ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಮಹತ್ವದ ನೆರವಾಗುತ್ತಿದೆ. ಸಿಂಧನೂರು ತಾಲೂಕಿನ ಉಪ್ಪಲದೊಡ್ಡಿ ಗ್ರಾಮದ ಹನುಮಮ್ಮ ಅವರು ಪ್ರತಿ ತಿಂಗಳು ದೊರೆಯುತ್ತಿದ್ದ ₹2,000 ಗೃಹಲಕ್ಷ್ಮಿ ಸಹಾಯಧನವನ್ನು ಉಳಿತಾಯ ಮಾಡಿ ಹೊಸ ಫ್ರಿಡ್ಜ್ ಖರೀದಿಸಿದ್ದಾರೆ.
ಬೆಲೆ ಏರಿಕೆಯ ಸಂದರ್ಭದಲ್ಲಿ ಈ ಸಹಾಯಧನವು ಹಾಲು, ತರಕಾರಿ ಹಾಗೂ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದ ಸಣ್ಣ–ಪುಟ್ಟ ಖರ್ಚುಗಳನ್ನು ನಿಭಾಯಿಸಲು ಕುಟುಂಬಗಳಿಗೆ ಸಹಕಾರಿಯಾಗಿದೆ. ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಹಣ ಜಮೆಯಾಗುತ್ತಿರುವುದು ಯೋಜನೆಯ ಯಶಸ್ಸಿಗೆ ಸಾಕ್ಷಿಯಾಗಿದೆ.
ಮಹಿಳೆಯರ ಕೈಗೆ ಹಣ ಬಂದಾಗ ಮಾರುಕಟ್ಟೆಯಲ್ಲಿ ಖರ್ಚಾಗುವುದರಿಂದ ಸ್ಥಳೀಯ ಆರ್ಥಿಕತೆಗೆ ಚೈತನ್ಯ ಸಿಗುತ್ತಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುವವರಿಗಿಂತ ಜನರ ಬದುಕಿನಲ್ಲಿ ಕಂಡುಬರುವ ಬದಲಾವಣೆಗಳೇ ಯೋಜನೆಯ ನಿಜವಾದ ಫಲಿತಾಂಶ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ.