🛑BIG BREAKING NEWS : ಚಿತ್ರದುರ್ಗ| ಹಿರಿಯೂರು ಬಳಿ ಭೀಕರ ರಸ್ತೆ ಅಪಘಾತ : ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಸಜೀವ ದಹನ 
• ಸೆಕ್ಯುಲರ್ ವಾಯ್ಸ್ ನ್ಯೂಸ್ ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ–48ರ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಬೆಳಗಿನಜಾವ ನಡೆದಿದೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಯ ಖಾಸಗಿ ಬಸ್‌ಕ್ಕೆ, ಡಿವೈಡರ್ ದಾಟಿ ಎದುರಿನಿಂದ ಬಂದ ಕಂಟೇನರ್ ಲಾರಿ ಭೀಕರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಬಸ್‌ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಬಸ್ ಅಗ್ನಿಗಾಹುತಿಯಾಗಿದೆ. ಪರಿಣಾಮವಾಗಿ ಬಸ್‌ನೊಳಗಿದ್ದ ಅನೇಕ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ಸಜೀವ ದಹನಗೊಂಡಿದ್ದಾರೆ.
ಈ ದುರ್ಘಟನೆ ಇಂದು ಬೆಳಗಿನಜಾವ ಸುಮಾರು 3.45ರ ಸುಮಾರಿಗೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಸುದ್ದಿ ತಿಳಿದ ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಮುಂದಾದರೂ ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಮುಂದಾದರೂ, ಬೆಂಕಿಯ ತೀವ್ರತೆಯಿಂದ ರಕ್ಷಣಾ ಕಾರ್ಯಕ್ಕೆ ಅಡಚಣೆ ಉಂಟಾಯಿತು. ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಹಾಗೂ ಶವಗಳನ್ನು ಹೊರತೆಗೆದ ಕಾರ್ಯದಲ್ಲಿ ತೊಡಗಿದ್ದಾರೆ.
ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಘಟನೆಗೆ ಸಂಬಂಧಿಸಿದಂತೆ ಹಿರಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದುಬರುವ ತನಿಖೆ ಮುಂದುವರಿದಿದೆ. ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ದುರಂತದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆ ಹಾಗೂ ಅವರ ಕುಟುಂಬಗಳಿಗೆ ಪರಿಹಾರ ಘೋಷಣೆ ಕುರಿತಂತೆ ಸರ್ಕಾರದಿಂದ ಅಧಿಕೃತ ಪ್ರಕಟಣೆ ಮಾಡಬೇಕಿದೆ.
Contents
🛑BIG BREAKING NEWS : ಚಿತ್ರದುರ್ಗ| ಹಿರಿಯೂರು ಬಳಿ ಭೀಕರ ರಸ್ತೆ ಅಪಘಾತ : ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಸಜೀವ ದಹನ• ಸೆಕ್ಯುಲರ್ ವಾಯ್ಸ್ ನ್ಯೂಸ್ ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ–48ರ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಬೆಳಗಿನಜಾವ ನಡೆದಿದೆ.ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಯ ಖಾಸಗಿ ಬಸ್‌ಕ್ಕೆ, ಡಿವೈಡರ್ ದಾಟಿ ಎದುರಿನಿಂದ ಬಂದ ಕಂಟೇನರ್ ಲಾರಿ ಭೀಕರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಬಸ್‌ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಬಸ್ ಅಗ್ನಿಗಾಹುತಿಯಾಗಿದೆ. ಪರಿಣಾಮವಾಗಿ ಬಸ್‌ನೊಳಗಿದ್ದ ಅನೇಕ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ಸಜೀವ ದಹನಗೊಂಡಿದ್ದಾರೆ.ಈ ದುರ್ಘಟನೆ ಇಂದು ಬೆಳಗಿನಜಾವ ಸುಮಾರು 3.45ರ ಸುಮಾರಿಗೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಸುದ್ದಿ ತಿಳಿದ ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಮುಂದಾದರೂ ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಮುಂದಾದರೂ, ಬೆಂಕಿಯ ತೀವ್ರತೆಯಿಂದ ರಕ್ಷಣಾ ಕಾರ್ಯಕ್ಕೆ ಅಡಚಣೆ ಉಂಟಾಯಿತು. ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಹಾಗೂ ಶವಗಳನ್ನು ಹೊರತೆಗೆದ ಕಾರ್ಯದಲ್ಲಿ ತೊಡಗಿದ್ದಾರೆ.ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಘಟನೆಗೆ ಸಂಬಂಧಿಸಿದಂತೆ ಹಿರಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದುಬರುವ ತನಿಖೆ ಮುಂದುವರಿದಿದೆ. ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ದುರಂತದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆ ಹಾಗೂ ಅವರ ಕುಟುಂಬಗಳಿಗೆ ಪರಿಹಾರ ಘೋಷಣೆ ಕುರಿತಂತೆ ಸರ್ಕಾರದಿಂದ ಅಧಿಕೃತ ಪ್ರಕಟಣೆ ಮಾಡಬೇಕಿದೆ.—————————————–• ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ತೀವ್ರ ಸಂತಾಪ “ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಯ ಬಸ್ ಚಿತ್ರದುರ್ಗದ ಹಿರಿಯೂರು ಬಳಿ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾಗಿದ್ದು, ಸುಮಾರು 20ಕ್ಕೂ ಹೆಚ್ಚು ಮಂದಿ ದುರ್ಘಟನೆಯಲ್ಲಿ ಮೃತಪಟ್ಟಿರುವ ಸುದ್ದಿ ಅತ್ಯಂತ ನೋವಿನ ಸಂಗತಿ. ಅಪಘಾತದಲ್ಲಿ ಮೃತಪಟ್ಟ ಎಲ್ಲರಿಗೂ ನನ್ನ ಭಾವಪೂರ್ಣ ನಮನಗಳು,” ಎಂದು ಅವರು ತಿಳಿಸಿದ್ದಾರೆ.ಇದೇ ವೇಳೆ, “ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ. ಈ ದುರ್ಘಟನೆ ನನಗೆ ವೈಯಕ್ತಿಕವಾಗಿ ಬಹಳ ನೋವು ತಂದಿದೆ,” ಎಂದು ಸಚಿವರು ಹೇಳಿದ್ದಾರೆ.
—————————————–
• ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ತೀವ್ರ ಸಂತಾಪ


