🚨 BREAKING NEWS : “ಬೀದರ|ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ! ಸಿ.ಎಂ.ಸಿದ್ದರಾಮಯ್ಯ ಸೇರಿ ಹಲವು ಗಣ್ಯರ ಸಂತಾಪ”
• ಸೆಕ್ಯುಲರ್ ವಾಯ್ಸ್ ನ್ಯೂಸ್ ಬೀದರ:
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆ (102) ಅವರು ಅನಾರೋಗ್ಯದಿಂದ ಸ್ವಗೃಹದಲ್ಲಿ ಶುಕ್ರವಾರ ತಡರಾತ್ರಿ 10:50ಕ್ಕೆ ನಿಧನ ಹೊಂದಿದ್ದಾರೆ.
ಡಾ.ಭೀಮಣ್ಣ ಖಂಡ್ರೆ ಅವರು ಸುಮಾರು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಒಂದು ವಾರದಿಂದ ಉಸಿರಾಟದ ತೊಂದರೆ ಹಾಗೂ ರಕ್ತದೋತ್ತಡದಲ್ಲಿ ಏರುಪೇರಾಗುತ್ತಿದ್ದ ಕಾರಣದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದ ಅವರು, ಕೆಲ ದಿನಗಳ ಹಿಂದೆ ಅವರನ್ನು ಮನೆಗೆ ಕರೆದುಕೊಂಡು ಹೋಗಲಾಗಿತ್ತು.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಈಶ್ವರ್ ಖಂಡ್ರೆ (Eshwar Khandre) ಮಾತನಾಡಿ, ಮನೆಯಲ್ಲೇ ಕೊನೆಯುಸಿರೆಳೆಯಬೇಕು ಎಂಬುದು ನಮ್ಮ ತಂದೆಯವರ ಕೊನೆಯಾಸೆಯಾಗಿತ್ತು. ಹೀಗಾಗಿ ಮನೆಗೆ ಶಿಫ್ಟ್ ಮಾಡಿರುವುದಾಗಿ ತಿಳಿಸಿದ್ದರು.
ಡಾ.ಭೀಮಣ್ಣ ಖಂಡ್ರೆ ಅವರ ಮಗನಾದ ಈಶ್ವರ್ ಖಂಡ್ರೆ ಅವರು ಪ್ರಸ್ತುತ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರೆ, ಅವರ ಮೊಮ್ಮಗ ಸಾಗರ್ ಖಂಡ್ರೆ ಅವರು ಬೀದರ್ ಜಿಲ್ಲೆಯ ಸಂಸದರಾಗಿದ್ದಾರೆ.
• ಇಂದು(ಶನಿವಾರ) ಅಂತ್ಯಕ್ರಿಯೆ :
ಭೀಮಣ್ಣ ಖಂಡ್ರೆಯವರ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಶನಿವಾರ (ಜ.17) ಸಾಯಾಂಕಾಲ 5 ಗಂಟೆಗೆ ಚಿಕಲಚಂದಾ ಬಳಿಯ ಶಾಂತಿಧಾಮ (ಅವರ ತೋಟದಲ್ಲಿ) ನೆರವೇರಲಿದೆ ಎಂದು ಅವರ ಮಗ, ಜಿಲ್ಲಾ ಉಸ್ತುವಾರಿ ಸಚಿವರೂ ಆದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ಭೀಮಣ್ಣ ಖಂಡ್ರೆಯವರ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಶನಿವಾರ (ಜ.17) ಸಾಯಾಂಕಾಲ 5 ಗಂಟೆಗೆ ಚಿಕಲಚಂದಾ ಬಳಿಯ ಶಾಂತಿಧಾಮ (ಅವರ ತೋಟದಲ್ಲಿ) ನೆರವೇರಲಿದೆ ಎಂದು ಅವರ ಮಗ, ಜಿಲ್ಲಾ ಉಸ್ತುವಾರಿ ಸಚಿವರೂ ಆದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ಶನಿವಾರ ಬೆಳಿಗ್ಗೆ ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರವನ್ನು