🟠 LOCAL EXPRESS:“ಕಲಬುರ್ಗಿ |ಶಿಕ್ಷಣ–ಸಾಹಿತ್ಯ–ಮಾಧ್ಯಮ ಸೇವೆಗೆ ಸನ್ಮಾನ:ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಮೂವರು ಮಹಿಳಾ ಸಾಧಕಿಯರ ಆಯ್ಕೆ”
• ಸೆಕ್ಯುಲರ್ ವಾಯ್ಸ್ ನ್ಯೂಸ್ ಕಲಬುರ್ಗಿ:
“ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಕೊಡಮಾಡುವ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಮೂವರು ಮಹಿಳಾ ಸಾಧಕಿಯರನ್ನು ಆಯ್ಕೆ ಮಾಡಲಾಗಿದೆ” ಎಂದು ಡಿವಿಪಿ ರಾಜ್ಯ ಸಂಚಾಲಕರು ಬಾಲಾಜಿ ಎಮ್ ಕಾಂಬಳೆ ಅವರು ಪ್ರಕಟಣೆಗೆ ತಿಳಿಸಿದ್ದಾರೆ.
2026ನೇ ಸಾಲಿನ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಪದವಿ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕಿ ಡಾ. ಪುಟ್ಟಮಣಿ ದೇವಿದಾಸ, ಶೈಕ್ಷಣಿಕ ಮತ್ತು ಸಾಹಿತ್ಯಕ ಕ್ಷೇತ್ರ ಮತ್ತು ಸರ್ಕಾರಿ ಆಟೋನೂಮಸ್ ಪದವಿ ಮಹಾವಿದ್ಯಾಲಯ ಕಲಬುರಗಿಯ ಪ್ರಾಂಶುಪಾಲರು ಡಾ. ಸವಿತಾ ತಿವಾರಿ, ಶೈಕ್ಷಣಿಕ ಕ್ಷೇತ್ರ ಹಾಗೂ ಪತ್ರಕರ್ತೆ ಗೀತಾ ಹೊಸಮನಿ ಅವರನ್ನು ಮಾಧ್ಯಮ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುವ ಮೂಲಕ ಸಾಧನೆ ಮಾಡಿದ ಮಹಿಳಾ ಸಾಧಕಿಯರನ್ನು ಗುರುತಿಸಿ ‘ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನ’ದಂದು” ಪ್ರಶಸ್ತಿ ನೀಡುತ್ತಾ ಬಂದಿದೆ.
ಆಯ್ಕೆಗೊಂಡ ಮೂವರು ಸಾಧಕಿಯರು ತಮ್ಮ ವೃತ್ತಿ ಸೇವೆಯ ಜೊತೆಗೆ ಹಲವಾರು ಸಾಮಾಜಿಕ ಸೇವೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವರು. ಇದೇ ಜನೆವರಿ 3ರಂದು (2026) ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ಮಾತೆ ಸಾವಿತ್ರಿಬಾಯಿ ಫುಲೆ ಅವರ 195ನೇ ಜನ್ಮ ಜಯಂತಿ ಅಂಗವಾಗಿ ನಡೆಯುವ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ “ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ” ಪ್ರಧಾನ ಮಾಡಲಾಗುತ್ತದೆ” ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಸಂಚಾಲಕ ಬಾಲಾಜಿ ಎಮ್ ಕಾಂಬಳೆ ಅವರು ಪ್ರಕಟಣೆಗೆ ತಿಳಿಸಿದ್ದಾರೆ.