LOCAL NEWS : ” ಕುಕನೂರ| ಕಾನಿಪ ಧ್ವನಿ ಸಂಘದಿಂದ ಪತ್ರಿಕಾ ದಿನ| ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರವಿರಲಿ: ಬಿಇಒ ಅಶೋಕ ಗೌಡರ್ “

Contents
LOCAL NEWS : ” ಕುಕನೂರ| ಕಾನಿಪ ಧ್ವನಿ ಸಂಘದಿಂದ ಪತ್ರಿಕಾ ದಿನ| ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರವಿರಲಿ: ಬಿಇಒ ಅಶೋಕ ಗೌಡರ್ “• ಸೆಕ್ಯುಲರ್ ವಾಯ್ಸ್ ನ್ಯೂಸ್ ಕುಕನೂರ: ಪಕ್ಷಪಾತವಿಲ್ಲದೆ, ಪ್ರಾಣದ ಹಂಗನ್ನೂ ತೊರೆದು ನೈಜ ಸುದ್ದಿಯನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಪತ್ರಕರ್ತರ ಪಾತ್ರ ಸಮಾಜದಲ್ಲಿ ಅತ್ಯಂತ ಮಹತ್ವದ್ದಾಗಿದೆ. ಪತ್ರಿಕೋದ್ಯಮವು ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಜೊತೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಸುಳ್ಳು ಸುದ್ದಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು ಎಂದು ಯಲಬುರ್ಗಾ ಬಿಇಒ ಅಶೋಕ ಗೌಡ್ರು ಹೇಳಿದರು.ಅವರು ತಾಲ್ಲೂಕಿನ ಇಟಗಿ ಗ್ರಾಮದ ಪಿಎಂಶ್ರೀ ಆದರ್ಶ ವಿದ್ಯಾಲಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಬೆಂಗಳೂರು, ತಾಲೂಕು ಸಮಿತಿ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯನ್ನು ಪತ್ರಿಕಾ ರಂಗದ ದಿಗ್ಗಜ ಡಿವಿಜಿ ಅವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ, ಬಳಿಕ ಸಸಿಗಳಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಭೂಕಂಪ, ಯುದ್ಧ, ಚಂಡಮಾರುತ, ಅಪಘಾತ, ಅಪರಾಧ, ರಾಜಕೀಯ ಹಾಗೂ ಸಾಮಾಜಿಕ ಬೆಳವಣಿಗೆಗಳಂತಹ ತಾಜಾ ಸುದ್ದಿಗಳನ್ನು ಜನರಿಗೆ ತ್ವರಿತವಾಗಿ ತಲುಪಿಸುವಲ್ಲಿ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿಯೂ ಜೀವದ ಹಂಗನ್ನು ಲೆಕ್ಕಿಸದೆ ಕರ್ತವ್ಯ ನಿರ್ವಹಿಸಿ ಜನರಿಗೆ ನಿಖರ ಮಾಹಿತಿಯನ್ನು ತಲುಪಿಸಿದ ಹೆಗ್ಗಳಿಕೆ ಪತ್ರಕರ್ತರದ್ದಾಗಿದೆ ಎಂದು ಹೇಳಿದರು.
ಪ್ರತಿಯೊಬ್ಬರೂ ಮನೆಗೆ ದಿನಪತ್ರಿಕೆ ತರಿಸಿ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಮೊಬೈಲ್ ಚಟಕ್ಕೆ ಬಲಿಯಾಗದೆ ಓದಿನತ್ತ ಹೆಚ್ಚಿನ ಗಮನ ಹರಿಸುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಪ್ರಿಂಟ್ ಮೀಡಿಯಾ ಹಾಗೂ ಎಲೆಕ್ಟ್ರಾನಿಕ್ ಮೀಡಿಯಾ ಸಮಾಜಕ್ಕೆ ನಿಖರ ಮಾಹಿತಿ ತಲುಪಿಸುವುದು, ಜನಜಾಗೃತಿ ಮೂಡಿಸುವುದು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ತಿಳಿಸಿದರು.“ವಿಜ್ಞಾನ ಮತ್ತು ತಂತ್ರಜ್ಞಾನದ ಯುಗದಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ ವ್ಯಾಪಕವಾಗಿ ಹೆಚ್ಚಿದ್ದು, ಮಾಹಿತಿ ಕ್ಷಣಾರ್ಧದಲ್ಲಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಪೊಲೀಸರು ಮತ್ತು ಪತ್ರಕರ್ತರ ಕೆಲಸ ಮತ್ತಷ್ಟು ಸವಾಲಿನಿಂದ ಕೂಡಿದೆ. ಜೀವದ ಹಂಗನ್ನೂ ತೊರೆದು, ಯಾವುದೇ ಒತ್ತಡಗಳಿಗೆ ಮಣಿಯದೆ ಸತ್ಯವನ್ನು ಜನರಿಗೆ ತಲುಪಿಸುವ ನಿಮ್ಮ ನಿಷ್ಪಕ್ಷಪಾತ ಸೇವೆ ನಿಜಕ್ಕೂ ಶ್ಲಾಘನೀಯ.
