🚨BREAKING NEWS :”ಸಿಂಧನೂರು | ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ: RWS ಎಇಇ  ಬಿ.ವಿಜಯಲಕ್ಷ್ಮಿ ಅವರ  ಮನೆಗಳ ಮೇಲೆ  ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ” 

By admin

🚨BREAKING NEWS : “ಸಿಂಧನೂರು | ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ: RWS ಎಇಇ  ಬಿ.ವಿಜಯಲಕ್ಷ್ಮಿ ಅವರ  ಮನೆಗಳ ಮೇಲೆ  ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ” 

Contents
🚨BREAKING NEWS : “ಸಿಂಧನೂರು | ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ: RWS ಎಇಇ  ಬಿ.ವಿಜಯಲಕ್ಷ್ಮಿ ಅವರ  ಮನೆಗಳ ಮೇಲೆ  ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ” • ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌ ಸಿಂಧನೂರು: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ (RWS)ಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಬಿ. ವಿಜಯಲಕ್ಷ್ಮಿ ಅವರ ಮನೆಗಳು ಹಾಗೂ ಕಚೇರಿಗಳ ಮೇಲೆ ಮಂಗಳವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ರಾಯಚೂರು ನಗರದ ಐಡಿಎಸ್‌ಎಂಟಿ ಬಡಾವಣೆ, ಗಂಗಾಪರಮೇಶ್ವರ ಲೇಔಟ್ ಸೇರಿದಂತೆ ನಗರದಲ್ಲಿನ ಎರಡು ಮನೆಗಳು, ಸಿಂಧನೂರಿನ ಆರ್‌ಡಬ್ಲ್ಯೂಎಸ್ ಕಚೇರಿ ಸೇರಿದಂತೆ ಒಟ್ಟು ಐದು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆದಿದೆ. ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳ ಐದು ತಂಡಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿವೆ.ಲೋಕಾಯುಕ್ತ ಅಧಿಕಾರಿಗಳು ಎಇಇ ವಿಜಯಲಕ್ಷ್ಮಿ ಅವರ ಹೆಸರಲ್ಲಿ 49ಕ್ಕೂ ಹೆಚ್ಚು ಸ್ಥಳಗಳಲ್ಲಿ ಆಸ್ತಿ ಹೂಡಿಕೆ ನಡೆದಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಸಿದ್ದು, ನಿವೇಶನ, ಮನೆ, ಜಮೀನು ದಾಖಲೆಗಳು ಹಾಗೂ ಚಿನ್ನಾಭರಣಗಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.ಈ ದಾಳಿಯು ರಾಯಚೂರು ಲೋಕಾಯುಕ್ತ ಎಸ್‌ಪಿ ಸತೀಶ್ ಚಿಟಗುಬ್ಬಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

• ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌ ಸಿಂಧನೂರು: 

ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ (RWS)ಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಬಿ. ವಿಜಯಲಕ್ಷ್ಮಿ ಅವರ ಮನೆಗಳು ಹಾಗೂ ಕಚೇರಿಗಳ ಮೇಲೆ ಮಂಗಳವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಯಚೂರು ನಗರದ ಐಡಿಎಸ್‌ಎಂಟಿ ಬಡಾವಣೆ, ಗಂಗಾಪರಮೇಶ್ವರ ಲೇಔಟ್ ಸೇರಿದಂತೆ ನಗರದಲ್ಲಿನ ಎರಡು ಮನೆಗಳು, ಸಿಂಧನೂರಿನ ಆರ್‌ಡಬ್ಲ್ಯೂಎಸ್ ಕಚೇರಿ ಸೇರಿದಂತೆ ಒಟ್ಟು ಐದು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆದಿದೆ. ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳ ಐದು ತಂಡಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿವೆ.

ಲೋಕಾಯುಕ್ತ ಅಧಿಕಾರಿಗಳು ಎಇಇ ವಿಜಯಲಕ್ಷ್ಮಿ ಅವರ ಹೆಸರಲ್ಲಿ 49ಕ್ಕೂ ಹೆಚ್ಚು ಸ್ಥಳಗಳಲ್ಲಿ ಆಸ್ತಿ ಹೂಡಿಕೆ ನಡೆದಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಸಿದ್ದು, ನಿವೇಶನ, ಮನೆ, ಜಮೀನು ದಾಖಲೆಗಳು ಹಾಗೂ ಚಿನ್ನಾಭರಣಗಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಈ ದಾಳಿಯು ರಾಯಚೂರು ಲೋಕಾಯುಕ್ತ ಎಸ್‌ಪಿ ಸತೀಶ್ ಚಿಟಗುಬ್ಬಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.