🛑ACCIDENT NEWS :”ಕನಕಗಿರಿ| ಎತ್ತಿನಬಂಡಿಗೆ ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ.!

By admin

🛑ACCIDENT NEWS :“ಕನಕಗಿರಿ| ಎತ್ತಿನಬಂಡಿಗೆ ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ.!


• ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌ ಕನಕಗಿರಿ

ಬೈಕ್ ಒಂದು ಚಾಲಕನ ನಿಯಂತ್ರಣ ತಪ್ಪಿ ಎತ್ತಿನ ಬಂಡಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನವಲಿ ಗ್ರಾಮದ ಹೊರವಲಯದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಬಂಕಾಪುರ ನಿವಾಸಿ ದೇವರಾಜ್ (26) ಎಂದು ಗುರುತಿಸಲಾಗಿದೆ. ದೇವರಾಜ್ ಅವರು ಕನಕಗಿರಿಯಿಂದ ಕಾರಟಗಿ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ದ್ವಿಚಕ್ರ ವಾಹನ ಎರಡು ತುಂಡಾಗಿದ್ದು, ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ : ನಿರುಪಾದಿ ಕುಂಬಾರ