ಹಲವು ಪ್ರಕರಣಗಳಲ್ಲಿ ತನಿಖೆಯ ಹಂತದಲ್ಲಿ ಪತ್ರಕರ್ತರು ನೀಡುವ ಮಾಹಿತಿ ಹಾಗೂ ಸಾರ್ವಜನಿಕರಲ್ಲಿ ಮೂಡಿಸುವ ಜಾಗೃತಿ ಪೊಲೀಸ್ ಇಲಾಖೆಯ ಕಾರ್ಯಕ್ಕೆ ಸಹಕಾರಿಯಾಗುತ್ತದೆ. ಮಾಧ್ಯಮವು ಸದಾ ಸತ್ಯ, ನ್ಯಾಯ ಮತ್ತು ಧರ್ಮದ ಪರವಾಗಿ ನಿಲ್ಲಲಿ . ಪತ್ರಕರ್ತರ ಸುರಕ್ಷತೆ ಮತ್ತು ಅಗತ್ಯ ಸಹಕಾರಕ್ಕೆ ಪೊಲೀಸ್ ಇಲಾಖೆ ಸದಾ ಬದ್ಧವಾಗಿದೆ.”
– ಎಸ್.ಪಿ.ನಾಯಕ್, ಪಿಎಸ್ಐ, ಕುಕನೂರು ಪೊಲೀಸ್ ಠಾಣೆ.
—————————————————————” ಮಂಗಳೂರು ಸಮಾಚಾರ ಪತ್ರಿಕೆಯಿಂದ ಆರಂಭಗೊಂಡ ಕನ್ನಡ ಪತ್ರಿಕೋದ್ಯಮವು ಅನೇಕ ಸವಾಲುಗಳನ್ನು ಎದುರಿಸುತ್ತಾ ಸಮಾಜಮುಖಿ ಮೌಲ್ಯಗಳನ್ನು ಬೆಳೆಸಿದೆ. ಹಿರಿಯ ಪತ್ರಕರ್ತರ ನಿಷ್ಠೆ, ಪರಿಶ್ರಮ ಮತ್ತು ಸಮಾಜಮುಖಿ ಬರಹಗಳು ಜನಜಾಗೃತಿ ಮೂಡಿಸಿ ಸಾಮಾಜಿಕ ಬದಲಾವಣೆಗೆ ಕಾರಣವಾಗಿವೆ.
ಪತ್ರಿಕೆಗಳು ಕೇವಲ ಸುದ್ದಿಗಳನ್ನು ಪ್ರಕಟಿಸುವ ಮಾಧ್ಯಮವಲ್ಲ; ಸಮಾಜದ ಅಂಕುಡೊಂಕುಗಳನ್ನು ತಿದ್ದುವುದು, ಸರ್ಕಾರದ ಲೋಪದೋಷಗಳನ್ನು ಬೆಳಕಿಗೆ ತರುವುದು ಹಾಗೂ ಜನಸಾಮಾನ್ಯರ ಧ್ವನಿಯಾಗಿ ಕಾರ್ಯನಿರ್ವಹಿಸುವ ಹೊಣೆಗಾರಿಕೆಯನ್ನೂ ಹೊಂದಿವೆ.”
