🔴 BREAKING NEWS :” ಸಿಂಧನೂರ| ನವಜಾತ ಶಿಶು ಸಾವು : ತಾಯಿ ಮಕ್ಕಳ ಆಸ್ಪತ್ರೆ ಮುಂದೆ ಸಂಬಂಧಿಕರ ಪ್ರತಿಭಟನೆ”

By admin

BREAKING NEWS :” ಸಿಂಧನೂರ| ನವಜಾತ ಶಿಶು ಸಾವು : ತಾಯಿ ಮಕ್ಕಳ ಆಸ್ಪತ್ರೆ ಮುಂದೆ ಸಂಬಂಧಿಕರ ಪ್ರತಿಭಟನೆ”

• ಸೆಕ್ಯುಲರ್ ವಾಯ್ಸ್ ನ್ಯೂಸ್ ಸಿಂಧನೂರು:

ನಗರದ ತಾಯಿ ಮಕ್ಕಳ ಆಸ್ಪತ್ರೆ ಮುಂಭಾಗ ನವಜಾತ ಶಿಶು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಕರು ಆಸ್ಪತ್ರೆ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ತಿಡಿಗೋಳ ಗ್ರಾಮದ ಚಂದ್ರಕಲಾ (25), ಪತಿ ಅಂಬರೀಶ್ ಅವರಿಗೆ ಮದುವೆಯಾಗಿ ಏಳು ವರ್ಷಗಳ ಬಳಿಕ ಗರ್ಭಧಾರಣೆ ಆಗಿತ್ತು. ಆದರೆ ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಯಾವುದೇ ಅನಾಹುತಕರ ಘಟನೆ ನಡೆಯದಂತೆ ಆಸ್ಪತ್ರೆ ಮುಂಭಾಗ ಪೊಲೀಸ್ ಭದ್ರತೆ ಕಲ್ಪಿಸಲಾಯಿತು.

ಪ್ರತಿಭಟನೆ ವೇಳೆ ಸಂಬಂಧಿಕರು ನ್ಯಾಯಕ್ಕಾಗಿ ಆಗ್ರಹಿಸಿದರು.