🟠LOCAL NEWS |ಕನಕಗಿರಿ |ಶಾಲೆ ಎದುರು ಚರಂಡಿ ಅವ್ಯವಸ್ಥೆ: ಸ್ವಚ್ಛತೆಗೆ ಸಾರ್ವಜನಿಕರ ಆಗ್ರಹ”

By admin

🟠LOCAL NEWS |ಕನಕಗಿರಿ |ಶಾಲೆ ಎದುರು ಚರಂಡಿ ಅವ್ಯವಸ್ಥೆ: ಸ್ವಚ್ಛತೆಗೆ ಸಾರ್ವಜನಿಕರ ಆಗ್ರಹ”

Contents
🟠LOCAL NEWS |ಕನಕಗಿರಿ |ಶಾಲೆ ಎದುರು ಚರಂಡಿ ಅವ್ಯವಸ್ಥೆ: ಸ್ವಚ್ಛತೆಗೆ ಸಾರ್ವಜನಿಕರ ಆಗ್ರಹ”• ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌ ಕನಕಗಿರಿ :ತಾಲೂಕಿನ ಮಲ್ಲಿಗೆವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಭಾಗದ ಹಲವಾರು ದಿನಗಳಿಂದ ಚರಂಡಿಯನ್ನು ಸ್ವಚ್ಛಗೊಳಿಸದೇ ಇರುವುದರಿಂದ ಸಾರ್ವಜನಿಕರಲ್ಲಿ ಅಸಮಾಧಾನ ವ್ಯಕ್ತವಾಗಿದೆ.ಕೆಲ ದಿನಗಳ ಹಿಂದೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಅಧ್ಯಕ್ಷ ರಾಮನಗೌಡ ಅವರು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಪಿಡಿಒ ಅವರಿಗೆ ಮನವಿ ಸಲ್ಲಿಸಿ ಚರಂಡಿ ಸ್ವಚ್ಛಗೊಳಿಸುವಂತೆ ಒತ್ತಾಯಿಸಿದ್ದರು. ತಕ್ಷಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರೂ ಇದುವರೆಗೆ ಯಾವುದೇ ಕ್ರಮ ಜರುಗಿಲ್ಲ. ಇದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಉದಾಹರಣೆ ಎಂದು ರಾಮನಗೌಡ ಅವರು ಆರೋಪಿಸಿದರು.ಶಾಲೆಗೆ ತೆರಳುವ ಮಕ್ಕಳ ಆರೋಗ್ಯಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಚರಂಡಿ ಸ್ವಚ್ಛಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

• ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌ ಕನಕಗಿರಿ :

ತಾಲೂಕಿನ ಮಲ್ಲಿಗೆವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಭಾಗದ ಹಲವಾರು ದಿನಗಳಿಂದ ಚರಂಡಿಯನ್ನು ಸ್ವಚ್ಛಗೊಳಿಸದೇ ಇರುವುದರಿಂದ ಸಾರ್ವಜನಿಕರಲ್ಲಿ ಅಸಮಾಧಾನ ವ್ಯಕ್ತವಾಗಿದೆ.

ಕೆಲ ದಿನಗಳ ಹಿಂದೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಅಧ್ಯಕ್ಷ ರಾಮನಗೌಡ ಅವರು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಪಿಡಿಒ ಅವರಿಗೆ ಮನವಿ ಸಲ್ಲಿಸಿ ಚರಂಡಿ ಸ್ವಚ್ಛಗೊಳಿಸುವಂತೆ ಒತ್ತಾಯಿಸಿದ್ದರು. ತಕ್ಷಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರೂ ಇದುವರೆಗೆ ಯಾವುದೇ ಕ್ರಮ ಜರುಗಿಲ್ಲ. ಇದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಉದಾಹರಣೆ ಎಂದು ರಾಮನಗೌಡ ಅವರು ಆರೋಪಿಸಿದರು.

ಶಾಲೆಗೆ ತೆರಳುವ ಮಕ್ಕಳ ಆರೋಗ್ಯಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಚರಂಡಿ ಸ್ವಚ್ಛಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

 ವರದಿ : ನಿರುಪಾದಿ ಕುಂಬಾರ