LOCAL NEWS : “ಕುಕನೂರ| 2025ನೇ ಸಾಲಿನ ಎನ್‌ಟಿಇಪಿ ಕಾರ್ಯಕ್ರಮ : ಜಗನ್ನಾಥ ಜ್ಯೋತಿ, ಶಿವಣ್ಣ ಮದರಿಗೆ ಉತ್ತಮ ಸಾಧನೆ ಪ್ರಶಸ್ತಿ”
• ಸೆಕ್ಯುಲರ್ ವಾಯ್ಸ್ ನ್ಯೂಸ್ ಕುಕನೂರು:
ಜಿಲ್ಲಾ ಆಡಳಿತ ಕೊಪ್ಪಳ , ಜಿಲ್ಲಾ ಪಂಚಾಯತ್ ಕೊಪ್ಪಳ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಮಂಗಳವಾರ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ 2025ನೇ ಸಾಲಿನ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ (NTEP) ಅಡಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಕುಕನೂರು ಆರೋಗ್ಯ ನಿರೀಕ್ಷಣಾಧಿಕಾರಿ ಜಗನ್ನಾಥ ಜ್ಯೋತಿ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಕೀಯ ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿ ಶಿವಣ್ಣ ಮದರಿ ಅವರನ್ನು ಗೌರವಿಸಿ ಪ್ರಶಸ್ತಿ ವಿತರಿಸಲಾಯಿತು.
ಈ ಪ್ರಶಸ್ತಿ ಪ್ರದಾನವನ್ನು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಶಶಿಧರ ಮತ್ತು ಕೊಪ್ಪಳ ಡಿ.ಎಚ್.ಓ ಟಿ. ಲಿಂಗರಾಜ್ ಅವರು ವಿತರಸಿ ಗೌರವಿಸಿದರು.
ಕುಕನೂರು ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ. ರಾಮಕೃಷ್ಣ ರೆಡ್ಡಿ ಹಾಗೂ ಆಸ್ಪತ್ರೆ ಸಿಬ್ಬಂದಿ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ವೈದ್ಯಕೀಯ ಕ್ಷೇತ್ರದ ಅಧಿಕಾರಿಗಳು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಲ್ಯಾಬ್ ಟೆಕ್ನಿಷಿಯನ್ ಆಗಿ ಮಾಡಿದ ಪರಿಶ್ರಮಕ್ಕೆ ಈ ಪ್ರಶಸ್ತಿ ಸಿಕ್ಕಿದ್ದು ಸಂತೋಷವಾಗಿದೆ. ಇದು ನನ್ನೊಂದರ ಸಾಧನೆ ಅಲ್ಲ, ನಮ್ಮ ತಂಡದ ಸಮೂಹ ಪ್ರಯತ್ನದ ಫಲ. ಕ್ಷಯರೋಗ ಪತ್ತೆ, ಪರೀಕ್ಷೆ ಹಾಗೂ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಸೇವೆ ಸಲ್ಲಿಸುತ್ತೇನೆ”
– ಶಿವಣ್ಣ ಮದರಿ, ಲ್ಯಾಬ್ ಟೆಕ್ನಿಷಿಯನ್, ಸಮುದಾಯ ಆರೋಗ್ಯ ಕೇಂದ್ರ, ಕುಕನೂರು