🔴LOCAL NEWS : “ಯಾದಗಿರಿ | ರೈತರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಬಾಬುರಾವ್ ಚಿಂಚನಸೂರ; ಅಧಿಕಾರಿಗಳಿಗೆ ಕೂಡಲೇ ಕ್ರಮಕ್ಕೆ ಸೂಚನೆ*

Contents
🔴LOCAL NEWS : “ಯಾದಗಿರಿ | ರೈತರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಬಾಬುರಾವ್ ಚಿಂಚನಸೂರ; ಅಧಿಕಾರಿಗಳಿಗೆ ಕೂಡಲೇ ಕ್ರಮಕ್ಕೆ ಸೂಚನೆ*• ಸೆಕ್ಯುಲರ್ ವಾಯ್ಸ್ ನ್ಯೂಸ್ ಗುರುಮೀಟ್ಠಕಲ್: ಯಾದಗಿರಿ ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದ ಕೋಟಗೇರಿ ಗ್ರಾಮದಲ್ಲಿ ಮಳೆಯ ಕೊರತೆ, ಬರಗಾಲದ ಪರಿಸ್ಥಿತಿ ಹಾಗೂ ವಿದ್ಯುತ್ ಸಮಸ್ಯೆಯಿಂದ ರೈತರು ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ಮಾಜಿ ಸಚಿವರು ಹಾಗೂ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.ರೈತರ ಸಮಸ್ಯೆಯನ್ನು ಆಲಿಸಿದ ಬಾಬುರಾವ್ ಚಿಂಚನಸೂರ ಅವರು ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜೆಇ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ರೈತರಿಗೆ ಆಗುತ್ತಿರುವ ತೊಂದರೆಯನ್ನು ಶೀಘ್ರದಲ್ಲೇ ಪರಿಹರಿಸುವಂತೆ ಸೂಚನೆ ನೀಡಿದರು. ರೈತರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ವಿಳಂಬ ಮಾಡದೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಬಾಬುರಾವ್ ಚಿಂಚನಸೂರ ಅವರನ್ನು ಸನ್ಮಾನಿಸಲು ಮುಂದಾದರು. ಆದರೆ, ತಮ್ಮನ್ನು ಸನ್ಮಾನಿಸಲು ಬಂದ ಅಭಿಮಾನಿಗಳನ್ನೇ ಚಿಂಚನಸೂರ ಅವರು ಶಾಲು ಹೊದಿಸಿ ಗೌರವಿಸಿದ್ದು ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಯಿತು. ಈ ನಡೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವೆಂಕಟೇಶ್ ತಳವಾರ (ಕೋಟಗೇರಿ), ಭೀಮರಾಯ ನಾಯಕ್, ಮಹೇಶ್, ಭೀಮರಾಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