ಭಾಲ್ಕಿಯ ಗಾಂಧಿ ಗಂಜ್ ನಲ್ಲಿರುವ ಅವರ ಮನೆಯ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಸಂಜೆ ಭಾಲ್ಕಿ ಹೊರವಲಯದ ಚಿಕಲಚಂದಾ ಗ್ರಾಮ ಸಮೀಪದ ಶಾಂತಿಧಾಮದಲ್ಲಿ ಭೀಮಣ್ಣ ಖಂಡ್ರೆ ಅವರ ಪತ್ನಿ ದಿವಂಗತ ಲಕ್ಷ್ಮೀಬಾಯಿ ಅವರ ಸಮಾಧಿಯ ಪಕ್ಕದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನರವೇರಲಿವೆ ಎಂದು ಶುಕ್ರವಾರ ರಾತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
• ರಾಜಕೀಯ ಜೀವನ :
ಭೀಮಣ್ಣ ಖಂಡ್ರೆ ಅವರು 1953ರಲ್ಲಿ ಭಾಲ್ಕಿ ಪುರಸಭೆಯ ಪ್ರಥಮ ಚುನಾಯಿತ ಅಧ್ಯಕ್ಷರಾಗುವ ಮೂಲಕ ರಾಜಕೀಯ ಜೀವನಕ್ಕೆ ಪ್ರವೇಶಿಸಿದ್ದರು. 1962ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ ಅವರು, 4 ಬಾರಿ ಶಾಸಕರಾಗಿ, 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಎಂ.ವೀರಪ್ಪ ಮೊಯ್ಲಿ ಅವರ ಸಚಿವ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಸಹಕಾರಿ ಧುರೀಣರಾಗಿ ಮತ್ತು ರೈತರ ಕಲ್ಯಾಣದ ಬಗ್ಗೆ ಕಳಕಳಿ ಹೊಂದಿದ್ದ ಭೀಮಣ್ಣ ಖಂಡ್ರೆ ಅವರು ಹಳ್ಳಿಖೇಡ್ ನಲ್ಲಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಹುಣಜಿಯಲ್ಲಿರುವ ಮಹಾತ್ಮಾಗಾಂಧೀ ಸಕ್ಕರೆ ಕಾರ್ಖಾನೆಯ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
• ಶಿಕ್ಷಣ ಧುರೀಣ:
ಶಾಂತಿವರ್ಧಕ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಜಿಲ್ಲೆಯ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ದೊರಕಿಸಲು ಬೀದರ್ ನಲ್ಲಿ ಅಕ್ಕಮಹಾದೇವಿ ಕಾಲೇಜು, ಭಾಲ್ಕಿಯಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಿ ಸಾವಿರಾರು ಯುವಜನರ ಭವಿಷ್ಯ ರೂಪಿಸಿದ್ದರು. ತಮ್ಮ ಸ್ವಕ್ಷೇತ್ರ ಭಾಲ್ಕಿಯಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸುವ ಸಲುವಾಗಿ ಸಚಿವ ಸ್ಥಾನವನ್ನೇ ತ್ಯಾಗ ಮಾಡಿದ್ದರು.
ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಮುದಾಯವನ್ನು ಒಗ್ಗೂಡಿಸುವಲ್ಲಿ ಶ್ರಮಿಸಿದ ಅವರು ಕೆಲವೇ ಸಾವಿರ ಇದ್ದ ಸಭಾದ ಸದಸ್ಯತ್ವವನ್ನು ಲಕ್ಷಕ್ಕೆ ತೆಗೆದುಕೊಂಡು ಹೋಗುವ ಮೂಲಕ ತಮ್ಮ ಸಂಘಟನಾ ಸಾಮರ್ಥ್ಯ ಪ್ರದರ್ಶಿಸಿದ್ದರು.
