🚑 ACCIDENT NEWS  “ಯಲಬುರ್ಗಾ|ಭೀಕರ ರಸ್ತೆ ಅಪಘಾತ: ಲಾರಿ –ಬೈಕ್ ಡಿಕ್ಕಿ, ಇಬ್ಬರು ಸ್ಥಳ ದಲ್ಲೇ ಸಾವು”

By admin

 ACCIDENT NEWS  “ಯಲಬುರ್ಗಾ|ಭೀಕರ ರಸ್ತೆ ಅಪಘಾತ: ಲಾರಿ –ಬೈಕ್ ಡಿಕ್ಕಿ, ಇಬ್ಬರು ಸ್ಥಳ ದಲ್ಲೇ ಸಾವು”

Contents
 ACCIDENT NEWS  “ಯಲಬುರ್ಗಾ|ಭೀಕರ ರಸ್ತೆ ಅಪಘಾತ: ಲಾರಿ –ಬೈಕ್ ಡಿಕ್ಕಿ, ಇಬ್ಬರು ಸ್ಥಳ ದಲ್ಲೇ ಸಾವು”• ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌ ಯಲಬುರ್ಗಾ:ತಾಲೂಕಿನ ಉಪ್ಪಲದಿನ್ನಿ ಗ್ರಾಮದ ಸಮೀಪದ ಎನ್‌ಎಚ್–50ರಲ್ಲಿ ಗುರುವಾರ ಬೆಳಿಗ್ಗೆ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಕುಷ್ಟಗಿಯಿಂದ ಹೊಸಪೇಟೆ ಕಡೆ ತೆರಳುತ್ತಿದ್ದ ವೇಳೆ, ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದ ಲಾರಿ ಚಾಲಕನು ಬಲಭಾಗದಿಂದ ಎಡಭಾಗಕ್ಕೆ ತಿರುಗಿಸುವಾಗ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಡಿಕ್ಕಿಯ ಪರಿಣಾಮ ಇಬ್ಬರೂ ಲಾರಿ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಶ್ರೀನಿವಾಸ್ (26) ಹಾಗೂ ಸಿದ್ದನಗೌಡ್ರ (25) ಮೃತ ದುರ್ದೈವಿಗಳು. ಇವರು ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮುಸಲಾಪುರ ಗ್ರಾಮದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.ಸಂಬಂಧಿಯ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ ಎಂಬ ಮಾಹಿತಿ ಲಭಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

• ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌ ಯಲಬುರ್ಗಾ:

ತಾಲೂಕಿನ ಉಪ್ಪಲದಿನ್ನಿ ಗ್ರಾಮದ ಸಮೀಪದ ಎನ್‌ಎಚ್–50ರಲ್ಲಿ ಗುರುವಾರ ಬೆಳಿಗ್ಗೆ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಕುಷ್ಟಗಿಯಿಂದ ಹೊಸಪೇಟೆ ಕಡೆ ತೆರಳುತ್ತಿದ್ದ ವೇಳೆ, ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದ ಲಾರಿ ಚಾಲಕನು ಬಲಭಾಗದಿಂದ ಎಡಭಾಗಕ್ಕೆ ತಿರುಗಿಸುವಾಗ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಡಿಕ್ಕಿಯ ಪರಿಣಾಮ ಇಬ್ಬರೂ ಲಾರಿ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಶ್ರೀನಿವಾಸ್ (26) ಹಾಗೂ ಸಿದ್ದನಗೌಡ್ರ (25) ಮೃತ ದುರ್ದೈವಿಗಳು. ಇವರು ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮುಸಲಾಪುರ ಗ್ರಾಮದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಯ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ ಎಂಬ ಮಾಹಿತಿ ಲಭಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.