🔹BREAKING NEWS :“ಗದಗ | ಮರ್ಯಾದಾ ಹತ್ಯೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು : ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ”

Contents
🔹BREAKING NEWS :“ಗದಗ | ಮರ್ಯಾದಾ ಹತ್ಯೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು : ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ”• ಸೆಕ್ಯುಲರ್ ವಾಯ್ಸ್ ನ್ಯೂಸ್ ಗದಗ:ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಅಂತರ್ಜಾತಿ ವಿವಾಹವಾದ ಗರ್ಭಿಣಿ ಯುವತಿಯನ್ನು ಮರ್ಯಾದಾ ಹೆಸರಿನಲ್ಲಿ ಹತ್ಯೆ ಮಾಡಿದ ತಂದೆ ಸೇರಿದಂತೆ ಎಲ್ಲ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಗದಗ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.ಇತ್ತೀಚೆಗೆ ನಡೆದ ಈ ಅಮಾನವೀಯ ಘಟನೆಯನ್ನು ಖಂಡಿಸಿ ಬುಧವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ದಲಿತ ಯುವಕ ವಿವೇಕಾನಂದ ಮಾದರ ಹಾಗೂ ಮೇಲ್ಜಾತಿಯ ಯುವತಿ ಮಾನ್ಯ ಪಾಟೀಲ ಪರಸ್ಪರ ಪ್ರೀತಿಸಿ ಪೊಲೀಸರ ಸಮ್ಮುಖದಲ್ಲಿ ವಿವಾಹವಾಗಿದ್ದರು. ಯುವತಿಯ ಪೋಷಕರಿಂದ ಜೀವಭಯ ಹಾಗೂ ನಿರಂತರ ಬೆದರಿಕೆ ಇದ್ದ ಹಿನ್ನೆಲೆ ಕೆಲ ತಿಂಗಳು ಹಾವೇರಿಯಲ್ಲಿ ನೆಲೆಸಿದ್ದ ದಂಪತಿ, ಯುವತಿ ಏಳು ತಿಂಗಳ ಗರ್ಭಿಣಿಯಾಗಿದ್ದ ಕಾರಣ ನಂತರ ತಮ್ಮ ಗ್ರಾಮಕ್ಕೆ ಮರಳಿದ್ದರು.ಈ ವಿಷಯ ತಿಳಿದ ಯುವತಿಯ ತಂದೆ ಮತ್ತು ಸಂಬಂಧಿಕರು ಸೇರಿ ಹಾಡಹಗಲೇ ಮಾರಕಾಸ್ತ್ರಗಳೊಂದಿಗೆ ಯುವಕನ ಮನೆಗೆ ನುಗ್ಗಿ, ಯುವಕನ ತಂದೆ-ತಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಏಳು ತಿಂಗಳ ಗರ್ಭಿಣಿಯಾಗಿದ್ದ ತಮ್ಮ ಸ್ವಂತ ಮಗಳನ್ನೇ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಒಕ್ಕೂಟ ಆರೋಪಿಸಿದೆ. ಇಂತಹ ಜಾತಿ ಆಧಾರಿತ ಮರ್ಯಾದಾ ಹತ್ಯೆಗಳು ಮರುಕಳಿಸದಂತೆ ಆರೋಪಿಗಳಿಗೆ ಕಠಿಣವಾದ ಮರಣ ದಂಡನೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಲಾಗಿದೆ.ಇದೇ ವೇಳೆ, ಘಟನೆ ನಡೆದು ಮೂರು–ನಾಲ್ಕು ದಿನಗಳಾದರೂ ಧಾರವಾಡ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಇದುವರೆಗೆ ಸಂತ್ರಸ್ತ ಕುಟುಂಬಕ್ಕೆ ಸೌಜನ್ಯಕ್ಕೂ ಭೇಟಿ ನೀಡಿಲ್ಲ. ದಲಿತ ಯುವಕನ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದರೂ ಕನಿಷ್ಠ ಸಾಂತ್ವನದ ಮಾತುಗಳನ್ನೂ ಆಡದಿರುವುದು ಖಂಡನೀಯ ಎಂದು ಒಕ್ಕೂಟ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಯನ್ನು ಅಮಾನತು ಮಾಡಿ, ಸಂತ್ರಸ್ತ ದಲಿತ ಕುಟುಂಬಕ್ಕೆ ನ್ಯಾಯ ಹಾಗೂ ಸಮರ್ಪಕ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಸಂಚಾಲಕರಾದ ಶರೀಫ ಬಿಳೆಯಲಿ, ಮುತ್ತು ಬಿಳೆಯಲಿ, ಆನಂದ ಶಿಂಗಾಡಿ, ಬಾಲರಾಜ ಅರಬರ, ಶಿವಾನಂದ ತಮ್ಮಣ್ಣವರ, ಮಾರುತಿ ಭಜಂತ್ರಿ, ಪ್ರಕಾಶ ಕಲ್ಲೆಕ್ಕನವರ, ಅನಿಲ ಕಾಳೆ, ಪರಶು ಕಾಳೆ, ಬಸೂ ಬಿಳೆಯಲಿ, ಮುತ್ತಣ್ಣ ಚವಡಣ್ಣವರ, ಶ್ರೀಕಾಂತ ಮಳಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
• ಸೆಕ್ಯುಲರ್ ವಾಯ್ಸ್ ನ್ಯೂಸ್ ಗದಗ:
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಅಂತರ್ಜಾತಿ ವಿವಾಹವಾದ ಗರ್ಭಿಣಿ ಯುವತಿಯನ್ನು ಮರ್ಯಾದಾ ಹೆಸರಿನಲ್ಲಿ ಹತ್ಯೆ ಮಾಡಿದ ತಂದೆ ಸೇರಿದಂತೆ ಎಲ್ಲ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಗದಗ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.
