LOCAL EXPRESS :“ಕನಕಗಿರಿ: 100 ಹಾಸಿಗೆ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ-ಶಿವರಾಜ ತಂಗಡಗಿ”

Contents
LOCAL EXPRESS :“ಕನಕಗಿರಿ: 100 ಹಾಸಿಗೆ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ-ಶಿವರಾಜ ತಂಗಡಗಿ”• ಸೆಕ್ಯುಲರ್ ವಾಯ್ಸ್ ನ್ಯೂಸ್ ಕನಕಗಿರಿಪಟ್ಟಣದಲ್ಲಿ ಜನಾರೋಗ್ಯದ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ 100 ಹಾಸಿಗೆಗಳ ಸುಸಜ್ಜಿತ ಸರಕಾರಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಭಾನುವಾರ ಶಂಖುಸ್ಥಾಪನೆ ನೆರವೇರಿಸಲಾಯಿತು.ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ತಾಲೂಕು ರಚನೆಯಾಗಿ 13 ವರ್ಷಗಳಾದರೂ ಅಗತ್ಯ ಮೂಲಸೌಕರ್ಯ ಒದಗಿಸುವಲ್ಲಿ ವಿಳಂಬವಾಗಿತ್ತು. ಆದರೆ ಕಳೆದ ಮೂರು ವರ್ಷಗಳಿಂದ ಕನಕಗಿರಿಯಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದು ಹೇಳಿದರು.ಪಟ್ಟಣದ ಹೊರವಲಯದ ಮಲ್ಲಯ್ಯ ತಾತ ದೇವಸ್ಥಾನದ ಹತ್ತಿರದ ಸರ್ವೇ ನಂ. 288/2ರ 6 ಎಕರೆ ಜಮೀನಿನಲ್ಲಿ ₹29.39 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಮಾದರಿಯ 100 ಹಾಸಿಗೆಗಳ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಒಟ್ಟು ಯೋಜನೆಗೆ ₹42 ಕೋಟಿ ಅನುದಾನ ಮೀಸಲಾಗಿದ್ದು, ಕಟ್ಟಡ ನಿರ್ಮಾಣಕ್ಕೆ ₹29 ಕೋಟಿ ಹಾಗೂ ಉಳಿದ ಮೊತ್ತವನ್ನು ಮೂಲಭೂತ ಸೌಕರ್ಯಗಳಿಗೆ ಬಳಸಲಾಗುತ್ತದೆ ಎಂದು ವಿವರಿಸಿದರು.ಈ ಆಸ್ಪತ್ರೆ ನಿರ್ಮಾಣದಿಂದ ತಾಲೂಕಿನ ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆಗಳು ಲಭ್ಯವಾಗಲಿವೆ. ಆಸ್ಪತ್ರೆ ಕಟ್ಟಡವನ್ನು ಗ್ರೌಂಡ್ ಪ್ಲಸ್ 3 (G+3) ಮಾದರಿಯಲ್ಲಿ ನಾಲ್ಕು ಅಂತಸ್ತುಗಳಲ್ಲಿ ನಿರ್ಮಿಸಲಾಗುತ್ತದೆ ಎಂದು ತಿಳಿಸಿದರು.
ತಾಲೂಕಿನಲ್ಲಿ ಪ್ರಜಾಸೌಧ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಅಗ್ನಿಶಾಮಕ ದಳ ಕಚೇರಿ, ಬಸ್ ಡಿಪೋ, ತೋಟಗಾರಿಕೆ ಪಾರ್ಕ್ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳು ಟೆಂಡರ್ ಹಂತದಲ್ಲಿವೆ. ಸಾಂಸ್ಕೃತಿಕ ಭವನಕ್ಕೆ ₹2 ಕೋಟಿ ಅನುದಾನ ನೀಡಲಾಗಿದೆ ಎಂದು ಹೇಳಿದರು.ಕ್ರೀಡಾಂಗಣ ನಿರ್ಮಾಣಕ್ಕೂ ಒತ್ತು ನೀಡಲಾಗಿದ್ದು, 5 ಎಕರೆ ಜಮೀನು ಒದಗಿಸಿದರೆ ಆಧುನಿಕ ತಾಲೂಕು ಕ್ರೀಡಾಂಗಣ ನಿರ್ಮಿಸಲಾಗುವುದು ಎಂದು ತಿಳಿಸಿದರು. ಅಮೃತ ಯೋಜನೆಯಡಿ ₹160 ಕೋಟಿ ಅನುದಾನ ದೊರಕಿದ್ದು, ಇದು ತಾಲೂಕಿನ ಅಭಿವೃದ್ಧಿಗೆ ಮತ್ತಷ್ಟು ಬಲ ನೀಡಲಿದೆ ಎಂದರು.ಈ ಸಂದರ್ಭದಲ್ಲಿ ಚನ್ನಮಲ್ಲ ಶ್ರೀಗಳು ಕಾರ್ಯಕ್ರಮದ ದಿವಸಾನ್ಯ ವಹಿಸಿದ್ದರು. ತಹಸೀಲ್ದಾರ್ ವಿಶ್ವನಾಥ ಮುರುಡಿ, ತಾಲೂಕ್ ಪಂಚಾಯಿತಿ ಇಒ ಕೆ. ರಾಜಶೇಖರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷಣ ಕಟ್ಟಿಮನಿ, ಅಧ್ಯಕ್ಷೆ ತನುಶ್ರೀ ಟಿ.ಜೆ. ರಾಮಚಂದ್ರ, ಉಪಾಧ್ಯಕ್ಷ ಕಂಠೀರಂಗ ನಾಯಕ, ಸದಸ್ಯರು ಹಾಗೂ ಗಣ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.ಇದಲ್ಲದೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಯಡಿ ಕನಕ ಭವನ ಕಟ್ಟಡ ನಿರ್ಮಾಣ ಕಾಮಗಾರಿಗೂ ಚಾಲನೆ ನೀಡಲಾಯಿತು.
