BREAKING NEWS : “ಕೊಪ್ಪಳ |ರಸ್ತೆ ಬದಿಯಲ್ಲಿ ನವಜಾತ ಗಂಡು ಮಗು ಪತ್ತೆ; ಜಿಲ್ಲಾ ಆಸ್ಪತ್ರೆಗೆ ದಾಖಲು!”

By admin

🔴  BREAKING NEWS : “ಕೊಪ್ಪಳ |ರಸ್ತೆ ಬದಿಯಲ್ಲಿ ನವಜಾತ ಗಂಡು ಮಗು ಪತ್ತೆ; ಜಿಲ್ಲಾ ಆಸ್ಪತ್ರೆಗೆ ದಾಖಲು!”

• ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌ ಕೊಪ್ಪಳ : 

ನಗರದ ಶ್ರೀಶೈಲ ನಗರದ 3ನೇ ವಾರ್ಡ್‌ನಲ್ಲಿ ರಸ್ತೆ ಬದಿಯಲ್ಲಿ ನವಜಾತ ಗಂಡು ಮಗುವನ್ನು ಯಾರೋ ಬಿಟ್ಟು ಹೋಗಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.

ರಸ್ತೆ ಬದಿಯಲ್ಲಿ ಮಗು ಅಳುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಮಗುವನ್ನು ರಕ್ಷಿಸಿ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.

ಈ ಕುರಿತು ಕಿಮ್ಸ್ ಆಡಳಿತ ಮಂಡಳಿ ಸದಸ್ಯ ಸಲೀಂ ಅಳವಂಡಿ ಮಾತನಾಡಿ, “ಮಗು ಸುರಕ್ಷಿತವಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಮಗು ಯಾರಿಗೆ ಸೇರಿದ್ದು ಹಾಗೂ ಯಾವ ಕಾರಣಕ್ಕಾಗಿ ರಸ್ತೆ ಬದಿಯಲ್ಲಿ ಬಿಟ್ಟು ಹೋಗಲಾಗಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