🛑CRIME NEWS :”ಮಂಗಳೂರು| ರೈಲಿನಲ್ಲಿ ಗಾಂಜಾ ಸಾಗಾಟ ಆರೋಪ : ಇಬ್ಬರ ಬಂಧನ”

By admin

🛑CRIME NEWS :“ಮಂಗಳೂರು| ರೈಲಿನಲ್ಲಿ ಗಾಂಜಾ ಸಾಗಾಟ ಆರೋಪ : ಇಬ್ಬರ ಬಂಧನ”

• ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌ ಮಂಗಳೂರು:

ಬಿಹಾರ ರಾಜ್ಯದಿಂದ ರೈಲು ಮೂಲಕ ಮಂಗಳೂರಿಗೆ ಗಾಂಜಾ ತಂದು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಅಂತಾರಾಜ್ಯ ಆರೋಪಿತರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ರಸ್ತೆ ಬದಿಯಲ್ಲಿ ಸುಮಾರು 1 ಕೆಜಿ ತೂಕದ ಮಾದಕ ವಸ್ತು ಗಾಂಜಾವನ್ನು ವಶದಲ್ಲಿರಿಸಿಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು.

ಈ ವೇಳೆ ಬಿಹಾರ ರಾಜ್ಯದ ಸುನೀಲ್ ಕುಮಾರ್ ಹಾಗೂ ಬ್ರಿಜೇಶ್ ಶ್ರೀವಾಸ್ತವ ಅವರನ್ನು ಬಂಧಿಸಿ, ಅವರಿಂದ ಸುಮಾರು 1 ಕೆಜಿ ಗಾಂಜಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ವಿಚಾರಣೆಯಲ್ಲಿ ಆರೋಪಿತರು ಬಿಹಾರದಲ್ಲಿ ಗಾಂಜಾ ಖರೀದಿಸಿ ರೈಲಿನಲ್ಲಿ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ.

ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಮೊ.ನಂ. 08/2026 ಕಲಂ 20(b)(ii)(a) ಸೇರಿದಂತೆ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.