• ಸೆಕ್ಯುಲರ್ ವಾಯ್ಸ್ ನ್ಯೂಸ್ ಕನಕಗಿರಿ
ಪಟ್ಟಣದಲ್ಲಿ ಜನಾರೋಗ್ಯದ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ 100 ಹಾಸಿಗೆಗಳ ಸುಸಜ್ಜಿತ ಸರಕಾರಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಭಾನುವಾರ ಶಂಖುಸ್ಥಾಪನೆ ನೆರವೇರಿಸಲಾಯಿತು.
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ತಾಲೂಕು ರಚನೆಯಾಗಿ 13 ವರ್ಷಗಳಾದರೂ ಅಗತ್ಯ ಮೂಲಸೌಕರ್ಯ ಒದಗಿಸುವಲ್ಲಿ ವಿಳಂಬವಾಗಿತ್ತು. ಆದರೆ ಕಳೆದ ಮೂರು ವರ್ಷಗಳಿಂದ ಕನಕಗಿರಿಯಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದು ಹೇಳಿದರು.
ಪಟ್ಟಣದ ಹೊರವಲಯದ ಮಲ್ಲಯ್ಯ ತಾತ ದೇವಸ್ಥಾನದ ಹತ್ತಿರದ ಸರ್ವೇ ನಂ. 288/2ರ 6 ಎಕರೆ ಜಮೀನಿನಲ್ಲಿ ₹29.39 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಮಾದರಿಯ 100 ಹಾಸಿಗೆಗಳ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಒಟ್ಟು ಯೋಜನೆಗೆ ₹42 ಕೋಟಿ ಅನುದಾನ ಮೀಸಲಾಗಿದ್ದು, ಕಟ್ಟಡ ನಿರ್ಮಾಣಕ್ಕೆ ₹29 ಕೋಟಿ ಹಾಗೂ ಉಳಿದ ಮೊತ್ತವನ್ನು ಮೂಲಭೂತ ಸೌಕರ್ಯಗಳಿಗೆ ಬಳಸಲಾಗುತ್ತದೆ ಎಂದು ವಿವರಿಸಿದರು.
ಈ ಆಸ್ಪತ್ರೆ ನಿರ್ಮಾಣದಿಂದ ತಾಲೂಕಿನ ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆಗಳು ಲಭ್ಯವಾಗಲಿವೆ. ಆಸ್ಪತ್ರೆ ಕಟ್ಟಡವನ್ನು ಗ್ರೌಂಡ್ ಪ್ಲಸ್ 3 (G+3) ಮಾದರಿಯಲ್ಲಿ ನಾಲ್ಕು ಅಂತಸ್ತುಗಳಲ್ಲಿ ನಿರ್ಮಿಸಲಾಗುತ್ತದೆ ಎಂದು ತಿಳಿಸಿದರು.
ತಾಲೂಕಿನಲ್ಲಿ ಪ್ರಜಾಸೌಧ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಅಗ್ನಿಶಾಮಕ ದಳ ಕಚೇರಿ, ಬಸ್ ಡಿಪೋ, ತೋಟಗಾರಿಕೆ ಪಾರ್ಕ್ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳು ಟೆಂಡರ್ ಹಂತದಲ್ಲಿವೆ. ಸಾಂಸ್ಕೃತಿಕ ಭವನಕ್ಕೆ ₹2 ಕೋಟಿ ಅನುದಾನ ನೀಡಲಾಗಿದೆ ಎಂದು ಹೇಳಿದರು.
ತಾಲೂಕಿನಲ್ಲಿ ಪ್ರಜಾಸೌಧ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಅಗ್ನಿಶಾಮಕ ದಳ ಕಚೇರಿ, ಬಸ್ ಡಿಪೋ, ತೋಟಗಾರಿಕೆ ಪಾರ್ಕ್ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳು ಟೆಂಡರ್ ಹಂತದಲ್ಲಿವೆ. ಸಾಂಸ್ಕೃತಿಕ ಭವನಕ್ಕೆ ₹2 ಕೋಟಿ ಅನುದಾನ ನೀಡಲಾಗಿದೆ ಎಂದು ಹೇಳಿದರು.