ಇತ್ತೀಚೆಗೆ ನಡೆದ ಈ ಅಮಾನವೀಯ ಘಟನೆಯನ್ನು ಖಂಡಿಸಿ ಬುಧವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ದಲಿತ ಯುವಕ ವಿವೇಕಾನಂದ ಮಾದರ ಹಾಗೂ ಮೇಲ್ಜಾತಿಯ ಯುವತಿ ಮಾನ್ಯ ಪಾಟೀಲ ಪರಸ್ಪರ ಪ್ರೀತಿಸಿ ಪೊಲೀಸರ ಸಮ್ಮುಖದಲ್ಲಿ ವಿವಾಹವಾಗಿದ್ದರು. ಯುವತಿಯ ಪೋಷಕರಿಂದ ಜೀವಭಯ ಹಾಗೂ ನಿರಂತರ ಬೆದರಿಕೆ ಇದ್ದ ಹಿನ್ನೆಲೆ ಕೆಲ ತಿಂಗಳು ಹಾವೇರಿಯಲ್ಲಿ ನೆಲೆಸಿದ್ದ ದಂಪತಿ, ಯುವತಿ ಏಳು ತಿಂಗಳ ಗರ್ಭಿಣಿಯಾಗಿದ್ದ ಕಾರಣ ನಂತರ ತಮ್ಮ ಗ್ರಾಮಕ್ಕೆ ಮರಳಿದ್ದರು.
ಈ ವಿಷಯ ತಿಳಿದ ಯುವತಿಯ ತಂದೆ ಮತ್ತು ಸಂಬಂಧಿಕರು ಸೇರಿ ಹಾಡಹಗಲೇ ಮಾರಕಾಸ್ತ್ರಗಳೊಂದಿಗೆ ಯುವಕನ ಮನೆಗೆ ನುಗ್ಗಿ, ಯುವಕನ ತಂದೆ-ತಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಏಳು ತಿಂಗಳ ಗರ್ಭಿಣಿಯಾಗಿದ್ದ ತಮ್ಮ ಸ್ವಂತ ಮಗಳನ್ನೇ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಒಕ್ಕೂಟ ಆರೋಪಿಸಿದೆ. ಇಂತಹ ಜಾತಿ ಆಧಾರಿತ ಮರ್ಯಾದಾ ಹತ್ಯೆಗಳು ಮರುಕಳಿಸದಂತೆ ಆರೋಪಿಗಳಿಗೆ ಕಠಿಣವಾದ ಮರಣ ದಂಡನೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಲಾಗಿದೆ.
ಇದೇ ವೇಳೆ, ಘಟನೆ ನಡೆದು ಮೂರು–ನಾಲ್ಕು ದಿನಗಳಾದರೂ ಧಾರವಾಡ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಇದುವರೆಗೆ ಸಂತ್ರಸ್ತ ಕುಟುಂಬಕ್ಕೆ ಸೌಜನ್ಯಕ್ಕೂ ಭೇಟಿ ನೀಡಿಲ್ಲ. ದಲಿತ ಯುವಕನ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದರೂ ಕನಿಷ್ಠ ಸಾಂತ್ವನದ ಮಾತುಗಳನ್ನೂ ಆಡದಿರುವುದು ಖಂಡನೀಯ ಎಂದು ಒಕ್ಕೂಟ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಯನ್ನು ಅಮಾನತು ಮಾಡಿ, ಸಂತ್ರಸ್ತ ದಲಿತ ಕುಟುಂಬಕ್ಕೆ ನ್ಯಾಯ ಹಾಗೂ ಸಮರ್ಪಕ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು.