– ಮುರಳಿಧರರಾವ್ ಕುಲಕರ್ಣಿ, ಗ್ರೇಡ್–2 ತಹಸೀಲ್ದಾರ್, ಕುಕನೂರ
———————————————————————–ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ ಕೊನಾರಿ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ಪತ್ರಿಕೋದ್ಯಮ ಬೆಳೆದು ಬಂದ ಹಾದಿ, ಅದರ ಸಾಮಾಜಿಕ ಹೊಣೆಗಾರಿಕೆ ಹಾಗೂ ಇಂದಿನ ಬೆಳವಣಿಗೆಗಳ ಕುರಿತು ವಿವರಿಸಿದರು.ಕಾರ್ಯಕ್ರಮದಲ್ಲಿ ಕಕಾನಿಪ ಧ್ವನಿ ಜಿಲ್ಲಾ ಘಟಕದ ಅಧ್ಯಕ್ಷ ಸುನೀಲಕುಮಾರ ಮಠದ, ತಾಲೂಕು ಗೌರವಾಧ್ಯಕ್ಷ ಮಹೇಶ ಕಲ್ಮಠ, ಹಿರಿಯ ಪತ್ರಕರ್ತರಾದ ಶಿವಪ್ಪಯ್ಯ ಮಠ, ಶರಣಬಸಪ್ಪ ಕೆ. ದಾನಕೈ ಸೇರಿದಂತೆ ತಾಲೂಕು ಘಟಕದ ಅಧ್ಯಕ್ಷ ಚಂದ್ರು ಆರ್. ಭಾನಾಪುರ ಅಧ್ಯಕ್ಷತೆ ವಹಿಸಿದ್ದರು. ಯಲಬುರ್ಗಾ ತಾಲೂಕು ಘಟಕದ ಅಧ್ಯಕ್ಷ ಶಿವಮೂರ್ತಿ ಇಟಗಿ, ಪಿಎಂಶ್ರೀ ಆದರ್ಶ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸಂತೋಷಿಕುಮಾರಿ, ಪಿಯು ಕಾಲೇಜಿನ ಪ್ರಾಂಶುಪಾಲ ಬೀರಪ್ಪ ಕಾನಕುಡಕಿ ಹಾಗೂ ಶಿಕ್ಷಕಿ ಬಸಮ್ಮ ಮೇಟಿ ಮಾತನಾಡಿದರು.ಕಾರ್ಯಕ್ರಮದ ಅಂಗವಾಗಿ ಶಾಲೆಯ 150 ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಪೆನ್ನುಗಳನ್ನು ವಿತರಿಸಲಾಯಿತು.ಸಂಘದ ಉಪಾಧ್ಯಕ್ಷ ಮುರಾರಿ ಭಜಂತ್ರಿ ಪ್ರಾರ್ಥನಾ ಗೀತೆ ಹಾಡಿ ಕಾರ್ಯಕ್ರಮ ನಿರೂಪಿಸಿದರು. ಖಜಾಂಚಿ ವೀರಯ್ಯ ವಿ. ಹಿರೇಮಠ ಸ್ವಾಗತಿಸಿದರು. ಸಹ ಕಾರ್ಯದರ್ಶಿ ಭೀಮಾಶಂಕರ ಪಾಣೇಗಾಂವ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳಾದ ಈರಯ್ಯ ಕುರ್ತುಕೋಟಿ, ಮುತ್ತಯ್ಯ ತೊಂಟದಾರ್ಯಮಠ, ಸಲೀಮ್ ಅಮರಾವತಿ, ಅಲ್ಲಾಬೇಗಂ ಅಮರಾವತಿ, ಮಲ್ಲಯ್ಯ ಗದುಗಿನ, ವಿಶ್ವನಾಥ ಪಟ್ಟಣಶೆಟ್ಟಿ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
• ಸೆಕ್ಯುಲರ್ ವಾಯ್ಸ್ ನ್ಯೂಸ್ ಕುಕನೂರ:
ಪಕ್ಷಪಾತವಿಲ್ಲದೆ, ಪ್ರಾಣದ ಹಂಗನ್ನೂ ತೊರೆದು ನೈಜ ಸುದ್ದಿಯನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಪತ್ರಕರ್ತರ ಪಾತ್ರ ಸಮಾಜದಲ್ಲಿ ಅತ್ಯಂತ ಮಹತ್ವದ್ದಾಗಿದೆ. ಪತ್ರಿಕೋದ್ಯಮವು ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಜೊತೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಸುಳ್ಳು ಸುದ್ದಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು ಎಂದು ಯಲಬುರ್ಗಾ ಬಿಇಒ ಅಶೋಕ ಗೌಡ್ರು ಹೇಳಿದರು.