• ಖಂಡ್ರೆ ನಿಧನಕ್ಕೆ ಸಿ.ಎಂ. ಸಿದ್ದರಾಮಯ್ಯ ಸಂತಾಪ :
ನಾಡಿನ ಹಿರಿಯ ರಾಜಕಾರಣಿಯಾಗಿದ್ದ ಭೀಮಣ್ಣ ಖಂಡ್ರೆ ನಿಧನದಿಂದ ದುಖಿ:ತನಾಗಿದ್ದೇನೆ.ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

Contents
🚨 BREAKING NEWS : “ಬೀದರ|ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ! ಸಿ.ಎಂ.ಸಿದ್ದರಾಮಯ್ಯ ಸೇರಿ ಹಲವು ಗಣ್ಯರ ಸಂತಾಪ”• ಸೆಕ್ಯುಲರ್ ವಾಯ್ಸ್ ನ್ಯೂಸ್ ಬೀದರ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆ (102) ಅವರು ಅನಾರೋಗ್ಯದಿಂದ ಸ್ವಗೃಹದಲ್ಲಿ ಶುಕ್ರವಾರ ತಡರಾತ್ರಿ 10:50ಕ್ಕೆ ನಿಧನ ಹೊಂದಿದ್ದಾರೆ.ಡಾ.ಭೀಮಣ್ಣ ಖಂಡ್ರೆ ಅವರು ಸುಮಾರು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಒಂದು ವಾರದಿಂದ ಉಸಿರಾಟದ ತೊಂದರೆ ಹಾಗೂ ರಕ್ತದೋತ್ತಡದಲ್ಲಿ ಏರುಪೇರಾಗುತ್ತಿದ್ದ ಕಾರಣದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದ ಅವರು, ಕೆಲ ದಿನಗಳ ಹಿಂದೆ ಅವರನ್ನು ಮನೆಗೆ ಕರೆದುಕೊಂಡು ಹೋಗಲಾಗಿತ್ತು.ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಈಶ್ವರ್ ಖಂಡ್ರೆ (Eshwar Khandre) ಮಾತನಾಡಿ, ಮನೆಯಲ್ಲೇ ಕೊನೆಯುಸಿರೆಳೆಯಬೇಕು ಎಂಬುದು ನಮ್ಮ ತಂದೆಯವರ ಕೊನೆಯಾಸೆಯಾಗಿತ್ತು. ಹೀಗಾಗಿ ಮನೆಗೆ ಶಿಫ್ಟ್ ಮಾಡಿರುವುದಾಗಿ ತಿಳಿಸಿದ್ದರು.ಡಾ.ಭೀಮಣ್ಣ ಖಂಡ್ರೆ ಅವರ ಮಗನಾದ ಈಶ್ವರ್ ಖಂಡ್ರೆ ಅವರು ಪ್ರಸ್ತುತ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರೆ, ಅವರ ಮೊಮ್ಮಗ ಸಾಗರ್ ಖಂಡ್ರೆ ಅವರು ಬೀದರ್ ಜಿಲ್ಲೆಯ ಸಂಸದರಾಗಿದ್ದಾರೆ.• ಇಂದು(ಶನಿವಾರ) ಅಂತ್ಯಕ್ರಿಯೆ :
ಭೀಮಣ್ಣ ಖಂಡ್ರೆಯವರ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಶನಿವಾರ (ಜ.17) ಸಾಯಾಂಕಾಲ 5 ಗಂಟೆಗೆ ಚಿಕಲಚಂದಾ ಬಳಿಯ ಶಾಂತಿಧಾಮ (ಅವರ ತೋಟದಲ್ಲಿ) ನೆರವೇರಲಿದೆ ಎಂದು ಅವರ ಮಗ, ಜಿಲ್ಲಾ ಉಸ್ತುವಾರಿ ಸಚಿವರೂ ಆದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.