BREAKING NEWS :” ಬೀದರ|ಅನುಮಾನಾಸ್ಪದ ವಸ್ತು ಸ್ಫೋಟ :  ಐದು ಮಕ್ಕಳು ಸೇರಿ ಏಳು ಮಂದಿಗೆ ಗಾಯ ! ಗ್ರಾಮದಲ್ಲಿ ಭೀತಿ!!

By admin

🚨 BREAKING NEWS :” ಬೀದರ|ಅನುಮಾನಾಸ್ಪದ ವಸ್ತು ಸ್ಫೋಟ : ಐದು ಮಕ್ಕಳು ಸೇರಿ ಏಳು ಮಂದಿಗೆ ಗಾಯ! ಗ್ರಾಮದಲ್ಲಿ ಭೀತಿ!!

 

Contents
🚨 BREAKING NEWS :” ಬೀದರ|ಅನುಮಾನಾಸ್ಪದ ವಸ್ತು ಸ್ಫೋಟ : ಐದು ಮಕ್ಕಳು ಸೇರಿ ಏಳು ಮಂದಿಗೆ ಗಾಯ! ಗ್ರಾಮದಲ್ಲಿ ಭೀತಿ!!• ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌ ಬೀದರ್ : ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಶುಕ್ರವಾರ ಬೆಳಂಬೆಳಿಗ್ಗೆ ಅನುಮಾನಾಸ್ಪದ ವಸ್ತು ಸ್ಫೋಟ ಸಂಭವಿಸಿ, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆಗೆ ಹೋಗುತ್ತಿದ್ದ ಐದು ಮಕ್ಕಳು ಸೇರಿ ಒಟ್ಟು ಏಳು ಮಂದಿ ಗಾಯಗೊಂಡಿದ್ದಾರೆ.ಸ್ಫೋಟದಲ್ಲಿ ಅನ್ವರ್ ಸಾಬ್ (18) ಹಾಗೂ ಜಬ್ಬಾರ್ ಸಾಬ್ (65) ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹೈದ್ರಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ. ಪರಿಜಾರ್ (8), ಅಜೀಜ್ (5), ಬುಶ್ರಾ (4) ಸೇರಿದಂತೆ ಮೂವರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಯ ಮಾಹಿತಿ ತಿಳಿದ ತಕ್ಷಣ ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ಕಾರಣವಾದ ವಸ್ತುವಿನ ಮಾದರಿಗಳನ್ನು ಸಂಗ್ರಹಿಸಲು ಶೀಘ್ರದಲ್ಲೇ ಸೋಕೋ (SOCO) ತಂಡವನ್ನು ಸ್ಥಳಕ್ಕೆ ಕರೆಸಲಾಗುತ್ತಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.ಕಳೆದ ಆರು ತಿಂಗಳ ಅವಧಿಯಲ್ಲಿ ಇದೇ ಗ್ರಾಮದಲ್ಲಿ ಎರಡನೇ ಬಾರಿ ಸ್ಫೋಟ ಸಂಭವಿಸಿರುವುದು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಫೋಟದ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.

• ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌ ಬೀದರ್ : 

ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಶುಕ್ರವಾರ ಬೆಳಂಬೆಳಿಗ್ಗೆ ಅನುಮಾನಾಸ್ಪದ ವಸ್ತು ಸ್ಫೋಟ ಸಂಭವಿಸಿ, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆಗೆ ಹೋಗುತ್ತಿದ್ದ ಐದು ಮಕ್ಕಳು ಸೇರಿ ಒಟ್ಟು ಏಳು ಮಂದಿ ಗಾಯಗೊಂಡಿದ್ದಾರೆ.

ಸ್ಫೋಟದಲ್ಲಿ ಅನ್ವರ್ ಸಾಬ್ (18) ಹಾಗೂ ಜಬ್ಬಾರ್ ಸಾಬ್ (65) ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹೈದ್ರಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ. ಪರಿಜಾರ್ (8), ಅಜೀಜ್ (5), ಬುಶ್ರಾ (4) ಸೇರಿದಂತೆ ಮೂವರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ಕಾರಣವಾದ ವಸ್ತುವಿನ ಮಾದರಿಗಳನ್ನು ಸಂಗ್ರಹಿಸಲು ಶೀಘ್ರದಲ್ಲೇ ಸೋಕೋ (SOCO) ತಂಡವನ್ನು ಸ್ಥಳಕ್ಕೆ ಕರೆಸಲಾಗುತ್ತಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಆರು ತಿಂಗಳ ಅವಧಿಯಲ್ಲಿ ಇದೇ ಗ್ರಾಮದಲ್ಲಿ ಎರಡನೇ ಬಾರಿ ಸ್ಫೋಟ ಸಂಭವಿಸಿರುವುದು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಫೋಟದ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.