ಅವರು ತಾಲ್ಲೂಕಿನ ಇಟಗಿ ಗ್ರಾಮದ ಪಿಎಂಶ್ರೀ ಆದರ್ಶ ವಿದ್ಯಾಲಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಬೆಂಗಳೂರು, ತಾಲೂಕು ಸಮಿತಿ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯನ್ನು ಪತ್ರಿಕಾ ರಂಗದ ದಿಗ್ಗಜ ಡಿವಿಜಿ ಅವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ, ಬಳಿಕ ಸಸಿಗಳಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭೂಕಂಪ, ಯುದ್ಧ, ಚಂಡಮಾರುತ, ಅಪಘಾತ, ಅಪರಾಧ, ರಾಜಕೀಯ ಹಾಗೂ ಸಾಮಾಜಿಕ ಬೆಳವಣಿಗೆಗಳಂತಹ ತಾಜಾ ಸುದ್ದಿಗಳನ್ನು ಜನರಿಗೆ ತ್ವರಿತವಾಗಿ ತಲುಪಿಸುವಲ್ಲಿ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿಯೂ ಜೀವದ ಹಂಗನ್ನು ಲೆಕ್ಕಿಸದೆ ಕರ್ತವ್ಯ ನಿರ್ವಹಿಸಿ ಜನರಿಗೆ ನಿಖರ ಮಾಹಿತಿಯನ್ನು ತಲುಪಿಸಿದ ಹೆಗ್ಗಳಿಕೆ ಪತ್ರಕರ್ತರದ್ದಾಗಿದೆ ಎಂದು ಹೇಳಿದರು.
ಪ್ರತಿಯೊಬ್ಬರೂ ಮನೆಗೆ ದಿನಪತ್ರಿಕೆ ತರಿಸಿ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಮೊಬೈಲ್ ಚಟಕ್ಕೆ ಬಲಿಯಾಗದೆ ಓದಿನತ್ತ ಹೆಚ್ಚಿನ ಗಮನ ಹರಿಸುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಪ್ರಿಂಟ್ ಮೀಡಿಯಾ ಹಾಗೂ ಎಲೆಕ್ಟ್ರಾನಿಕ್ ಮೀಡಿಯಾ ಸಮಾಜಕ್ಕೆ ನಿಖರ ಮಾಹಿತಿ ತಲುಪಿಸುವುದು, ಜನಜಾಗೃತಿ ಮೂಡಿಸುವುದು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ತಿಳಿಸಿದರು.
ಪ್ರತಿಯೊಬ್ಬರೂ ಮನೆಗೆ ದಿನಪತ್ರಿಕೆ ತರಿಸಿ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಮೊಬೈಲ್ ಚಟಕ್ಕೆ ಬಲಿಯಾಗದೆ ಓದಿನತ್ತ ಹೆಚ್ಚಿನ ಗಮನ ಹರಿಸುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಪ್ರಿಂಟ್ ಮೀಡಿಯಾ ಹಾಗೂ ಎಲೆಕ್ಟ್ರಾನಿಕ್ ಮೀಡಿಯಾ ಸಮಾಜಕ್ಕೆ ನಿಖರ ಮಾಹಿತಿ ತಲುಪಿಸುವುದು, ಜನಜಾಗೃತಿ ಮೂಡಿಸುವುದು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ತಿಳಿಸಿದರು.