ಶನಿವಾರ ಬೆಳಿಗ್ಗೆ ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರವನ್ನು ಭಾಲ್ಕಿಯ ಗಾಂಧಿ ಗಂಜ್ ನಲ್ಲಿರುವ ಅವರ ಮನೆಯ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಸಂಜೆ ಭಾಲ್ಕಿ ಹೊರವಲಯದ ಚಿಕಲಚಂದಾ ಗ್ರಾಮ ಸಮೀಪದ ಶಾಂತಿಧಾಮದಲ್ಲಿ ಭೀಮಣ್ಣ ಖಂಡ್ರೆ ಅವರ ಪತ್ನಿ ದಿವಂಗತ ಲಕ್ಷ್ಮೀಬಾಯಿ ಅವರ ಸಮಾಧಿಯ ಪಕ್ಕದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನರವೇರಲಿವೆ ಎಂದು ಶುಕ್ರವಾರ ರಾತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.• ರಾಜಕೀಯ ಜೀವನ :ಭೀಮಣ್ಣ ಖಂಡ್ರೆ ಅವರು 1953ರಲ್ಲಿ ಭಾಲ್ಕಿ ಪುರಸಭೆಯ ಪ್ರಥಮ ಚುನಾಯಿತ ಅಧ್ಯಕ್ಷರಾಗುವ ಮೂಲಕ ರಾಜಕೀಯ ಜೀವನಕ್ಕೆ ಪ್ರವೇಶಿಸಿದ್ದರು. 1962ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ ಅವರು, 4 ಬಾರಿ ಶಾಸಕರಾಗಿ, 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಎಂ.ವೀರಪ್ಪ ಮೊಯ್ಲಿ ಅವರ ಸಚಿವ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.ಸಹಕಾರಿ ಧುರೀಣರಾಗಿ ಮತ್ತು ರೈತರ ಕಲ್ಯಾಣದ ಬಗ್ಗೆ ಕಳಕಳಿ ಹೊಂದಿದ್ದ ಭೀಮಣ್ಣ ಖಂಡ್ರೆ ಅವರು ಹಳ್ಳಿಖೇಡ್ ನಲ್ಲಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಹುಣಜಿಯಲ್ಲಿರುವ ಮಹಾತ್ಮಾಗಾಂಧೀ ಸಕ್ಕರೆ ಕಾರ್ಖಾನೆಯ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.• ಶಿಕ್ಷಣ ಧುರೀಣ:ಶಾಂತಿವರ್ಧಕ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಜಿಲ್ಲೆಯ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ದೊರಕಿಸಲು ಬೀದರ್ ನಲ್ಲಿ ಅಕ್ಕಮಹಾದೇವಿ ಕಾಲೇಜು, ಭಾಲ್ಕಿಯಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಿ ಸಾವಿರಾರು ಯುವಜನರ ಭವಿಷ್ಯ ರೂಪಿಸಿದ್ದರು. ತಮ್ಮ ಸ್ವಕ್ಷೇತ್ರ ಭಾಲ್ಕಿಯಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸುವ ಸಲುವಾಗಿ ಸಚಿವ ಸ್ಥಾನವನ್ನೇ ತ್ಯಾಗ ಮಾಡಿದ್ದರು.ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಮುದಾಯವನ್ನು ಒಗ್ಗೂಡಿಸುವಲ್ಲಿ ಶ್ರಮಿಸಿದ ಅವರು ಕೆಲವೇ ಸಾವಿರ ಇದ್ದ ಸಭಾದ ಸದಸ್ಯತ್ವವನ್ನು ಲಕ್ಷಕ್ಕೆ ತೆಗೆದುಕೊಂಡು ಹೋಗುವ ಮೂಲಕ ತಮ್ಮ ಸಂಘಟನಾ ಸಾಮರ್ಥ್ಯ ಪ್ರದರ್ಶಿಸಿದ್ದರು.• ಖಂಡ್ರೆ ನಿಧನಕ್ಕೆ ಸಿ.ಎಂ. ಸಿದ್ದರಾಮಯ್ಯ ಸಂತಾಪ :ನಾಡಿನ ಹಿರಿಯ ರಾಜಕಾರಣಿಯಾಗಿದ್ದ ಭೀಮಣ್ಣ ಖಂಡ್ರೆ ನಿಧನದಿಂದ ದುಖಿ:ತನಾಗಿದ್ದೇನೆ.ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

