🟠LOCAL NEWS :”ಕನಕಗಿರಿ|ಸ್ವಚ್ಛಗೊಳಿಸದ ಶುದ್ಧ ಕುಡಿಯುವ ನೀರಿನ ಘಟಕ : ಗ್ರಾಮಸ್ಥರ ಆಕ್ರೋಶ”

By admin

🟠LOCAL NEWS :” ಕನಕಗಿರಿ|ಸ್ವಚ್ಛಗೊಳಿಸದ ಶುದ್ಧ ಕುಡಿಯುವ ನೀರಿನ ಘಟಕ : ಗ್ರಾಮಸ್ಥರ ಆಕ್ರೋಶ”

• ಸೆಕ್ಯುಲರ್ ವಾಯ್ಸ್ ನ್ಯೂಸ್, ಕನಕಗಿರಿ

ತಾಲೂಕಿನ ಮಲ್ಲಿಗೆವಾಡ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಸ್ವಚ್ಛತೆಯ ಕೊರತೆಯಿಂದ ಅಶುದ್ಧಗೊಂಡು ದುರ್ವಾಸನೆ ಬೀರುತ್ತಿರುವುದು ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ಈ ಘಟಕದಲ್ಲಿ ದುರ್ವಾಸನೆ ಕಂಡುಬಂದರೂ ಸಂಬಂಧಪಟ್ಟವರು ಯಾವುದೇ ರೀತಿಯ ಸ್ವಚ್ಛತಾ ಕ್ರಮ ಕೈಗೊಳ್ಳದೆ ಬೇಜವಾಬ್ದಾರಿ ತೋರುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಈ ನೀರನ್ನು ಬಳಸುವುದರಿಂದ ಗ್ರಾಮಸ್ಥರಿಗೆ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ತಕ್ಷಣವೇ ಕುಡಿಯುವ ನೀರಿನ ಘಟಕವನ್ನು ಸ್ವಚ್ಛಗೊಳಿಸಿ, ಶುದ್ಧ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.