“ವಿಜ್ಞಾನ ಮತ್ತು ತಂತ್ರಜ್ಞಾನದ ಯುಗದಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ ವ್ಯಾಪಕವಾಗಿ ಹೆಚ್ಚಿದ್ದು, ಮಾಹಿತಿ ಕ್ಷಣಾರ್ಧದಲ್ಲಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಪೊಲೀಸರು ಮತ್ತು ಪತ್ರಕರ್ತರ ಕೆಲಸ ಮತ್ತಷ್ಟು ಸವಾಲಿನಿಂದ ಕೂಡಿದೆ. ಜೀವದ ಹಂಗನ್ನೂ ತೊರೆದು, ಯಾವುದೇ ಒತ್ತಡಗಳಿಗೆ ಮಣಿಯದೆ ಸತ್ಯವನ್ನು ಜನರಿಗೆ ತಲುಪಿಸುವ ನಿಮ್ಮ ನಿಷ್ಪಕ್ಷಪಾತ ಸೇವೆ ನಿಜಕ್ಕೂ ಶ್ಲಾಘನೀಯ.
ಹಲವು ಪ್ರಕರಣಗಳಲ್ಲಿ ತನಿಖೆಯ ಹಂತದಲ್ಲಿ ಪತ್ರಕರ್ತರು ನೀಡುವ ಮಾಹಿತಿ ಹಾಗೂ ಸಾರ್ವಜನಿಕರಲ್ಲಿ ಮೂಡಿಸುವ ಜಾಗೃತಿ ಪೊಲೀಸ್ ಇಲಾಖೆಯ ಕಾರ್ಯಕ್ಕೆ ಸಹಕಾರಿಯಾಗುತ್ತದೆ. ಮಾಧ್ಯಮವು ಸದಾ ಸತ್ಯ, ನ್ಯಾಯ ಮತ್ತು ಧರ್ಮದ ಪರವಾಗಿ ನಿಲ್ಲಲಿ . ಪತ್ರಕರ್ತರ ಸುರಕ್ಷತೆ ಮತ್ತು ಅಗತ್ಯ ಸಹಕಾರಕ್ಕೆ ಪೊಲೀಸ್ ಇಲಾಖೆ ಸದಾ ಬದ್ಧವಾಗಿದೆ.”
– ಎಸ್.ಪಿ.ನಾಯಕ್, ಪಿಎಸ್ಐ, ಕುಕನೂರು ಪೊಲೀಸ್ ಠಾಣೆ.
—————————————————————
” ಮಂಗಳೂರು ಸಮಾಚಾರ ಪತ್ರಿಕೆಯಿಂದ ಆರಂಭಗೊಂಡ ಕನ್ನಡ ಪತ್ರಿಕೋದ್ಯಮವು ಅನೇಕ ಸವಾಲುಗಳನ್ನು ಎದುರಿಸುತ್ತಾ ಸಮಾಜಮುಖಿ ಮೌಲ್ಯಗಳನ್ನು ಬೆಳೆಸಿದೆ. ಹಿರಿಯ ಪತ್ರಕರ್ತರ ನಿಷ್ಠೆ, ಪರಿಶ್ರಮ ಮತ್ತು ಸಮಾಜಮುಖಿ ಬರಹಗಳು ಜನಜಾಗೃತಿ ಮೂಡಿಸಿ ಸಾಮಾಜಿಕ ಬದಲಾವಣೆಗೆ ಕಾರಣವಾಗಿವೆ.
ಪತ್ರಿಕೆಗಳು ಕೇವಲ ಸುದ್ದಿಗಳನ್ನು ಪ್ರಕಟಿಸುವ ಮಾಧ್ಯಮವಲ್ಲ; ಸಮಾಜದ ಅಂಕುಡೊಂಕುಗಳನ್ನು ತಿದ್ದುವುದು, ಸರ್ಕಾರದ ಲೋಪದೋಷಗಳನ್ನು ಬೆಳಕಿಗೆ ತರುವುದು ಹಾಗೂ ಜನಸಾಮಾನ್ಯರ ಧ್ವನಿಯಾಗಿ ಕಾರ್ಯನಿರ್ವಹಿಸುವ ಹೊಣೆಗಾರಿಕೆಯನ್ನೂ ಹೊಂದಿವೆ.”
– ಮುರಳಿಧರರಾವ್ ಕುಲಕರ್ಣಿ, ಗ್ರೇಡ್–2 ತಹಸೀಲ್ದಾರ್, ಕುಕನೂರ
———————————————————————–
