನ್ಸ್ ಕಾರ್ಯಕ್ರಮಕ್ಕೆ ಬಂದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪ : ಯೂಟ್ಯೂಬ್ ಟ್ರೆಂಡಿಂಗ್ ಸ್ಟಾರ್ ಗಾಯಕ ‘ಮ್ಯೂಸಿಕ್ ಮೈಲಾರಿ’ ಸೇರಿ 7 ಮಂದಿ ವಿರುದ್ದ ಪೋಕ್ಸೋ ಕೇಸ್ ದಾಖಲು ”
🚨BREAKING NEWS :“ಬಾಗಲಕೋಟೆ| ಡ್ಯಾನ್ಸ್ ಕಾರ್ಯಕ್ರಮಕ್ಕೆ ಬಂದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪ : ಯೂಟ್ಯೂಬ್ ಟ್ರೆಂಡಿಂಗ್ ಸ್ಟಾರ್ ಗಾಯಕ ‘ಮ್ಯೂಸಿಕ್ ಮೈಲಾರಿ’ ಸೇರಿ 7 ಮಂದಿ ವಿರುದ್ದ ಪೋಕ್ಸೋ ಕೇಸ್ ದಾಖಲು “
• ಸೆಕ್ಯಲರ್ ವಾಯ್ಸ್ ನ್ಯೂಸ್ ಬಾಗಲಕೋಟೆ :
ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್ ಸ್ಟಾರ್ ಎಂದು ಗುರುತಿಸಿಕೊಂಡಿರುವ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಸೇರಿದಂತೆ ಏಳು ಮಂದಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
2025ರ ಅಕ್ಟೋಬರ್ 24ರಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮಕ್ಕೆ ಮ್ಯೂಸಿಕ್ ಮೈಲಾರಿ ಆಗಮಿಸಿದ್ದ. ಇದೇ ವೇಳೆ ಅಪ್ರಾಪ್ತ ಬಾಲಕಿ ಡ್ಯಾನ್ಸ್ ಮಾಡಲು ಬಂದಿದ್ದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕಾರ್ಯಕ್ರಮದ ನಂತರ ಬಾಲಕಿಯನ್ನು ಲಾಡ್ಜ್‌ಗೆ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿಸಲಾಗಿದೆ ಎಂದು ಬಾಲಕಿ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಸಂಬಂಧ ಡಿಸೆಂಬರ್ 14ರಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಳಿಕ ಡಿಸೆಂಬರ್ 15ರಂದು ಪ್ರಕರಣವನ್ನು ಮಹಾಲಿಂಗಪುರ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ಮಹಾಲಿಂಗಪುರ ಠಾಣೆಯಲ್ಲಿ ಏಳು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಗಮನಾರ್ಹವಾಗಿ, ಮ್ಯೂಸಿಕ್ ಮೈಲಾರಿ ಹಾಡಿದ್ದ ಹಾಡುಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಶೇಷವಾಗಿ ‘ಬಾಗಲಕೋಟೆ ಬಸ್ ಸ್ಟ್ಯಾಂಡ್ ನಾಗ’ ಹಾಡು ಜನಪ್ರಿಯತೆ ಪಡೆದಿತ್ತು. ಪ್ರಕರಣದ ಎಲ್ಲ ಆಯಾಮಗಳನ್ನು ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.