🔵 LOCAL EXPRESS :”ಕೆಂಭಾವಿ |ಬೀದಿನಾಯಿಗಳ ಹಾವಳಿ ತಡೆಗೆ ಪುರಸಭೆ ಕಾರ್ಯಾಚರಣೆ”

By admin

 LOCAL EXPRESS : “ಕೆಂಭಾವಿ |ಬೀದಿನಾಯಿಗಳ ಹಾವಳಿ ತಡೆಗೆ ಪುರಸಭೆ ಕಾರ್ಯಾಚರಣೆ”

• ಸೆಕ್ಯುಲರ್ ವಾಯ್ಸ್ ನ್ಯೂಸ್ ಕೆಂಭಾವಿ:

‘ಪಟ್ಟಣದಲ್ಲಿ ಹೆಚ್ಚುತ್ತಿರುವ ಬೀದಿನಾಯಿಗಳ ಹಾವಳಿ ನಿಯಂತ್ರಣಕ್ಕೆ ಪುರಸಭೆ ವತಿಯಿಂದ ಶುಕ್ರವಾರ ಸೆರೆ ಕಾರ್ಯಾಚರಣೆ ನಡೆಸಲಾಯಿತು.

ಇತ್ತೀಚಿನ ತಿಂಗಳುಗಳಲ್ಲಿ ಬೀದಿನಾಯಿಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಶಾಲಾ ಮಕ್ಕಳು, ಪಾದಾಚಾರಿಗಳು ಹಾಗೂ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಪುರಸಭೆ ಆಡಳಿತ ಪರಿಣಿತರ ತಂಡದೊಂದಿಗೆ ಕ್ರಮ ಕೈಗೊಂಡಿತು.

ಮಾರುಕಟ್ಟೆ, ಬಸ್ ನಿಲ್ದಾಣ ಹಾಗೂ ಜನನಿಬಿಡ ರಸ್ತೆಗಳಲ್ಲಿ ಬೀಡುಬಿಟ್ಟಿದ್ದ ನಾಯಿಗಳನ್ನು ಜಾಲ ಬೀಸಿ ಸೆರೆಹಿಡಿಯಲಾಯಿತು. ಸೆರೆಹಿಡಿದ ನಾಯಿಗಳನ್ನು ಸುರಕ್ಷಿತ ಕೇಂದ್ರಕ್ಕೆ ಸ್ಥಳಾಂತರಿಸಿ, ಸಂತಾನಶಕ್ತಿ ಹರಣ ಚಿಕಿತ್ಸೆ ಹಾಗೂ ರೇಬೀಸ್ ನಿರೋಧಕ ಲಸಿಕೆ ನೀಡಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ಪಟ್ಟಣದ ಎಲ್ಲಾ ವಾರ್ಡ್‌ಗಳಲ್ಲೂ ಹಂತ ಹಂತವಾಗಿ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅವರು ಹೇಳಿದರು.