LOCAL EXPRESS : “ವಿಜಯನಗರ| ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ : ಏ.10ರಂದು“ನಮ್ಮೂರ ಶಾಲೆ ಉಳಿಸಲು ಬೆಂಗಳೂರನಲ್ಲಿ ರಾಜ್ಯಮಟ್ಟದ ಸಮಾವೇಶ”

Contents
LOCAL EXPRESS : “ವಿಜಯನಗರ| ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ : ಏ.10ರಂದು“ನಮ್ಮೂರ ಶಾಲೆ ಉಳಿಸಲು ಬೆಂಗಳೂರನಲ್ಲಿ ರಾಜ್ಯಮಟ್ಟದ ಸಮಾವೇಶ”• ಸೆಕ್ಯುಲರ್ ವಾಯ್ಸ್ ನ್ಯೂಸ್ ವಿಜಯನಗರ :ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಏಪ್ರಿಲ್ 10ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಅನ್ನು ವಿಜಯನಗರ ಜಿಲ್ಲಾ ಮಟ್ಟದ ಶಿಕ್ಷಣ ಉಳಿಸಿ ಸಮಿತಿಯ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು.ಸಭೆಯನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಘಟಕದ ಅಧ್ಯಕ್ಷ ರವಿಕಿರಣ್ ಜೆ.ಪಿ. ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಹೆಸರಿನಲ್ಲಿ ರಾಜ್ಯದಲ್ಲಿ ಸುಮಾರು 40 ಸಾವಿರ ಸರ್ಕಾರಿ ಶಾಲೆಗಳು ಜಿಲ್ಲೆಯಲ್ಲಿ 700ಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚುವ ಯೋಜನೆ ಸರ್ಕಾರ ಹೊಂದಿದೆ.ಈ ನೀತಿಗೆ ವಿರೋಧವಾಗಿ ಎಐಡಿಎಸ್ಓ ನೇತೃತ್ವದಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಗಳ ಮೂಲಕ ಹೋರಾಟ ನಡೆಯುತ್ತಿದೆ ಎಂದರು.“ನಮ್ಮೂರ ಶಾಲೆ ಉಳಿಸಿ” ಎಂಬ ಘೋಷಣೆಯೊಂದಿಗೆ ಹಳ್ಳಿ ಮಟ್ಟದಿಂದ ತಾಲೂಕು ಹಾಗೂ ಜಿಲ್ಲಾ ಮಟ್ಟದ ಪ್ರತಿಭಟನೆಗಳು ಈಗಾಗಲೇ ನಡೆದಿವೆ. ಈ ಹೋರಾಟದ ಮುಂದುವರಿಕೆಯಾಗಿ, ಕೆಪಿಎಸ್ ಯೋಜನೆ ಕೈಬಿಡಬೇಕು ಎಂಬ ಧ್ವನಿಯನ್ನು ರಾಜ್ಯ ರಾಜಧಾನಿಯಲ್ಲಿ ಮೊಳಗಿಸಲು ಏಪ್ರಿಲ್ 10ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಸಮಾವೇಶ ಆಯೋಜಿಸಲಾಗಿದೆ ಎಂದು ತಿಳಿಸಿದರು.ಈ ಸಮಾವೇಶದಲ್ಲಿ ವಿಜಯನಗರ ಜಿಲ್ಲೆಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಕರೆ ನೀಡಿದರು.ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಉಮಾದೇವಿ, ಪಂಪಾಪತಿ, ಪ್ರಕಾಶ್ ನಾಯಕ್, ಪಾಲಾಕ್ಷ ಕೆ., ಶ್ರೀನಿವಾಸ್ ಡಿ. ಉಪಸ್ಥಿತರಿದ್ದರು.
